ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಯಾವುದೇ ಬ್ಯಾಂಕ್ ಅಥವಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಸಾಲವನ್ನು ಮಾಡಿದ್ದರೆ ಇಲ್ಲಿಯವರೆಗೆ ನಿಮ್ಮ ಎಷ್ಟು ಸಾಲ ಮನ್ನಾ ಆಗಿದೆ ಎಂಬುದನ್ನ ಇದೀಗ ನೀವು ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದು.
Thank you for reading this post, don't forget to subscribe!ಹೌದು ರೈತ ಮಿತ್ರರೇ, ರಾಜ್ಯ ಸರ್ಕಾರವು ಇಲ್ಲಿಯವರೆಗೆ ಸಾಲಮನ್ನಾ ಆಗಿರುವ ರೈತರ ಪಟ್ಟಿ ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಇಲ್ಲವಾ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು.
2017-18 ನೇ ಸಾಲಿನಲ್ಲಿ ಅಧಿಕಾರಕ್ಕೆ ಬಂದ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಅಂದಿನ ಸರ್ಕಾರವು ರೈತರ ಹಿತಕ್ಕಾಗಿ ರಾಜ್ಯದ ಎಲ್ಲ ರೈತರ 50,000 ದಿಂದ 1 ಲಕ್ಷದವರೆಗೆ ವಾಣಿಜ್ಯ ಬ್ಯಾಂಕ್ ಅಥವಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಮಾಡಿದ್ದ ಸಾಲವನ್ನು ಮನ್ನಾ ಮಾಡಿತ್ತು.
ಇದೀಗ ರಾಜ್ಯ ಸರ್ಕಾರವು ಅಂತಹ ಸಾಲ ಮನ್ನಾ ಆಗಿರುವ ರೈತರ ಪಟ್ಟಿ ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ರೈತರು ತಮ್ಮ ಹೆಸರು ಇದೆಯಾ ಇಲ್ಲವಾ ಎಂಬುದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಸಾಲ ಮನ್ನಾ ಆಗಿರುವ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಹೀಗೆ ಚೆಕ್ ಮಾಡಿ:-
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://mahitikanaja.karnataka.gov.in/Service/Service/2066https:/
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ವಾಣಿಜ್ಯ ಬ್ಯಾಂಕ್ ಗಾಗಿ ಸಾಲ ಮನ್ನಾ ವರದಿ ಎಂದು ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ಮಾದರಿ ಇದ್ದಲ್ಲಿ ರೈತ ಎಂದು ಆಯ್ಕೆ ಮಾಡಿ ನಿಮ್ಮ ಜಿಲ್ಲೇ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ ಸಲ್ಲಿಸು ಮೇಲೆ ಕ್ಲಿಕ್ ಮಾಡಿ.

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನಿಮಗೆ ನಿಮ್ಮ ಗ್ರಾಮದಲ್ಲಿ ಇಲ್ಲಿಯವರೆಗೆ ಸಾಲ ಮನ್ನಾ ಆಗಿರುವ ಎಲ್ಲಾ ರೈತರ ಹೆಸರು ಕಾಣಿಸುತ್ತವೆ. ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ.

ಈ ರೀತಿಯಾಗಿ ನೀವು ನಿಮ್ಮ ಮೊಬೈಲ್ ನಲ್ಲಿ ಕೇವಲ ಒಂದೇ ನಿಮಿಷದಲ್ಲಿ ಇಲ್ಲಿಯವರೆಗೆ ಆಗಿರುವ ಸಾಲ ಮನ್ನಾ ಮಾಹಿತಿ ಪಡೆಯಬಹುದು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿನ ಸಾಲ ಮನ್ನಾ ಮಾಹಿತಿ ಹೀಗೆ ಚೆಕ್ ಮಾಡಿ:-
ಇನ್ನೂ ನೀವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಸಾಲ ಮಾಡಿದ್ದರೆ ಅದರ ಸಾಲಮನ್ನಾ ಮಾಹಿತಿ ಪಡೆಯುವುದು ಹೇಗೆ ಎಂಬುದನ್ನು ಕೆಳಗೆ ನೀಡಲಾಗಿದೆ. ತಪ್ಪದೇ ಕೊನೆಯವರೆಗೂ ಓದಿರಿ.
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://mahitikanaja.karnataka.gov.in/Service/Service/2066
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ಪ್ರಾಥಮಿಕ ಕೃಷಿ ಸಹಕಾರ ಸಂಘದ ಸಾಲ ಮನ್ನಾ ವರದಿ ಎಂದು ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ಮಾದರಿ ಇದ್ದಲ್ಲಿ ರೈತ ಎಂದು ಆಯ್ಕೆ ಮಾಡಿ ನಿಮ್ಮ ಜಿಲ್ಲೇ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ ಸಲ್ಲಿಸು ಮೇಲೆ ಕ್ಲಿಕ್ ಮಾಡಿ.

ಈ ರೀತಿಯಾಗಿ ನೀವು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲಿ ಸುಲಭವಾಗಿ ನೀವು ಇಲ್ಲಿಯವರೆಗೆ ಆಗಿರುವ ನಿಮ್ಮ ಸಾಲಮನ್ನಾ ಮಾಹಿತಿಯನ್ನು ಪಡೆಯಬಹುದು.
ಇದನ್ನು ಓದಿ;
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M