ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರ ಇತ್ತೀಚೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಶ್ರೇಯೋಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿವೆ. ಈ ಯೋಜನೆಗಳ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮೂಲಕ ಅರ್ಹ ರೈತರಿಗೆ ಆರ್ಥಿಕವಾಗಿ ಧನಸಹಾಯವನ್ನು ನೀಡುತ್ತಿವೆ.
Thank you for reading this post, don't forget to subscribe!ಈ ಯೋಜನೆಗಳ ಹಣ ಅರ್ಹ ರೈತರ ಖಾತೆಗೆ ಜಮಾ ಆಗಬೇಕಾದರೆ ಅಂತಹ ರೈತರ ಆಧಾರ್ ನಂಬರ್ ಅವರ ಎಫ್ ಐ ಡಿ ನಂಬರಗೆ ಲಿಂಕ್ ಆಗಬೇಕಾದುದು ಕಡ್ಡಾಯವಾಗಿದೆ. ಒಂದು ವೇಳೆ ಆಧಾರ್ ನಂಬರ್ ಎಫ್ ಐ ಡಿ ಗೆ ಲಿಂಕ್ ಆಗದೇ ಇದ್ದರೆ ಅಂತಹ ರೈತರ ಖಾತೆಗೆ ಹಣ ಜಮಾ ಆಗುವುದಿಲ್ಲ.
ರಾಜ್ಯ ಸರಕಾರವು ಇದೀಗ ಆಧಾರ್ ನಂಬರ್ ಎಫ್ ಐ ಡಿ ಗೆ ಲಿಂಕ್ ಆಗದೇ ಇರುವ ರೈತರ ಹೆಸರಿರುವ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಹೆಸರು ಇರುವ ರೈತರಿಗೆ ಬೆಳೆ ಪರಿಹಾರ ಹಣ, ಬೆಳೆ ವಿಮೆ ಹಣ, ಪಿಎಂ ಕಿಸಾನ್ ಹಣ ಜಮಾ ಆಗುವುದಿಲ್ಲ.
ಇದನ್ನೂ ಓದಿ: ಪಿಎಂ ಕಿಸಾನ್ 21 ನೇ ಕಂತಿನ ಹಣ ಈ ದಿನಾಂಕದಂದು ಜಮಾ ಆಗಲಿದೆ! ತಪ್ಪದೇ ಈ ಕೆಲಸ ಮಾಡಿ
.https://pmkisan.gov.in/Rpt_BeneficiaryStatus_pub.aspx
ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವಾ ಎಂಬುದನ್ನು ಚೆಕ್ ಮಾಡುವುದು ಹೇಗೆ, ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಏನು ಮಾಡಬೇಕು ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಆಧಾರ್ ನಂಬರ್ ಲಿಂಕ್ ಆಗದೇ ಇರುವ ರೈತರ ಪಟ್ಟಿ ಚೆಕ್ ಮಾಡುವುದು ಹೇಗೆ?
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://fruitspmk.karnataka.gov.in/MISReport/GetDetailsByAadhaar.aspx
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನಿಮಗೆ ಎಲ್ಲಾ ಜಿಲ್ಲೆಗಳ ಹೆಸರು ಕಾಣಿಸುತ್ತದೆ. ಅದರಲ್ಲಿ ನೀವು ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ನಿಮ್ಮ ಜಿಲ್ಲೆಯ ಎಲ್ಲಾ ತಾಲೂಕುಗಳ ಹೆಸರು ಕಾಣಿಸುತ್ತದೆ. ಅದರಲ್ಲಿ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಹೋಬಳಿಯ ಹೆಸರಿನ ಮೇಲೆ ಕ್ಲಿಕ್ ಮಾಡಿ.

ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನಿಮಗೆ ನಿಮ್ಮ ಹೋಬಳಿಯಲ್ಲಿ ಬರುವ ಎಲ್ಲ ಗ್ರಾಮಗಳ ಹೆಸರು ಕಾಣಿಸುತ್ತದೆ. ನೀವು ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿ.

ನಂತರ ನಿಮಗೆ ಒಂದು ಪಟ್ಟಿ ಕಾಣಿಸುತ್ತದೆ. ಅದರಲ್ಲಿ ನಿಮ್ಮ ಗ್ರಾಮದಲ್ಲಿ ಇಲ್ಲಿಯವರೆಗೆ ಎಫ್ ಐ ಡಿ ನಂಬರಿಗೆ ಆಧಾರ ನಂಬರ್ ಲಿಂಕ್ ಆಗದೇ ಇರುವ ರೈತರ ಹೆಸರು ಕಾಣಿಸುತ್ತದೆ. ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ.
ಇದನ್ನೂ ಓದಿ: ಇಲ್ಲಿಯವರೆಗೆ ನಿಮ್ಮ ಎಷ್ಟು ಸಾಲ ಮನ್ನಾ ಆಗಿದೆ ಎಂಬುದನ್ನ ಒಂದೇ ನಿಮಿಷದಲ್ಲಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ !
https://mahitikanaja.karnataka.gov.in/Service/Service/2066https:/
ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಸರಕಾರದ ಯಾವ ಯೋಜನೆಯ ಹಣವೂ ಜಮಾ ಆಗಲ್ಲ. ಆದ್ದರಿಂದ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್ ಅಥವಾ ಪಂಚಾಯತಿಗೆ ಹೋಗಿ ಕೂಡಲೇ ಲಿಂಕ್ ಮಾಡಿ.
ಓದುಗರಲ್ಲಿ ವಿನಂತಿ,
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇
https://chat.whatsapp.com/FM1qVgdNtJm5m1M9SL0BHc?mode=ac_t