WhatsApp Group                             Join Now            
   
                    Telegram Group                             Join Now            
Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಬೆಂಗಳೂರು, ಅತಿವೃಷ್ಟಿಯಿಂದ ನೊಂದ ರೈತರಿಗೆ ಯಾವುದೇ ವಿಳಂಬ ಮಾಡದೆ ಸಕಾಲದಲ್ಲಿ ಸ್ಪಂದಿಸುವುದನ್ನು ನಮ್ಮ ಸರ್ಕಾರವು ಆದ್ಯತೆಯಾಗಿ ಪರಿಗಣಿಸಿದೆ. – ಬೆಳೆ ಹಾನಿಯಾದ ರೈತರ ವಿವರವನ್ನು ಈಗಾಗಲೇ PARIHARA (ಪರಿಹಾರ) ತಂತ್ರಾಂಶದಲ್ಲಿ ದಾಖಲಿಸಿದ್ದು, ಒಟ್ಟು 3,26,183 ರೈತರಿಗೆ ರೂ. 250.97 ಕೋಟಿ ಬೆಳೆ ಹಾನಿ ಪರಿಹಾರ ಮುಂದಿನ 3-4 ದಿನಗಳಲ್ಲಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ.

Thank you for reading this post, don't forget to subscribe!
      
                    WhatsApp Group                             Join Now            
   
                    Telegram Group                             Join Now            

ಕಲಬುರಗಿ ಜಿಲ್ಲೆಯಲ್ಲಿ ಆಗಷ್ಟ್ ತಿಂಗಳಿನಲ್ಲಿ 69% ಹಾಗೂ ಸೆಪ್ಟೆಂಬರ್ 63% ಹೆಚ್ಚು ಮಳೆಯಿಂದಾಗಿ NDRF ಮಾರ್ಗಸೂಚಿಯನ್ವಯ ಕೃಷಿ, ತೋಟಗಾರಿಕೆ ಮತ್ತು ಕಂದಾಯ ಇಲಾಖೆಯ ಜಂಟಿ ಸಮೀಕ್ಷೆಯ ವರದಿಯ ಅನುಸಾರ ಕಲಬುರಗಿ ಜಿಲ್ಲೆಯಲ್ಲಿ 3,24,205 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ವರದಿಯಾಗಿರುತ್ತದೆ ಎಂದು ಸರ್ಕಾರಕ್ಕೆ ವರದಿ ಸಲ್ಲಿಸಲಾಗಿರುತ್ತದೆ. ಹತ್ತಿ, ತೊಗರಿ, ಸೂರ್ಯಕಾಂತಿ ಹಾಗೂ ಅರಿಶಿಣ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಿದ ಒಟ್ಟು 2,67,560 ರೈತರ 3,35,046.2 ಹೆಕ್ಟೇರ್ ಪ್ರದೇಶಕ್ಕೆ ಬೆಳೆ ವಿಮೆಯ ಮಧ್ಯಂತರ ಪರಿಹಾರ (Mid-Season Adversity) ನೀಡಲು ಸರ್ಕಾರ ಆದೇಶಿಸಿದೆ. ಬೆಳೆವಿಮೆ ಪರಿಹಾರ ಕೆಲವೇ ದಿನಗಳಲ್ಲಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ.

ಹಾನಿಯಾದ ಹತ್ತಿ ಬೆಳೆ ನೋಂದಣಿ ಮಾಡಿಸಿದ ರೈತರ- ಸಂಖ್ಯೆ10,025. ಪ್ರದೇಶ-11,727.5 ಹೆಕ್ಟೇರ್. ಅಂದಾಜು ಬೆಳೆ ವಿಮೆ ಮಧ್ಯಂತರ ಪರಿಹಾರ- ರೂ 9.95 ಕೋಟಿ. ತೊಗರಿ ಬೆಳೆ ವಿಮೆ ನೋಂದಣಿ ಮಾಡಿಸಿದ ರೈತರ- ಸಂಖ್ಯೆ 2,56,845. ಪ್ರದೇಶ– 3,22,734 ಹೆಕ್ಟೇರ್. ಅಂದಾಜು ಬೆಳೆ ವಿಮೆ ಮಧ್ಯಂತರ ಪರಿಹಾರ- ರೂ 232.81ಕೋಟಿ ಸೂರ್ಯಕಾಂತಿ ಬೆಳೆ ವಿಮೆ ನೋಂದಣಿ ಮಾಡಿಸಿದ ರೈತರ ಸಂಖ್ಯೆ- 382. ಪ್ರದೇಶ- 392.088 ಹೆಕ್ಟೇರ್. ಅಂದಾಜು ಬೆಳೆ ವಿಮೆ ಮಧ್ಯಂತರ ಪರಿಹಾರ ರೂ 0.24 ಕೋಟಿಯಾಗಿದೆ.

ಅರಿಶಿಣ ಬೆಳೆ ವಿಮೆ ನೋಂದಣಿ ಮಾಡಿಸಿದ ರೈತರ ಸಂಖ್ಯೆ- 308. ಪ್ರದೇಶ- 192.615 ಹೆಕ್ಟೇರ್. ಅಂದಾಜು ಬೆಳೆ ವಿಮೆ ಮಧ್ಯಂತರ ಪರಿಹಾರ ರೂ 0.41ಕೋಟಿ. ಒಟ್ಟು ಬೆಳೆ ವಿಮೆ ನೋಂದಣಿ ಮಾಡಿಸಿದ ರೈತರ ಸಂಖ್ಯೆ -2,67,560. ಪ್ರದೇಶ- 3,35,046.2 ಹೆಕ್ಟೇರ್ ಹಾಗೂ ಒಟ್ಟು ಪರಿಹಾರ ರೂ 243.41ಕೋಟಿ. ಉದ್ದು, ಹೆಸರು, ಸೋಯಾ ಅವರೆ ಹಾಗೂ ಇನ್ನಿತರ ಬೆಳಗಳಿಗೆ ಬೆಳೆ ಹಾನಿ ಕುರಿತು ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪದಡಿ (Localized calamity) ದೂರು ನೀಡಿದ ಒಟ್ಟು 22,385 ರೈತರಿಗೆ ರೂ. 8.79 ಕೊಟಿ ಬೆಳೆವಿಮೆ ಪರಿಹಾರ ಕೆಲವೇ ದಿನಗಳಲ್ಲಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ರೈತ ದೇಶದ ಬೆನ್ನೆಲುಬು ಎನ್ನುತ್ತಾರೆ, ಆ ಬೆನ್ನೆಲುಬನ್ನು ಗಟ್ಟಿಯಾಗಿಸಿ, ಉಳಿಸಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯ ಎಂದು ಭಾವಿಸಿದ್ದೇವೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಅವರು ತಿಳಿಸಿದ್ದಾರೆ.

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t

By

Leave a Reply

Your email address will not be published. Required fields are marked *