ರಾಜ್ಯ ಸರ್ಕಾರವು 31 ಜಿಲ್ಲಾ ಮತ್ತು 239 ತಾಲೂಕು ಪಂಚಾಯತಿಗಳ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಕ್ಷೇತ್ರ ಪುನರ್ವಿಂಗಡಣೆಯ ಹಲವು ಬದಲಾವಣೆಗಳೊಂದಿಗೆ ಬರೋಬ್ಬರಿ 10 ವರ್ಷಗಳ ನಂತರ ಚುನಾವಣೆ ನಡೆಯುತ್ತಿದೆ. ಈ ಮೀಸಲಾತಿ ಪಟ್ಟಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಅಕ್ಟೋಬರ್ 19, ಸೋಮವಾರ ಸಂಜೆ 5 ಗಂಟೆಯೊಳಗೆ ಬೆಂಗಳೂರಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ತಮ್ಮ ಲಿಖಿತ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.
Thank you for reading this post, don't forget to subscribe!ರಾಜ್ಯ ಸರ್ಕಾರವು ಜಿಲ್ಲಾ, ತಾಲೂಕು ಪಂಚಾಯತಿಗಳ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿ ಪ್ರಕಟ.
ದಶಕದ ಬಳಿಕ ಚುನಾವಣೆ ನಡೆಯುತ್ತಿದ್ದು, ಕ್ಷೇತ್ರ ವಿಂಗಡಣೆಯಿಂದ ಹಲವು ಬದಲಾವಣೆ.
10 ದಿನಗಳ ಒಳಗೆ ಸಾರ್ವಜನಿಕರು ಆಕ್ಷೇಪಣೆಗಳನ್ನು ಸಲ್ಲಿಸಬಹುದು.

ರಾಜ್ಯದಲ್ಲಿ ಬಹುದಿನಗಳಿಂದ ಬಾಕಿ ಉಳಿದಿರುವ ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ಎಲ್ಲಾ 31 ಜಿಲ್ಲೆಗಳ ತಾಲೂಕು ಪಂಚಾಯಿತಿಗಳ ಸದಸ್ಯ ಸ್ಥಾನಗಳ ಮೀಸಲಾತಿ ಪಟ್ಟಿಯನ್ನು ಅಧಿಕೃತವಾಗಿ ರಾಜ್ಯಪತ್ರದಲ್ಲಿ ಪ್ರಕಟಿಸಿದೆ
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 123 ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಈ ಅಧಿಸೂಚನೆಯನ್ನು ಹೊರಡಿಸಿದೆ. ಈ ಹಿಂದೆ ಹೊರಡಿಸಲಾಗಿದ್ದ ಅಧಿಸೂಚನೆಗಳನ್ನು ರದ್ದುಪಡಿಸಿ, ಹೊಸದಾಗಿ ಪ್ರವರ್ಗವಾರು ಮತ್ತು ಮಹಿಳಾ ಮೀಸಲಾತಿಯನ್ನು ನಿಗದಿಪಡಿಸಲಾಗಿದೆ
ಪ್ರಮುಖ ಅಂಶಗಳು
ಒಟ್ಟು ಸ್ಥಾನಗಳು: ರಾಜ್ಯದ 31 ಜಿಲ್ಲೆಗಳ ಎಲ್ಲಾ ತಾಲೂಕು ಪಂಚಾಯಿತಿಗಳಿಂದ ಒಟ್ಟು 3,656 ಸ್ಥಾನಗಳಿವೆ.
ಮಹಿಳಾ ಮೀಸಲಾತಿ: ಒಟ್ಟು 3,656 ಸ್ಥಾನಗಳ ಪೈಕಿ ಅರ್ಧಕ್ಕಿಂತ ಹೆಚ್ಚು, ಅಂದರೆ 1,905 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ.
ಚುನಾವಣೆ ಸಂಭಾವ್ಯ ದಿನಾಂಕ: ಜನವರಿ ಮೊದಲ ವಾರ.
ಪ್ರವರ್ಗವಾರು ರಾಜ್ಯದ ಒಟ್ಟು ಹಂಚಿಕೆ
ಎಸ್ಸಿ: 733 (ಮಹಿಳೆಯರಿಗೆ 429)
ಎಸ್ಟಿ: 394 (ಮಹಿಳೆಯರಿಗೆ 287)
ಹಿಂದುಳಿದ ವರ್ಗ ‘ಅ’ : 508 (ಮಹಿಳೆಯರಿಗೆ 306)
ಹಿಂದುಳಿದ ವರ್ಗ ‘ಬ’ : 111 (ಮಹಿಳೆಯರಿಗೆ 64)
ಸಾಮಾನ್ಯ : 1,910 (ಮಹಿಳೆಯರಿಗೆ 819)












ಓದುಗರಲ್ಲಿ ವಿನಂತಿ
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇https://chat.whatsapp.com/FM1qVgdNtJm5m1M9SL0BHc?mode