ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಕಳೆದ ಅಂಕಣದಲ್ಲಿ ನಾವು 2023-24 ನೇ ಸಾಲಿನಲ್ಲಿ ಬೆಳೆ ವಿಮೆಗೆ ಅರ್ಜಿ ಸಲ್ಲಿಸಿದ ರೈತರಿಗೆ ಇತ್ತಿಚೆಗೆ ರಾಜ್ಯ ಸರ್ಕಾರ ಆ ಬೆಳೆ ವಿಮೆ ಹಣ ಬಿಡುಗಡೆ ಮಾಡಿದ್ದರ ಬಗ್ಗೆ ತಿಳಿಸಿದ್ದೇವೆ.
Thank you for reading this post, don't forget to subscribe!ಇವತ್ತಿನ ಅಂಕಣದಲ್ಲಿ ನಾವು ಈ ಸಾಲಿನ ಅಂದರೆ 2024-25 ನೇ ಸಾಲಿನ ಬೆಳೆ ವಿಮೆಗೆ ಲಭ್ಯವಿರುವ ಬೆಳೆಗಳು ಯಾವುವು ಹಾಗೂ ಅವುಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ. ಆದ್ದರಿಂದ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ಇದನ್ನೂ ಓದಿ: ಬೆಳೆ ಪರಿಹಾರ ಹಣ : ಸರ್ವೇ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !
ಬೆಳೆ ವಿಮೆ ಎಂದರೇನು?
ಆತ್ಮೀಯ ಓದುಗರೇ, ಅತಿವೃಷ್ಟಿ , ಅನಾವೃಷ್ಟಿ,ಭೂಕಂಪ, ಸುನಾಮಿ ಇದೇ ಮುಂತಾದ ಪ್ರಕೃತಿ ವಿಕೋಪಗಳಿಗೆ ಸಿಲುಕಿ ಅತೀ ಹೆಚ್ಚು ಸಂಕಷ್ಟಕ್ಕೆ ಒಳಗಾಗುವ ಕ್ಷೇತ್ರವೆಂದರೆ ಅದು ಕೃಷಿ. ಇನ್ನು ಭಾರತದಲ್ಲಿ ಸುಮಾರು ಶೇಕಡಾ 60 ರಷ್ಟು ಕುಟುಂಬಗಳು ಈ ಕೃಷಿಯನ್ನೇ ನಂಬಿ ಬದುಕುತ್ತಿವೆ. ಆದರೆ ಮೇಲೆ ಸೂಚಿಸಿದ ಪ್ರಕೃತಿ ವಿಕೋಪಗಳಾದಾಗ ಇಂತಹ ರೈತರ ಬದುಕು ತುಂಬಾ ದುಸ್ತರವಾಗುತ್ತದೆ. ಸಾಲ ಶೂಲ ಮಾಡಿ ಬಿತ್ತಿ ಬೆಳೆದ ಬೆಳೆ ಹೀಗೆ ಪ್ರಕೃತಿ ವಿಕೋಪಕ್ಕೆ ಸಿಲುಕಿದ ಮರು ಕ್ಷಣವೇ ಎಷ್ಟೊ ರೈತ ಕುಟುಂಬಗಳು ಸಾಲದ ಹೊರೆ ತಾಳದೇ ಬೀದಿಗೆ ಬೀಳುತ್ತವೆ.
ಇದನ್ನೂ ಓದಿ: ಬೆಳೆ ಪರಿಹಾರ ಹಣ : ಮೊಬೈಲ್ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !
ಇಂತಹ ಸಂದರ್ಭದಲ್ಲಿ ರೈತರಿಗೆ ನೆರವಾಗುವ ದೃಷ್ಟಿಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು 50:50 ಅನುಪಾತದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಜಾರಿಗೆ ತಂದಿವೆ. ಈ ಯೋಜನೆಯ ಅಡಿಯಲ್ಲಿ ಪ್ರಕೃತಿ ವಿಕೋಪಗಳಿಗೆ ಸಿಲುಕಿ ಬೆಳೆ ಹಾನಿಯಾದ ರೈತರಿಗೆ ಆರ್ಥಿಕವಾಗಿ ಧನ ಸಹಾಯವನ್ನು ನೀಡಲಾಗುತ್ತಿದೆ.
ಇದನ್ನೂ ಓದಿ: ಬೆಳೆ ಪರಿಹಾರ ಹಣ : FID ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !
ಹಾಗಾಗಿ ಈ ಯೋಜನೆಯ ಲಾಭವನ್ನು ಪಡೆಯಬೇಕಾದರೆ ರೈತರು ಮೊದಲು ರಾಜ್ಯ ಸರಕಾರದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ, ಈ ಸಾಲಿನ ಬೆಳೆ ವಿಮೆಗೆ ಅರ್ಜಿ ಸಲ್ಲಿಸಬೇಕು. ನಿಮ್ಮ ಜಿಲ್ಲೆಯ ಯಾವ ಬೆಳೆಗೆ ಎಷ್ಟು ವಿಮೆ ಮಾಡಿಸಬೇಕು ಹಾಗೂ ಅರ್ಜಿ ಸಲ್ಲಿಸುವುದು ಹೇಗೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುದನ್ನು ಕೆಳಗೆ ತೋರಿಸಲಾಗಿದೆ. ತಪ್ಪದೇ ಕೊನೆಯವರೆಗೂ ಓದಿರಿ ಹಾಗೂ ಇದೇ ರೀತಿಯ ಉಪಯುಕ್ತ ಮಾಹಿತಿ ಪಡೆಯಲು ಕೆಳಗೆ ನೀಡಲಾಗಿರುವ ನಮ್ಮ WhatsApp ಗುಂಪಿಗೆ ಸೇರಿ.
ಇದನ್ನೂ ಓದಿ: ಬೆಳೆ ಪರಿಹಾರ ಹಣ: ಆಧಾರ್ ನಂಬರ್ ಹಾಕಿ ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯೇ ಎಂಬುದನ್ನ ಮೊಬೈಲ್ ನಲ್ಲೇ ಚೆಕ್ ಮಾಡಿ!
ಬೆಳೆ ವಿಮೆಗೆ ಅರ್ಜಿ ಸಲ್ಲಿಸುವುದು ಹೇಗೆ?
ಹಂತ -1) ಮೊದಲಿಗೆ ರೈತರು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://samrakshane.karnataka.gov.in/CropHome.aspx
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ವರ್ಷ 2024-25 ಹಾಕಿ, ಋತು ಆಯ್ಕೆಯನ್ನು kharif ಎಂದು ನಮೂದಿಸಿ.

ಹಂತ-3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು crop you can isure ಮೇಲೆ ಕ್ಲಿಕ್ ಮಾಡಿ.

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ, ಕೆಳಗೆ ನೀಡಲಾಗಿರುವ Dispaly ಬಟನ್ ಮೇಲೆ ಕ್ಲಿಕ್ ಮಾಡಿ.

ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ನಿಮ್ಮ ಜಿಲ್ಲೆಯಲ್ಲಿ ಈ ಸಾಲಿನ ಮುಂಗಾರು ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಯಾವ ಯಾವ ಬೆಳೆಗಳು ಇವೆ ಮತ್ತು ಬೆಳೆ ವಿಮೆ ಎಷ್ಟು ಇದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಸಿಗುತ್ತದೆ.

ಈ ರೀತಿಯಾಗಿ ನೀವು ಈ ಸಾಲಿನ ಮುಂಗಾರು ಬೆಳೆ ವಿಮೆಗೆ ಅರ್ಜಿ ಸಲ್ಲಿಸುವ ಮುನ್ನ ನಿಮ್ಮ ಜಿಲ್ಲೆಯಲ್ಲಿ ಯಾವ ಯಾವ ಬೆಳೆಗಳಿಗೆ ಬೆಳೆವಿಮೆ ಲಭ್ಯವಿದೆ ಎಂಬ ಮಾಹಿತಿಯನ್ನು ಪಡೆಯಬಹುದಾಗಿದೆ.
ಇನ್ನು ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಬಗ್ಗೆ ಹೇಳುವುದಾದರೆ, ಬೆಳೆ ವಿಮೆಯಲ್ಲಿರುವ ಪ್ರತಿ ಜಿಲ್ಲೆಯ ಬೆಳೆಗೆ ಅರ್ಜಿ ಸಲ್ಲಿಸುವ ದಿನಾಂಕ ಬೇರೆ ಬೇರೆ ಆಗಿರುತ್ತದೆ. ಉದಾಹರಣೆಗೆ ಈರುಳ್ಳಿ ಬೆಳೆ ವಿಮೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ವಿಜಯಪುರದಲ್ಲಿ ಬೇರೆ ಇದ್ದರೆ, ಬಾಗಲಕೋಟೆ ಜಿಲ್ಲೆಯಲ್ಲಿ ಬೇರೆ ಇರುತ್ತದೆ.
ಸದ್ಯ ಇರುವ ಮಾಹಿತಿ ಪ್ರಕಾರ ಯಾವ ಬೆಳೆಗೆ ಬೆಳೆ ವಿಮೆ ಮಾಡಿಸುವ ಕೊನೆಯ ದಿನಾಂಕ ಯಾವುದು ಎಂಬುದರ ಬಗ್ಗೆ ಮಾಹಿತಿ ಕೆಳಗಿದೆ ನೋಡಿ.
ಯಾವ ಬೆಳೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?
- ತೊಗರಿ – ಜುಲೈ 31
- ಹತ್ತಿ – ಜುಲೈ 31
- ಉದ್ದು – ಜುಲೈ 31
- ಭತ್ತ – ಜುಲೈ 31
- ಸೋಯಾ ಅವರೆ – ಜುಲೈ 31
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- PM Kisan: ಅನರ್ಹ ಫಲಾನುಭವಿಗಳ ಪಟ್ಟಿ ಪ್ರಕಟ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ ಜಮಾ ಆಗಿದೆ.
- ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ ಬರೋಬ್ಬರಿ ಹತ್ತು ಪಟ್ಟು ಏರಿಸಿದೆ.
- Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000 ರೂಪಾಯಿಯನ್ನು ಇಲ್ಲಿಯವರೆಗೆ ಜಮಾ ಮಾಡಿದೆ. ಇದೀಗ 16 ನೇ ಕಂತಿನ ಹಣ ಬಿಡುಗಡೆ ಮಾಡಲು ದಿನಾಂಕ ನಿರ್ಧರಿಸಿದ್ದು, ಹಂತ ಹಂತವಾಗಿ ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಆಗಲಿದೆ.
- KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.
- ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ ನೀಡಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್ ಕಾರ್ಡ (Ration Card) ತಿದ್ದುಪಡಿ ಮಾಡಲು ರಾಜ್ಯ ಸರಕಾರ ಡಿಸೆಂಬರ್ 31 ರವರೆಗೆ ಕಾಲಾವಕಾಶ ನೀಡಿತ್ತು.
- PM Awas Yojana: ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ 2.5 ಲಕ್ಷ ರೂಪಾಯಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30 ಲಕ್ಷದಿಂದ 2.50 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತದೆ. ಗ್ರಾಮೀಣ ಸಮತಟ್ಟಾದ ಪ್ರದೇಶದಲ್ಲಿರುವವರಿಗೆ 1.20 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತೆ ಮತ್ತು ಗುಡ್ಡಗಾಡು ಪ್ರದೇಶದಲ್ಲಿ ಇರುವವರಿಗೆ 1.30 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡಲಾಗುತ್ತದೆ. (PM Awas Yojana Subsidy)
- Bele Parihara List: ಹಳ್ಳಿವಾರು ಬೆಳೆ ಪರಿಹಾರ ಜಮಾ ಆಗಿರುವ ರೈತರ ಪಟ್ಟಿ ಬಿಡುಗಡೆ ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮೆಯಾದ ಅರ್ಹ ರೈತರ ಹಳ್ಳಿವಾರು ಪಟ್ಟಿ (bele parihara village wise list) ಬಿಡುಗಡೆ ಮಾಡಿದ್ದು, ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂಬುದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- Bele Parihara Payment: ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯಾ ಚೆಕ್ ಮಾಡಿ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿಅದರಂತೆ ಇದೀಗ 3 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ಬೆಳೆ ಪರಿಹಾರ ಹಣ ಹಂತ ಹಂತವಾಗಿ ಜಮಾ ಆಗಿದೆ. ಇನ್ನು ಯಾರ ಖಾತೆಗೆ ಹಣ ಜಮಾ ಆಗಿಲ್ಲವೊ ಅಂತಹ ಅರ್ಹ ರೈತರಿಗೂ ಹಣ ಜಮಾ ಆಗಲಿದೆ ಎಂದು ಕೃಷಿ ಸಚಿವರು ತಿಳಿಸಿದ್ದಾರೆ.
- ಆಧಾರ್ ಕಾರ್ಡ್ ಹೊಂದಿದವರಿಗೆ ಮಹತ್ವದ ಮಾಹಿತಿ! ಈಗಲೇ ಈ ಕೆಲಸ ಮಾಡಿ!ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು ಬಯಸುವವರ ಖಾತೆಗೆ ನೇರವಾಗಿ (dbt) ಆಧಾರ್ ಲಿಂಕ್ ಮಾಡಿ ಸಬ್ಸಿಡಿ ಅಥವಾ ಸಹಾಯಧನವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲು ಚಿಂತಿಸುತ್ತಿವೆ.