ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ,:,ವಿವಿಧ ಜಿಲ್ಲೆಗಳಲ್ಲಿ ಮಳೆಗಾಲದಲ್ಲಿ ಅತೀವೃಷ್ಟಿಯಿಂದ ರೈತರ ಬೆಳೆ ನಷ್ಟಕ್ಕೆ ಪರಿಹಾರವಾಗಿ 14.24 ಲಕ್ಷ ರೈತರ ಬ್ಯಾಂಕ್ ಖಾತೆಗೆ 10.33.60 ಕೋಟಿ ರೂಪಾಯಿ ಹೆಚ್ಚಳ ಪರಿಹಾರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒತ್ತುವ ಮೂಲಕ ಚಾಲನೆ ನೀಡಲಾಗಿದೆ. ನಿಮಗೆ ಎಷ್ಟು ಬೆಳೆ ಪರಿಹಾರದ ಹಣ ಜಮಾ ಆಗಿದೆ ಎಂಬುದನ್ನು ನಾವು ಈ ಅಂಕಣದಲ್ಲಿ ತಿಳಿಸಿದ್ದೇನೆ.
ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ, ಇನ್ಪುಟ್ ಸಬ್ಸಿಡಿಗಳ ದರಗಳನ್ನು ಹೆಚ್ಚಿಸಲಾಗಿದೆ.

ಗರಿಷ್ಠ 2 ಹೆಕ್ಟೇರ್ ಗೆ ಸೀಮಿತವಾಗಿ, ಮಳೆಯಾಶ್ರಿತ ಬೆಳೆಗಳಿಗೆ ಒಂದು ಹೆಕ್ಟೇರ್ ಗೆ 8500 ರೂಪಾಯಿಯಿಂದ 1700 ರೂಪಾಯಿ, ನೀರಾವರಿ ಬೆಳೆ 17000 ರೂಪಾಯಿಯಿಂದ 25500 ರೂಪಾಯಿ ಮತ್ತು ಬಹುವಾರ್ಷಿಕ ಬೆಳೆಗಳಿಗೆ 22500 ರೂಪಾಯಿಯಿಂದ 31000 ರೂಪಾಯಿಗಳನ್ನು ಹೆಚ್ಚಿಸಲಾಗಿದೆ.
ಎಸ್.ಡಿ.ಆರ್.ಎಫ್ ಮಾನದಂಡಗಳ ಪ್ರಕಾರ 14.24 ಲಕ್ಷ ರೈತರಿಗೆ ಇನ್ಪುಟ್ ಸಬ್ಸಿಡಿಯಾಗಿ ಈಗಾಗಲೇ 1218.03 ಕೋಟಿ ರೂಪಾಯಿ ವಿತರಿಸಲಾಗಿದೆ.
ರಾಜ್ಯ ನಿಧಿಯಿಂದ 1033.60 ಕೋಟಿ ರೂಪಾಯಿ ಅನ್ನು ಟಾಪ್ ಅಪ್ ಹೆಚ್ಚುವರಿಯಾಗಿ ನೀಡಲಾಗುತ್ತಿದೆ. ಪರಿಹಾರ ಪಾವತಿ ಪ್ರಕ್ರಿಯೆಯಲ್ಲಿರುವ ಪಾವತಿಗಳನ್ನು ಒಳಗೊಂಡಂತ 2251.63 ಕೋಟಿ ರೂಪಾಯಿ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮೆ ಆಗಲಿದೆ ಎಂದರು.

ಮುಂಗಾರು ಅವಧಿಯಲ್ಲಿ 82.56 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಜೂನ್ ನಿಂದ ಸೆಪ್ಟೆಂಬರ್ ಅವಧಿಯಲ್ಲಿ ಉಂಟಾದ ಅತೀವೃ ಷ್ಟಯಿಂದಾಗಿ 14.58 ಲಕ್ಷ ಹೆಕ್ಟೇರ್ ಗಿಂತ ಹೆಚ್ಚಿನ ಪ್ರದೇಶದಲ್ಲಿ ಬೆಳೆ ಹಾನಿ ಉಂಟಾಗಿದ್ದು, ಅಂದಾಜು 10,748 ಕೋಟಿ ರೂಪಾಯಿ ಬೆಳೆ ಹಾನಿ ಅಂದಾಜಿಸಲಾಗಿದೆ ಎಂದರು.
ಯಾವ ಬೆಳೆ ಎಷ್ಟು ಹಾನಿ?
ತೊಗರಿ ಬೆಳೆ 5.36 ಲಕ್ಷ ಹೆಕ್ಟೇರ್ ಹಾನಿಯಾಗಿದೆ.
ಹೆಸರು ಕಾಳು 2.63 ಲಕ್ಷ ಹೆಕ್ಟೇರ್ ಹಾನಿಯಾಗಿದೆ.
ಹತ್ತಿ ಬೆಳೆ 2.68 ಲಕ್ಷ ಹೆಕ್ಟೇರ್ ಹಾನಿಯಾಗಿದೆ.
ಮೆಕ್ಕೆಜೋಳ 1.21 ಲಕ್ಷ ಹೆಕ್ಟೇರ್ ಹಾನಿಯಾಗಿದೆ.
Belehani parihara chek now ನಿಮಗೆಷ್ಟು ಬೆಳೆ ಹಾನಿ ಜಮೆಯಾಗಿದೆ ಇಲ್ಲಿ ಚೆಕ್ ಮಾಡಿ
ಬೆಳೆ ಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡಲು ಈ
https://parihara.karnataka.gov.in/PariharaPayment/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಪರಿಹಾರ ಪೆಜ್ ತೆರೆದುಕೊಳ್ಳುತ್ತದೆ. ಅಲ್ಲಿ ಪರಿಹಾರ ಹಣ ಸಂದಾಯ ವರದಿ ಕೆಳಗಡೆ Select Calamity Type ನಲ್ಲಿ Flood, ಆಯ್ಕೆ ಮಾಡಿಕೊಳ್ಳಬೇಕು. ನಂತರ Select Year ನಲ್ಲಿ 2025-26 ಆಯ್ಕೆ ಮಾಡಿಕೊಳ್ಳಬೇಕು. ನಂತರ ಆಧಾರ್ ಕಾರ್ಡ್ ನಮೂದಿಸಬೇಕು ಇದಾದ ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ನಂತರ ವಿವರಗಳ್ನು ಪಡೆಯಲು ಮೇಲೆ ಕ್ಲಿಕ್ ಮಾಡಬೇಕು.ನಂತರ ತೆರೆದುಕೊಳ್ಳುವ ಪೇಜ್ ನಲ್ಲಿ ಅಲ್ಲಿ ಕೇಳಲಾದ ಮಾಹಿತಿ ಭರ್ತಿ ಮಾಡಿ ಸ್ಟೇಟಸ್ ತಿಳಿದುಕೊಳ್ಳಬೇಕು
ಓದುಗರಲ್ಲಿ ವಿನಂತಿ,
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t