ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ರಾಜ್ಯ ಸರ್ಕಾರವು ರೈತರ ಇಳುವರಿ ಹೆಚ್ಚಿಸಲು ಹಲವು ರೀತಿಯ ಕ್ರಮಗಳನ್ನು ಕೈಗೊಂಡಿದೆ. ಅದರಲ್ಲಿ ಪ್ರಮುಖವಾದದ್ದು ಎಂದರೆ ಕೃಷಿಗೆ ಬೇಕಾಗುವ ಎಲ್ಲಾ ಉಪಕರಣಗಳ ಮೇಲೆ ಸಬ್ಸಿಡಿ (subsidy yojana) ನೀಡುವುದು.
Thank you for reading this post, don't forget to subscribe!ಹೌದು ರೈತ ಮಿತ್ರರೇ ರಾಜ್ಯ ಸರಕಾರವು ರೈತರಿಗೆ ಬೇಕಾಗುವ ಕೃಷಿ ಉಪಕರಣಗಳ ಹಲವಾರು ರೀತಿಯ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ ಚಟುವಟಿಕೆಗೆ ಬೇಕಾದ ಪ್ರಮುಖ ಉಪಕರಣವಾದ ಕೃಷಿ ಸ್ಪ್ರಿಂಕ್ಲರ್ ಸೆಟ್ (sprinkler subsidy) ಮೇಲೆ ಇದೀಗ ರಾಜ್ಯ ಸರ್ಕಾರ ಶೇಕಡಾ 90 ರಷ್ಟು ಸಬ್ಸಿಡಿ ನೀಡುತ್ತಿದೆ.
ಇದನ್ನೂ ಓದಿ: ಕುರಿ ಮತ್ತು ಮೇಕೆ ಸಾಕಾಣಿಕೆಗೆ 59,400 ರೂ. ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ
ರಾಜ್ಯ ಸರ್ಕಾರದ ಕೃಷಿ ಇಲಾಖೆಯ ಅಡಿಯಲ್ಲಿ ಈ ಸಬ್ಸಿಡಿ ಯೋಜನೆಯನ್ನು ನೀಡುತ್ತಿದ್ದು ಅರ್ಹ ರೈತ ಫಲಾನುಭಾವಿಗಳಿಂದ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಹಾಗಾದರೇ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ.ತಪ್ಪದೇ ಕೊನೆಯವರೆಗೂ ಓದಿರಿ
ಅರ್ಜಿ ಸಲ್ಲಿಸಲು ಯಾರು ಯಾರು ಅರ್ಹರು?
ರಾಜ್ಯ ಸರ್ಕಾರದ ಕೃಷಿ ಇಲಾಖೆಯ ವತಿಯಿಂದ ಹನಿ ನೀರಾವರಿ ಅಥವಾ ತುಂತುರು ನೀರಾವರಿ ಉತ್ತೇಜಿಸುವ ಸಲುವಾಗಿ ಸ್ಪ್ರಿಂಕ್ಲರ್ ಸೆಟ್ ಮೇಲೆ ಶೇಕಡಾ 90 ರಷ್ಟು ಸಬ್ಸಿಡಿ (subsidy scheme) ನೀಡಲಾಗುತ್ತಿದೆ.
ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವವರು ಕೆಳಗೆ ನೀಡಲಾಗಿರುವ ಅರ್ಹತೆಗಳನ್ನು ಹೊಂದಿರಬೇಕು.
- ಅರ್ಜಿ ಸಲ್ಲಿಸಲು ಬಯಸುವ ರೈತರು ಸಣ್ಣ ಮತ್ತು ಅತೀ ಸಣ್ಣ ರೈತ ವರ್ಗಕ್ಕೆ ಸೇರಿರಬೇಕು.
- ಅರ್ಜಿ ಸಲ್ಲಿಸಲು ಬಯಸುವ ರೈತರು ತಮ್ಮ ಹೆಸರಿನಲ್ಲಿ ಕಡ್ಡಾಯವಾಗಿ ಜಮೀನನ್ನು ಹೊಂದಿರಬೇಕು.
- ಅರ್ಜಿ ಸಲ್ಲಿಸಲು ಬಯಸುವ ರೈತರು ಕಳೆದ 7 ವರ್ಷದಲ್ಲಿ ಈ ಯೋಜನೆಯ ಅಡಿಯಲ್ಲಿ ಸಬ್ಸಿಡಿಯನ್ನು ಪಡೆದಿರಬಾರದು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು :-
ಈ ಸಬ್ಸಿಡಿಯನ್ನು ಪಡೆಯಲು ಬಯಸುವ ಅರ್ಹ ರೈತರು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಕೆಳಗೆ ನೀಡಲಾಗಿರುವ ದಾಖಲೆಗಳನ್ನು ಹೊಂದಿರುವುದು ಕಡ್ಡಾಯ. ಅವು ಯಾವುವು ಎಂದರೆ:
- ಜಮೀನಿನ ಪಹಣಿ ಪತ್ರ (ಉತಾರಿ)
- ಬ್ಯಾಂಕ್ ಪಾಸ್ ಬುಕ್
- ಆಧಾರ್ ಕಾರ್ಡ್
- ಕೊಳವೆ ಬಾವಿ ಅಥವಾ ಬಾವಿ ಪ್ರಮಾಣ ಪತ್ರ
- ಜಮೀನಿನ ಹಿಡುವಳಿ ಪತ್ರ
- ಅರ್ಜಿದಾರರ ಇತ್ತೀಚಿನ ಫೋಟೋ
- ಮೊಬೈಲ್ ನಂಬರ್
ಅರ್ಜಿ ಸಲ್ಲಿಸುವುದು ಹೇಗೆ?
ರಾಜ್ಯ ಸರ್ಕಾರದ ಕೃಷಿ ಇಲಾಖೆಯ ಈ ಸಬ್ಸಿಡಿ ಪಡೆಯಲು ಬಯಸುವ ಅರ್ಹ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಅಲ್ಲಿ ಅರ್ಜಿ ನಮೂನೆಯನ್ನು ಪಡೆದು ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಬೇಕು.
ಆನ್ಲೈನ್ ಮೂಲಕವೂ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸುವವರು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಕೃಷಿ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.
https://kkisan.karnataka.gov.in/
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?
ಇನ್ನು ಹನಿ ನೀರಾವರಿ ಮತ್ತು ತುಂತುರು ನೀರಾವರಿ ಉತ್ತೇಜಿಸುವ ಸಲುವಾಗಿ ರಾಜ್ಯ ಸರ್ಕಾರವು ರೈತರಿಗೆ ಕೊಡಮಾಡುತ್ತಿರುವ ಈ ಸಬ್ಸಿಡಿ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರಸ್ತುತ ಯಾವುದೇ ಕೊನೆಯ ದಿನಾಂಕವನ್ನು ನಿಗದಿ ಪಡಿಸಿಲ್ಲ.
ಇದನ್ನೂ ಓದಿ: PM Kisan Mandhan: ರೈತರಿಗೆ ಈ ಯೋಜನೆ ಅಡಿಯಲ್ಲಿ ಸಿಗಲಿದೆ ತಿಂಗಳಿಗೆ 3,000 ರೂಪಾಯಿ ! ಈಗಲೇ ಅರ್ಜಿ ಸಲ್ಲಿಸಿ
ಹಾಗಂತ ಇದು ತಿಂಗಳುಗಟ್ಟಲೆ ಇರುವುದಿಲ್ಲ. ಈ ಯೋಜನೆ ಅಡಿಯಲ್ಲಿ ಲಾಭ ಪಡೆಯಲು ಬಯಸುವ ಅರ್ಹ ಅಭ್ಯರ್ಥಿಗಳು ಡಿಸೆಂಬರ್ ತಿಂಗಳ ಅಂತ್ಯದ ಒಳಗಾಗಿ ಅರ್ಜಿ ಸಲ್ಲಿಸುವುದು ತುಂಬಾ ಒಳ್ಳೆಯದು.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ಗೃಹಲಕ್ಷ್ಮೀ: ಅರ್ಹ ಮತ್ತು ಅನರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇದರಲ್ಲಿ ನಿಮ್ಮ ಮನೆಯವರ ಹೆಸರು ಇದೆಯಾ ಚೆಕ್ ಮಾಡಿಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ಅವರು ಗೃಹಲಕ್ಷ್ಮಿ ಯೋಜನೆಯ 21 ಮತ್ತು 22 ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ.
- ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯಲ್ಲಿ ಹೆಸರು ತಿದ್ದುಪಡಿ ಮಾಡುವಂತೆ ಪಹಣಿಯಲ್ಲಿ ಹೆಸರು ತಪ್ಪಾಗಿರುವುದನ್ನು ಸಹ ರೈತರು ಸರಿಪಡಿಸಬಹುದುರೈತರು ತಮ್ಮ ಪಹಣಿಗಳಲ್ಲಿ ಹೆಸರು ತಂದೆಯ ಹೆಸರನ್ನು ಸರಿಯಾಗಿ ಗಮನಿಸಿರುವುದಿಲ್ಲ. ಸ್ಪೆಲಿಂಗ್ ಮಿಸ್ಟೇಕ್ ಇದ್ದರೂ ನೀವು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತೀರಿ. ಹಾಗಾಗಿ ನಿಮ್ಮ ಪಹಣಿಯನ್ನು ಒಮ್ಮೆ ಪರಿಶೀಲಿಸಿಕೊಳ್ಳಿ. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ಸಂಪೂರ್ಣ ಮಾಹಿತಿ.
- ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯ – ಹೊಸ ನಿಯಮಗಳು ಮತ್ತು ಪರಿಣಾಮರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು ಎಂಬುದನ್ನು ಸಂಪೂರ್ಣವಾಗಿ ತಿಳಿದುಕೊಳ್ಳಿ. ಕರ್ನಾಟಕ ಕೃಷಿ ಸುದ್ದಿ 2026.
- ಯಾವ ಸರ್ವೇ ನಂಬರ್ ಮೇಲೆ ಎಷ್ಟು ಸಾಲವಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ ಸಾಲ ಪಡೆದಿದ್ದೀರಾ? ನಿಮಗೆ ಅದರ ಸ್ಟೇಟಸ್ ಚೆಕ್ ಮಾಡಬೇಕೆ? ನೀವು ಸಾಲವನ್ನು ತೀರಿಸಿದ್ದರೂ ನಿಮ್ಮ ಪಹಣಿಯಲ್ಲಿ ಸಾಲ ತೋರಿಸುತ್ತಿದ್ದರೆ ಏನು ಮಾಡಬೇಕು?
- ಪಿಎಂ ಕಿಸಾನ್ ಗ್ರಾಮವಾರು ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಹಣ ಜಮಾ ಆಗಲ್ಲಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ಕನಸಿನ ಕೂಸಾದ ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಅರ್ಹ ರೈತರ ಗ್ರಾಮವಾರು ಪಟ್ಟಿ ಬಿಡುಗಡೆ ಮಾಡಲಾಗಿದೆ. (PM Kisan 21st installment)
- ಚುನಾವಣೆಯ ಹೊಸ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸಿ! ಇಲ್ಲಿದೆ ಸಂಪೂರ್ಣ ಮಾಹಿತಿ.ಹೌದು, ಲೋಕಸಭಾ ಚುನಾವಣೆಗೆ ಮುಗಿದರೂ ಕೂಡಾ ಈ ವಿಷಯವು ತುಂಬಾ ಗೊಂದಲವಾಗಿದೆ ಆದ್ದರಿಂದ election commission of india ಹೊಸದಾಗಿ ಎಲೆಕ್ಷನ್ voter list ಬಿಡುಗಡೆ ಮಾಡಿದೆ.18 ವಯೋಮಾನಕ್ಕಿಂತ ಹೆಚ್ಚಿನವರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
- ಮೋಬೈಲ್ ನಲ್ಲೇ ನಿಮ್ಮ ಜಮೀನಿನ ಓರಿಜಿನಲ್ ಉತಾರಿ (ಪಹಣಿ ಪತ್ರ) ಡೌನ್ಲೋಡ್ ಮಾಡಿಹಲವರ ಬಳಿ ತಮ್ಮದೇ ಆದ ಒರಿಜಿನಲ್ ಪಹಣಿ ಪತ್ರ (ಉತಾರಿ) ಇರುವುದಿಲ್ಲ. ಕಾರಣಾಂತರಗಳಿಂದ ಅವರು ತಮ್ಮ ಪಹಣಿ ಪತ್ರವನ್ನು ಕಳೆದುಕೊಂಡಿರುತ್ತಾರೆ. ಅಂತಹ ರೈತರಿಗೆ ಇಲ್ಲೊಂದು ಭರ್ಜರಿ ಸಿಹಿ ಸುದ್ದಿ ಇದೆ.
- ಇಂದಿನಿಂದ ಏಪ್ರೀಲ್ 8 ರವರೆಗೆ ಈ ಜಿಲ್ಲೆಗಳಲ್ಲಿ ಮಳೆರಾಜ್ಯದ 18 ಜಿಲ್ಲೆಗಳಲ್ಲಿ ಏಪ್ರೀಲ್ 8 ರವರೆಗೆ ವಿವಿಧೆಡೆ ಮಳೆಯಾಗಲಿದೆ. ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಯಾವಾಗ ಮಳೆಯಾಗಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
- ಹಳ್ಳಿ ಹಳ್ಳಿಗೂ ಬಂತು ಇ-ಸ್ವತ್ತು; ಸುಲಭವಾಗಿ ಇ-ಖಾತಾ ಮಾಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ,ಕರ್ನಾಟಕ ಸರ್ಕಾರವು ಗ್ರಾಮೀಣ ಆಸ್ತಿ ದಾಖಲೆಗಳ ಡಿಜಿಟಲೀಕರಣಕ್ಕಾಗಿ ಇ-ಸ್ವತ್ತು 2.0 ಅನ್ನು ಪರಿಚಯಿಸಿದೆ. ಇದು 97 ಲಕ್ಷಕ್ಕೂ ಹೆಚ್ಚು ಆಸ್ತಿಗಳಿಗೆ ಇ-ಖಾತಾ ನೀಡುವ ಪ್ರಕ್ರಿಯೆಯನ್ನು ಸುಗಮಗೊಳಿಸುತ್ತದೆ. ಈ ಆನ್ಲೈನ್ ಪೋರ್ಟಲ್ ಆಸ್ತಿ ವಹಿವಾಟುಗಳಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸಿ, ವಂಚನೆಗಳನ್ನು ತಡೆಯುಯಲಿದ್ದು, ಫಾರ್ಮ್ 9 ಮತ್ತು 11B ನಂತಹ ಪ್ರಮುಖ ಇ-ಖಾತಾ ದಾಖಲೆಗಳನ್ನು ಸುಲಭವಾಗಿ ಡೌನ್ಲೋಡ್ ಮಾಡಿಕೊಳ್ಳಲು ಇದು ಸಹಕಾರಿಯಾಗಲಿದೆ









