ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಇಂದು ನೀವು ಸರ್ಕಾರದ ಯಾವುದೇ ಯೋಜನೆಯ ಲಾಭವನ್ನು ಪಡೆಯಬೇಕಾದರೆ ಅದಕ್ಕೆ ಅತ್ಯಂತ ಮಹತ್ವದ ದಾಖಲೆ ಎಂದರೆ ಅದು ನಿಮ್ಮ ಆಧಾರ್ ಕಾರ್ಡ್. (Adhar card)
Thank you for reading this post, don't forget to subscribe!ಹೌದು ಸ್ನೇಹಿತರೆ ಇವತ್ತು ಆಧಾರ್ ಕಾರ್ಡ್ ಎಷ್ಟರ ಮಟ್ಟಿಗೆ ಅನಿವಾರ್ಯ ಆಗಿದೆ ಎಂದರೆ ಒಂದು ಸಾಮಾನ್ಯ ಮೊಬೈಲ್ ಸಿಮ್ ತೆಗೆದುಕೊಳ್ಳುವುದರಿಂದ ಹಿಡಿದು ಪ್ಯಾನ್ ಕಾರ್ಡ, ಪಾಸ್ ಬುಕ್ ಹಾಗೂ ಡಿಜಿಟಲ್ ಪೇಮೆಂಟ್ ಗಳಿಗೆ ಆಧಾರ್ ಕಾರ್ಡ್ ಕಡ್ಡಾಯವಾಗಿದೆ.(Adhar pan link)
ಇದನ್ನೂ ಓದಿ: ಈ ವರ್ಷ ಬೆಳೆ ಹಾನಿಯಾದ ರೈತರ ಪಟ್ಟಿ ಬಿಡುಗಡೆ ! ನಿಮ್ಮ ಹೆಸರು ಇದೆಯಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ
ಹೀಗಿರುವಾಗ ಹಲವರಿಗೆ ತಮ್ಮ ಆಧಾರ್ ಕಾರ್ಡ್ ಅನ್ನು ಬೇರೆಯವರು ಗುಪ್ತವಾಗಿ ಬಳಸುತ್ತಿದ್ದಾರೆ ಎಂಬುದರ ಬಗ್ಗೆ ಗೊತ್ತಿರುವುದಿಲ್ಲ. ತಂತ್ರಜ್ಞಾನ ಮುಂದುವರೆದಂತೆ ಅದರ ದುರುಪಯೋಗವು ಹೆಚ್ಚಾಗುತ್ತಿದೆ.(Adhar card download)
ನಿಮಗೆ ಗೊತ್ತಿಲ್ಲದಂತೆ ನಿಮ್ಮ ಆಧಾರ್ ಕಾರ್ಡ್ ನಂಬರ್ ಅನ್ನು ಬಳಸಿಕೊಂಡು ನಿಮ್ಮ ಹೆಸರಿನಲ್ಲಿ ಹಲವು ಅಕ್ರಮ ಚಟುವಟಿಕೆಗಳನ್ನು ಇಂತಹ ಆನ್ಲೈನ್ ಕಳ್ಳರು ಮಾಡುತ್ತಿರುತ್ತಾರೆ.
ಇದನ್ನೂ ಓದಿ: ಪಿಎಂ ಕಿಸಾನ್ ಗ್ರಾಮವಾರು ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಹಣ ಜಮಾ ಆಗಲ್ಲ
ನಿಮ್ಮ ಆಧಾರ್ ಕಾರ್ಡ್ ಅನ್ನು ನಿಮ್ಮನ್ನು ಹೊರತುಪಡಿಸಿ ಬೇರೆ ಯಾರಾದರೂ ಯಾವ ಕಾರಣಕ್ಕಾಗಿ ನಿಮ್ಮ ಆಧಾರ್ ಕಾರ್ಡ್ ಬಳಸಿದ್ದಾರೆ ಎಂಬುದನ್ನು ನೀವು ನಿಮ್ಮ ಮೊಬೈಲ್ ನಲ್ಲೇ ಸುಲಭವಾಗಿ ತಿಳಿದುಕೊಳ್ಳಬಹುದು.(Adhar card update)
ಹೌದು ಸ್ನೇಹಿತರೆ ಈ ಆರ್ಟಿಕಲ್ ನಲ್ಲಿ ನಾವು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಆಧಾರ್ ಕಾರ್ಡ್ ಎಲ್ಲೆಲ್ಲಿ ಬಳಕೆಯಾಗಿದೆ ಎಂದು ಚೆಕ್ ಮಾಡುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ.ತಪ್ಪದೇ ಕೊನೆಯವರೆಗೂ ಓದಿರಿ.
ನಿಮ್ಮ ಆಧಾರ್ ಕಾರ್ಡ್ ಎಲ್ಲೆಲ್ಲಿ ಬಳಕೆಯಾಗಿದೆ ಹೀಗೆ ಚೆಕ್ ಮಾಡಿ
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಆಧಾರ್ ಪ್ರಾಧಿಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ
https://uidai.gov.in/en/
ಹಂತ -2) ನಂತರ ನಿಮಗೆ ಆಧಾರ್ ಪ್ರಾಧಿಕಾರದ ಹೋಮ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು My Adhar ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ಅಲ್ಲಿ ನೀವು Adhar Services ಮೇಲೆ ಕ್ಲಿಕ್ ಮಾಡಿ ,ಅಲ್ಲಿ ನಿಮಗೆ ಹಲವು ಆಯ್ಕೆಗಳು ಕಾಣಿಸುತ್ತವೆ. ಅದರಲ್ಲಿ ನೀವು Adhar Authentication History ಆಯ್ಕೆ ಮಾಡಿ.
ಹಂತ -4) ನಂತರ ನಿಮಗೆ ಹೊಸದೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಲಾಗಿನ್ ಮೇಲೆ ಕ್ಲಿಕ್ ಮಾಡಿ, ನಿಮಗೆ ಮತ್ತೊಂದು ಹೊಸ ಪೇಜ್ ತೆರೆದುಕೊಳ್ಳುತ್ತದೆ.
ಹಂತ -5) ನಂತರ ಅಲ್ಲಿ ನೀವು ನಿಮ್ಮ ಆಧಾರ್ ನಂಬರ್ ಮತ್ತು ಕ್ಯಾಪ್ಚ ಹಾಕಿ login with OTP ಮೇಲೆ ಕ್ಲಿಕ್ ಮಾಡಿ. ಆಗ ನಿಮ್ಮ ಮೊಬೈಲ್ ನಂಬರ್ ಗೆ OTP ಬರುತ್ತದೆ. ಅದನ್ನು ಹಾಕಿ ಲಾಗಿನ್ ಆಗಿ.
ಅಲ್ಲಿ ನಿಮಗೆ ಇಲ್ಲಿಯವರೆಗೆ ನಿಮ್ಮ ಆಧಾರ್ ಕಾರ್ಡ್ ಎಲ್ಲೆಲ್ಲಿ ಬಳಕೆಯಾಗಿದೆ ಬುದರ ಬಗ್ಗೆ ಸಂಪೂರ್ಣ ಮಾಹಿತಿ ಸಿಗುತ್ತದೆ. ಒಂದು ವೇಳೆ ನಿಮಗೆ ಗೊತ್ತಿಲ್ಲದೆ ಸರ್ಕಾರದ ಬೇರೆ ಯಾವುದಾದರೂ ಯೋಜನೆಗೆ ಕಳ್ಳರು ನಿಮ್ಮ ಆಧಾರ್ ಬಳಸಿ ನಿಮ್ಮ ಹೆಸರಿನಲ್ಲಿ ಲಾಭ ಪಡೆಯುತ್ತಿದ್ದರೂ ನಿಮಗೆ ಅಲ್ಲಿ ಆ ಯೋಜನೆ ಹೆಸರು ಕಾಣಿಸುತ್ತದೆ.
ಇದನ್ನೂ ಓದಿ: ಗೂಡ್ಸ್ ವಾಹನ, ಆಟೋ ಟ್ಯಾಕ್ಸಿ ಸೇರಿ ಇತರೆ ನಾಲ್ಕು ಚಕ್ರ ವಾಹನ ಖರೀದಿಗೆ 3 ಲಕ್ಷ ಸಬ್ಸಿಡಿ ಸಹಾಯಧನ ಸಿಗಲಿದೆ ! ಈಗಲೇ ಅರ್ಜಿ ಸಲ್ಲಿಸಿ
ಈ ರೀತಿಯಾಗಿ ನೀವು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಆಧಾರ್ ಕಾರ್ಡ್ ಅನ್ನು ಯಾರಾದರೂ ಗುಪ್ತವಾಗಿ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆಯೇ ಎಂದು ನೀವು ಸುಲಭವಾಗಿ ಚೆಕ್ ಮಾಡಬಹುದು.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode