ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ಸಾಲಿನ ಮುಂಗಾರು ಮಳೆ ಅವಶ್ಯಕತೆಗಿಂತ ಹೆಚ್ಚಾಗಿ ರೈತರಿಗೆ ಸಾಕಷ್ಟು ಬೆಳೆ ಹಾನಿ ಉಂಟು ಮಾಡಿತ್ತು.
Thank you for reading this post, don't forget to subscribe!ಇನ್ನು ಮುಂಗಾರು ಮುಗಿಯಿತೆಂದು ನಿಟ್ಟುಸಿರು ಬಿಟ್ಟಿದ್ದ ರೈತರಿಗೆ ಹಿಂಗಾರು ಮಳೆ ಕೂಡ ನಿರೀಕ್ಷೆಗಿಂತ ಹೆಚ್ಚಾಗಿ ಸುರಿದು ರಾಜ್ಯದ ರೈತರಿಗೆ ತೀವ್ರ ಸಂಕಷ್ಟ ತಂದಿತು.
ಇದನ್ನೂ ಓದಿ: ಪಿಎಂ ಕಿಸಾನ್: 19 ನೇ ಕಂತಿನ ಅರ್ಹ ರೈತರ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ
ಹೀಗೆ ಅನಿರೀಕ್ಷಿತವಾಗಿ ನಿರೀಕ್ಷೆಗೂ ಮೀರಿ ಸುರಿದ ಮಳೆಯಿಂದಾಗಿ ರಾಜ್ಯಾದ್ಯಂತ ಸಾಕಷ್ಟು ರೈತರ ಬೆಳೆ ಹನಿಗೊಳಗಾಗಿದ್ದರೆ, ಇನ್ನು ಹಲವೆಡೆ ರೈತರು ಸಕಾಲದಲ್ಲಿ ಬೆಳೆ ಕಟಾವು ಮಾಡದ ಕಾರಣ ನಿರೀಕ್ಷೆಗಿಂತ ಕಡಿಮೆ ಇಳುವರಿ ಪಡೆದಿದ್ದಾರೆ.
ಹೀಗೆ ಹಿಂಗಾರು ಮಳೆಯಿಂದ ಬೆಳೆ ಹಾನಿಯಾಗಿ ಆರ್ಥಿಕವಾಗಿ ಸಂಕಷ್ಟದಲ್ಲಿ ಸಿಲುಕಿರುವ ರೈತರಿಗೆ ಇದೀಗ ರಾಜ್ಯ ಸರ್ಕಾರ ಹಿಂಗಾರು ಬೆಳೆಹಾನಿಯಾದ ಅರ್ಹ ರೈತರಿಗೆ ಬೆಳೆ ಹಾನಿ ಪರಿಹಾರ (bele hani Parihara) ನೀಡಲು ಮುಂದಾಗಿದೆ.
ಇದನ್ನೂ ಓದಿ: ಜಾಬ್ ಕಾರ್ಡ್ ಇದ್ದವರಿಗೆ ದಿನಕ್ಕೆ 316 ರೂಪಾಯಿ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ!
ಹಾಗಾದರೆ ಯಾವ ಯಾವ ರೈತರಿಗೆ ಎಷ್ಟು ಪರಿಹಾರ ಹಣ ಜಮಾ ಆಗಲಿದೆ ? ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬೆಳೆ ಹನಿ ಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಬೆಳೆ ಹಾನಿ ಪರಿಹಾರ ಎಷ್ಟು ಜಮಾ ಆಗಲಿದೆ?
ಹಿಂಗಾರು ಮಳೆಯಿಂದಾಗಿ ಬಹುತೇಕ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಬೆಳೆ ಹಾನಿ ಉಂಟಾಗಿದ್ದು, ರಾಜ್ಯ ಸರ್ಕಾರ ಇದೀಗ ಬೆಳೆ ಹಾನಿಯಾದ ಎಲ್ಲಾ ಜಿಲ್ಲೆಗಳ ವರದಿ ಸಂಗ್ರಹಿಸಿದೆ.
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ ಎಲ್ಲಾ ಸಂತ್ರಸ್ತ ತಾಲೂಕುಗಳಿಗೆ ಸುಮಾರು 120 ಕೋಟಿ ರೂಪಾಯಿ ಹಾನಿಯಾಗಿದ್ದು, ಈ ಪರಿಹಾರ (parihara) ಹಣವನ್ನು ರಾಜ್ಯ ಸರ್ಕಾರ ಈಗಾಗಲೇ ಜಮಾ ಮಾಡಿದೆ.
ಅದರಂತೆ ರಾಜ್ಯ ಸರ್ಕಾರ ನೀಡಿರುವ ಪರಿಹಾರ ಹಣವು ಅರ್ಹ ಬೆಳೆ ಹಾನಿಯಾದ ರೈತರಿಗೆ ಮಾತ್ರ ಎಕರೆಗೆ 3480 ರೂಪಾಯಿ ಹಣವನ್ನು ನೇರ ನಗದು ವರ್ಗಾವಣೆ (DBT) ಮೂಲಕ ಹಣವನ್ನು ಅರ್ಹ ರೈತರ ಖಾತೆಗೆ ಜಮಾ ಮಾಡಿದೆ. ಅಲ್ಲದೇ ಈಗಾಗಲೇ ರಾಜ್ಯ ಸರ್ಕಾರ ಅರ್ಹ ರೈತರ ಪಟ್ಟಿಯನ್ನು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ.
ಬೆಳೆ ಹಾನಿಯಾದ ಅರ್ಹ ರೈತರ ಪಟ್ಟಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ:
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://parihara.karnataka.gov.in/service87/
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ , ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ ನಂತರ ವರ್ಷ, ಋತು,ಹಾಗೂ ವಿಪತ್ತಿನ ವಿಧವನ್ನು ನಮೂದಿಸಿ Get Report ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ನಿಮ್ಮ ಗ್ರಾಮದಲ್ಲಿ ಹಿಂಗಾರು ಬೆಳೆ ಹಾನಿಯಾದ ರೈತರ ಪಟ್ಟಿ ಸಿಗುತ್ತದೆ. ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿಕೊಳ್ಳಿ.
ವಿಶೇಷ ಸೂಚನೆ: ಒಂದು ವೇಳೆ ಮೇಲಿನ ಲಿಂಕ್ ಓಪನ್ ಮಾಡಿದಾಗ No Information Found ಎಂದು ತೋರಿಸಿದರೆ ನಿಮ್ಮ ಗ್ರಾಮ್ ಯಾವುದೇ ಹಿಂಗಾರು ಬೆಳೆ ಹಾನಿಯಾಗಿಲ್ಲ ಎಂದು ಅರ್ಥ. ಒಂದು ವೇಳೆ ಆಗಿದ್ದರೂ ತಾಂತ್ರಿಕ ದೋಷದಿಂದ ಹಾಗೆ ತೋರಿಸುತ್ತದೆ.
ಈ ರೀತಿಯಾಗಿ ನೀವು ಸುಲಭವಾಗಿ ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲೇ ನಿಮ್ಮ ಹಿಂಗಾರು ಬೆಳೆ ಹಾನಿಯಾದ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಚೆಕ್ ಮಾಡಬಹುದು.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t