ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲಿ ಪ್ರಮುಖ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ( gruhalakshmi scheme) 15 ನೇ ಕಂತಿನ ಹಣ ಬಿಡುಗಡೆ ಆಗಿದ್ದು, ಇದೀಗ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ 16 ನೇ ಕಂತಿನ ಹಣ ನೇರವಾಗಿ ಜಮಾ ಮಾಡಲು ರಾಜ್ಯ ಸರ್ಕಾರ ದಿನಾಂಕ ನಿಗದಿ ಮಾಡಿದೆ.
Thank you for reading this post, don't forget to subscribe!ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000 ರೂಪಾಯಿಯನ್ನು ಇಲ್ಲಿಯವರೆಗೆ ಜಮಾ ಮಾಡಿದೆ. ಇದೀಗ 16 ನೇ ಕಂತಿನ ಹಣ ಬಿಡುಗಡೆ ಮಾಡಲು ದಿನಾಂಕ ನಿರ್ಧರಿಸಿದ್ದು, ಹಂತ ಹಂತವಾಗಿ ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಆಗಲಿದೆ.
ಇದನ್ನೂ ಓದಿ: ಕುರಿ ಮತ್ತು ಮೇಕೆ ಸಾಕಾಣಿಕೆಗೆ 59,400 ರೂ. ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ
ರಾಜ್ಯ ಸರ್ಕಾರದ ಬಳಿ ಬಜೆಟ್ ಕೊರತೆಯ ಹಿನ್ನೆಲೆಯಲ್ಲಿ 16 ನೇ ಕಂತಿನ ಹಣ ಬಿಡುಗಡೆ ಆಗುವುದು ತಡವಾಗಿದ್ದು ಇದೀಗ ಹಂತ ಹಂತವಾಗಿ ಹಣ ಜಮಾ ಮಾಡಲು ನಿರ್ಧರಿಸಲಾಗಿದೆ. ಇನ್ನು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ನಿರೀಕ್ಷೆಗಿಂತ ಕಳಪೆ ಪ್ರದರ್ಶನ ನೀಡಿದ್ದರಿಂದ 5 ಗ್ಯಾರಂಟೀ ಯೋಜನೆಗಳು ಮುಂದುವರಿಯುವುದಿಲ್ಲ ಎಂಬ ಊಹಾಪೋಹಗಳು ಹರಿದಾಡುತ್ತಿದ್ದವು.
ಇದಕ್ಕೆ ಸ್ಪಷ್ಟನೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ 5 ಗ್ಯಾರಂಟೀ ಯೋಜನೆಗಳು ನಿಲ್ಲುವುದಿಲ್ಲ. ಅವು ಬಡವರ ಪಾಲಿಗೆ ಆರ್ಥಿಕ ಬೆನ್ನೆಲುಬಾಗಿದ್ದು, ಕೇವಲ ಚುನಾವಣಾ ಪ್ರಚಾರಕ್ಕಾಗಿ ಅವುಗಳನ್ನು ಜಾರಿಗೆ ತಂದಿಲ್ಲ ಎಂದು ತಿಳಿಸಿದ್ದರು.
ಇದನ್ನೂ ಓದಿ: ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!
ಸಿಎಂ ಸಿದ್ದರಾಮಯ್ಯ ಅವರ ಮಾತಿನಂತೆ ಇದೀಗ ರಾಜ್ಯ ಸರ್ಕಾರದ ಗ್ಯಾರಂಟೀ ಯೋಜನೆಗಳು ಮುಂದುವರೆದಿದ್ದು, ಬಜೆಟ್ ಕೊರತೆಯಿಂದಾಗಿ ವಿಳಂಬವಾಗುತ್ತಿವೆ.
ಇಲ್ಲಿಯವರೆಗೆ 15 ಕಂತುಗಳಲ್ಲಿ ಹಣ ಜಮಾ ಆಗಿದ್ದು, 16 ನೇ ಕಂತಿನ ಹಣ ಇದೇ ಜನವರಿ ತಿಂಗಳ 12 ನೇ ತಾರೀಖಿನಿಂದ 16 ನೇ ತಾರೀಖಿನವರೆಗೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಹಂತ ಹಂತವಾಗಿ ಹಣ ಜಮಾ ಆಗಲಿದೆ ಎಂದು ಸರ್ಕಾರ ತಿಳಿಸಿದೆ.I
ಇಲ್ಲಿಯವರೆಗೆ ನಿಮಗೆ ಗೃಹಲಕ್ಷ್ಮಿ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ಕೆಳಗೆ ನೀಡಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಗೃಹಲಕ್ಷ್ಮಿ ಹಣ ಚೆಕ್ ಮಾಡುವುದು ಹೇಗೆ?
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಲಿಂಕ್ ಮೇಲೆ ಕ್ಲಿಕ್ ಮಾಡಿ ರಾಜ್ಯ ಸರ್ಕಾರದ ಆ್ಯಪ್ ಅದ DBT Karnataka ಅನ್ನು ಗೂಗಲ್ ಪ್ಲೇಸ್ಟೋರ್ ನಿಂದ ಇನ್ಸ್ಟಾಲ್ ಮಾಡಿಕೊಳ್ಳಿ.
https://play.google.com/store/apps/details?id=com.dbtkarnataka
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಆ್ಯಪ್ ಅನ್ನು ಓಪನ್ ಮಾಡಿ.

ಹಂತ -3) ನಂತರ ನಿಮ್ಮ ಹೆಸರು ಹಾಕಿ 4 ಅಂಕಿಯ MPIN ರಚಿಸಿಕೊಳ್ಳಿ. MPIN ರಚಿಸಿದ ಮೇಲೆ ಲಾಗಿನ್ ಆಗಿ. ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು Payment Status ಮೇಲೆ ಕ್ಲಿಕ್ ಮಾಡಿ.

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಗ್ರಹಲಕ್ಷ್ಮಿ ಮೇಲೆ ಕ್ಲಿಕ್ ಮಾಡಿ.

ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ.ಅಲ್ಲಿ ನಿಮಗೆ ನಿಮ್ಮ ಖಾತೆಗೆ ಹಣ ಜಮಾ ಆಗಿರುವ ದಿನಾಂಕ, ಎಷ್ಟು ಹಣ ಜಮಾ ಆಗಿದೆ ಎಂಬ ಮಾಹಿತಿ ಸಿಗುತ್ತದೆ.

ಈ ರೀತಿಯಾಗಿ ನೀವು ನಿಮ್ಮ ಮೊಬೈಲ್ ನಲ್ಲಿಯೇ ನಿಮ್ಮ ಖಾತೆಗೆ ಜಮಾ ಆಗಿರುವ ಹಣವನ್ನು ಸುಲಭವಾಗಿ ಚೆಕ್ ಮಾಡಬಹುದು.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ಇಂದಿನಿಂದ ನಾಲ್ಕು ದಿನ 17 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಲ್ಲೆಲ್ಲಿ ಮಳೆ ಇಲ್ಲಿದೆ ಮಾಹಿತಿ!ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ತೇವಾಂಶ ಭರಿತ ಮೋಡದ ಕಾರಣ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಾರ್ಚ್ 22 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
- Heavy Rain: 4 ದಿನ ಭಾರೀ ಮಳೆ, ರಾಜ್ಯದ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ!25 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ಮಲೆನಾಡು, ಕರಾವಳಿ, ಒಳನಾಡು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
- ನಾಡಕಚೇರಿ ಅಲೆದಾಟಕ್ಕೆ ಬಿತ್ತು ಬ್ರೇಕ್! ಈಗ Mobile ನಲ್ಲೇ ಪಡೆಯಿರಿ ಜಾತಿ-ಆದಾಯ ಪ್ರಮಾಣಪತ್ರನಾಡಕಚೇರಿ ಅಲೆದಾಟಕ್ಕೆ ಬಿತ್ತು ಬ್ರೇಕ್! ಈಗ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ಮೊಬೈಲ್ನಲ್ಲೇ ಸುಲಭವಾಗಿ ಅರ್ಜಿ ಸಲ್ಲಿಸಿ ಪಡೆದುಕೊಳ್ಳಬಹುದು. ಸಮಯ, ಹಣ ಮತ್ತು ಶ್ರಮ ಉಳಿಸುವ ಕರ್ನಾಟಕ ಸರ್ಕಾರದ ಡಿಜಿಟಲ್ ಸೇವೆಗಳ ಸಂಪೂರ್ಣ ಮಾಹಿತಿ ಇಲ್ಲಿ.
- ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಹಳೆಯ ಪಹಣಿಯನ್ನು ಸುಲಭವಾಗಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಹಿಂದಿನ ಅಂಕಣಗಳಲ್ಲಿ ನಾವು ಮೋಬೈಲ್ ನಲ್ಲಿಯೇ ನಿಮ್ಮ ಪಹಣಿ ಪತ್ರಕ್ಕೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿಕೊಟ್ಟಿದ್ದೇವೆ. ಇವತ್ತಿನ ಅಂಕಣದಲ್ಲಿ ನಾವು ನಿಮಗೆ ಮನೆಯಲ್ಲಿಯೇ ಕುಳಿತು ನೀವು ನಿಮ್ಮ ಹಳೆಯ ಪಹಣಿ ಪತ್ರ ಡೌನ್ಲೋಡ್ ಮಾಡಿ ನೋಡುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ.
- ಮಾರ್ಚ್ 15 ರಿಂದ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಇಲ್ಲಿದೆ ಮಾಹಿತಿಮಾರ್ಚ್ 15ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ, ರೈತರು ಯಾವ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ. 🌧️🌾
- ನಿಮ್ಮ ಮೊಬೈಲ್ ನಲ್ಲಿ ಜಮೀನಿನ ಖಾತಾ ಬದಲಾವಣೆಗೆ ಅರ್ಜಿ ಹೀಗೆ ಸಲ್ಲಿಸಿ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.ಮೊಬೈಲ್ನಲ್ಲೇ ಜಮೀನಿನ ಖಾತಾ ಬದಲಾವಣೆಗೆ ಈಗ ಅರ್ಜಿ ಸಲ್ಲಿಸಬಹುದು. ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ, ಶುಲ್ಕ ಮತ್ತು ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ. ಮನೆಯಲ್ಲೇ ಕುಳಿತು ಸುಲಭವಾಗಿ ಖಾತಾ ವರ್ಗಾವಣೆ ಮಾಡಿ.
- ಕುರಿ ಸಾಕಾಣಿಕೆ ಮಾಡುವವರಿಗೆ 1.75 ಲಕ್ಷ ಸಬ್ಸಿಡಿ ನೀಡಲಿದೆ ಸರ್ಕಾರ! ಈಗಲೇ ಅರ್ಜಿ ಸಲ್ಲಿಸಿ!ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ರಾಜ್ಯ ಸರ್ಕಾರವು ಇತ್ತೀಚೆಗೆ ಕಳೆದ ಸಾಲಿನ ಮುಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆ ಪರಿಹಾರ ಹಣವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಿದೆ. ಅಲ್ಲದೇ ಸಣ್ಣಾತ್ತು ಅತಿ ಸಣ್ಣ ರೈತರಿಗೆ ಹೆಚ್ಚುವರಿ ಪರಿಹಾರವಾಗಿ ತಲಾ 3,000 ರೂಪಾಯಿ ಹಣವನ್ನು ಜಮಾ ಮಾಡಿದೆ.
- ನಿಮ್ಮ ಹೊಲದ ಸರ್ವೇ ನಂಬರ್ ನಲ್ಲಿ ಯಾರ ಯಾರ ಹೆಸರಿದೆ ಎಂಬುದನ್ನು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!ಇದೀಗ ನೀವು ನಿಮ್ಮ ಮೊಬೈಲ್ ನಲ್ಲೇ ನಿಮ್ಮ ಜಮೀನಿನ ಸರ್ವೇ ನಂಬರ್ ನಲ್ಲಿ ಯಾರ ಯಾರ ಹೆಸರಿದೆ ಮತ್ತು ಯಾರ ಹೆಸರಿಗೆ ಎಷ್ಟು ಎಕರೆ ಜಮೀನಿದೆ ಮತ್ತು ಯಾರ ಹೆಸರಿಗೆ ಎಷ್ಟು ಸಾಲವಿದೆ ಎಂಬುದನ್ನು ಸುಲಭವಾಗಿ ಚೆಕ್ ಮಾಡಬಹುದು.
- ಪಿಎಂ ಕಿಸಾನ್: ಇಕೆವೈಸಿ ಆಗದೇ ಇರುವ ರೈತರ ಪಟ್ಟಿ ಬಿಡುಗಡೆ ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧೀಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಕಳೆದ ಅಂಕಣದಲ್ಲಿ ನಾವು 21 ನೇ ಕಂತಿನ ಪಿಎಂ ಕಿಸಾನ್ ಸಮ್ಮಾನ ಯೋಜನೆಯ ಅರ್ಹ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ.
- 38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸಿಗಲಿದೆ : ಇಲ್ಲಿದೆ ಮಾಹಿತಿಕರ್ನಾಟಕದ ಸುಮಾರು 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಕೃಷಿ ಸಾಲ ನೀಡುವ ಮಹತ್ವದ ಯೋಜನೆ ಜಾರಿಗೆ ಬಂದಿದೆ. ಈ ಯೋಜನೆಯ ಮೂಲಕ ರೈತರು ಸುಲಭವಾಗಿ ಕೃಷಿ ಚಟುವಟಿಕೆಗಳಿಗೆ ಹಣಕಾಸು ಸಹಾಯ ಪಡೆಯಬಹುದು. ಅರ್ಹತೆ, ಸಾಲದ ಮೊತ್ತ ಮತ್ತು ಅರ್ಜಿ ಸಲ್ಲಿಸುವ ವಿಧಾನ ಕುರಿತು ಸಂಪೂರ್ಣ ಮಾಹಿತಿ ಇಲ್ಲಿ ತಿಳಿದುಕೊಳ್ಳಿ. 🌾💰
- ಪಿಎಂ ಕಿಸಾನ್ 22ನೇ ಕಂತಿನ ಹಣ ನಿಮಗೆ ಜಮೆಯಾಗುವುದೇ ಇಲ್ಲೇ ಚೆಕ್ ಮಾಡಿಪಿಎಂ ಕಿಸಾನ್ 22ನೇ ಕಂತಿನ ಹಣ ನಿಮ್ಮ ಖಾತೆಗೆ ಜಮೆಯಾಗಿದೆ ಅಥವಾ ಇಲ್ಲವೇ ಎಂಬುದನ್ನು ಈಗಲೇ ಚೆಕ್ ಮಾಡಿ. Pradhan Mantri Kisan Samman Nidhi ಯೋಜನೆಯ ಲಾಭಾರ್ಥಿಗಳು ತಮ್ಮ ಬೆನಿಫಿಶಿಯರಿ ಸ್ಟೇಟಸ್ ಮತ್ತು ಪೇಮೆಂಟ್ ವಿವರಗಳನ್ನು ಸರಳವಾಗಿ ಹೇಗೆ ಪರಿಶೀಲಿಸಬಹುದು ಎಂಬುದನ್ನು ಈ ಲೇಖನದಲ್ಲಿ ತಿಳಿಯಿರಿ. 🚜💰










