WhatsApp Group                             Join Now            
   
                    Telegram Group                             Join Now            
Spread the love

ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪದ ನಡುವೆ ಹವಾಮಾನ ಇಲಾಖೆಯು ಮಾರ್ಚ್ 16 ರಿಂದ ವಿವಿಧೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಯಾವ ಯಾವ ದಿನಾಂಕದಂದು ಮಳೆಯಾಗಲಿದೆ. ಮಳೆಯ ಪ್ರಮಾಣ ಹೇಗಿರಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Thank you for reading this post, don't forget to subscribe!

ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ?

      
                    WhatsApp Group                             Join Now            
   
                    Telegram Group                             Join Now            

ಬಿಸಿಲ ಬೇಗೆಯಿಂದ ಜನ ಸಾಮಾನ್ಯರು ತತ್ತರಿಸುವ ಮಧ್ಯೆಯೇ ಮಾರ್ಚ್ 15 ರಿಂದ 17 ರವರೆಗೆ ಮೂರು ದಿನಗಳ ಕಾಲ ರಾಜ್ಯದ ವಿವಿಧೆಡೆ ಮಳೆಯಾಗುವ ನಿರೀಕ್ಷಿಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಾರ್ಚ್ 15 ರಂದು ದಕ್ಷಿಣ  ಕನ್ನಡ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.

ಮಾರ್ಚ್ 16 ರಂದು ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಇಲ್ಲೇ ಚೆಕ್ ಮಾಡಿ

ಮಾರ್ಚ್ 16 ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಧಾರವಾಡ, ಕೊಡಪ್ಪಳ, ಹಾವೇರಿ, ಗದಗ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ,  ಕೊಡಗು ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಚಿತ್ರದುರ್ಗ, ರಾಮನಗರ, ವಿಜನಯನಗರ, ತುಮಕೂರು, ಮೈಸೂರು, ಮಂಡ್ಯ, ಹಾಸನ, ಚಿತ್ರದುರ್ಗ, ಬಳ್ಳಾರಿ, ಚಾಮರಾಜನಗರ ಜಿಲ್ಲೆಗಳಲ್ಲಿ ಒಣಹವೆ ಹವಾಮಾನ ಇರುವ ಸಾದ್ಯತೆಯಿದೆ.

ಮಾರ್ಚ್ 17 ರಂದು ಹಾಸನ, ರಾಮನಗರ, ಮಂಡ್ಯ, ಕೊಡಗು, ದಕ್ಷಿಣ ಕನ್ನಡ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳ ಕಾಲ ಕರಾವಳಿಯಲ್ಲಿ ಬಿಸಿ ಹಾಗೂ ತೇವಾಂಶದ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ.

ಮಾರ್ಚ್ 17 ಮತ್ತು 18 ರಂದು ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಚಾಮರಾಜನಗರದ ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.

ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

      
                    WhatsApp Group                             Join Now            
   
                    Telegram Group                             Join Now            

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

ಓದುಗರಲ್ಲಿ ವಿನಂತಿ

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode

By

Leave a Reply

Your email address will not be published. Required fields are marked *