ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತ ಮಿತ್ರರೇ ರಾಜ್ಯ ಸರ್ಕಾರವು ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳಿಗೆ ರೇಷನ್ ಕಾರ್ಡ್ (BPL Card) ಮೂಲಕ ಪ್ರತಿ ತಿಂಗಳು ಉಚಿತ ಅಕ್ಕಿ, ಎಣ್ಣೆ ದವಸ ಧಾನ್ಯಗಳನ್ನು ನೀಡುತ್ತಿದೆ.
Thank you for reading this post, don't forget to subscribe!ಈ ಯೋಜನೆ ಅಡಿಯಲ್ಲಿ ಬಡತನ ರೇಖೆಗಿಂತ ಕೆಳಗಿರುವ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಪಡಿತರ ಚೀಟಿ (Ration Card) ವಿತರಣೆ ಮಾಡಿ,ಕುಟುಂಬದ ಪ್ರತಿಯೊಬ್ಬ ಸದಸ್ಯನಿಗೆ ತಲಾ 10 ಕೆಜಿ ಅಕ್ಕಿ ಉಚಿತ ರೇಷನ್ ನೀಡಲಾಗುತ್ತಿದೆ.
ಇದನ್ನೂ ಓದಿ: ಗೃಹಲಕ್ಷ್ಮೀ: ಅರ್ಹ ಮತ್ತು ಅನರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇದರಲ್ಲಿ ನಿಮ್ಮ ಮನೆಯವರ ಹೆಸರು ಇದೆಯಾ ಚೆಕ್ ಮಾಡಿ
ಆದರೆ ಈ ಯೋಜನೆಯನ್ನು ಹಲವರು ದುರುಪಯೋಗಪಡಿಸಿಕೊಂಡು ಅಕ್ರಮವಾಗಿ ರೇಷನ್ ಕಾರ್ಡ್ ಪಡೆದು ಉಚಿತ ಅಕ್ಕಿ, ದವಸ ಧಾನ್ಯಗಳನ್ನು ಪಡೆಯುತ್ತಿದ್ದಾರೆ. ಇಂತಹವರ ವಿರುದ್ಧ ಇದೀಗ ರಾಜ್ಯ ಸರ್ಕಾರವು ಕಠಿಣ ಕ್ರಮ ಕೈಗೊಳ್ಳುತ್ತಿದೆ.
ಅಲ್ಲದೆ ಈ ಯೋಜನೆ ಅಡಿಯಲ್ಲಿ ಕುಟುಂಬದ ಪ್ರತಿಯೊಬ್ಬ ಸದಸ್ಯನಿಗೆ 5 ಕೆಜಿ ಅಕ್ಕಿ ಹಾಗೂ ಇನ್ನುಳಿದ 5 ಕೆಜಿ ಅಕ್ಕಿಯ ಬದಲಾಗಿ ₹680 ಹಣವನ್ನು ನೇರವಾಗಿ ಆಯಾ ಕುಟುಂಬದ ಯಜಮಾನ/ಯಜಮಾನಿಯ ಖಾತೆಗೆ ಜಮಾ ಮಾಡಲಾಗುತ್ತಿದೆ.
ಇದನ್ನೂ ಓದಿ: 50,000 ಕ್ಕೂ ಹೆಚ್ಚು ರೇಷನ್ ಕಾರ್ಡ್ ರದ್ದು ! ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆಯಾ ಚೆಕ್ ಮಾಡಿ
ಆದರೆ ಸರ್ವರ್ ಪ್ರಾಬ್ಲಮ್ ಆಗಿರುವುದರಿಂದ ಈ ತಿಂಗಳು ಬರಬೇಕಾಗಿದ್ದ ಅನ್ನ ಭಾಗ್ಯ ಯೋಜನೆ ಹಣ ಇನ್ನೂ ಅರ್ಹ ಫಲಾನುಭವಿಗಳ ಖಾತೆಗೆ ಜಮಾ ಆಗಿಲ್ಲ. ಆದರೆ ಶೀಘ್ರದಲ್ಲೇ ತಾಂತ್ರಿಕ ದೋಷಗಳನ್ನು ಪರಿಹರಿಸಿ ಎಲ್ಲಾ ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಅವರು ತಿಳಿಸಿದ್ದಾರೆ.
ಇನ್ನು ಹಿಂದಿನ ತಿಂಗಳ ಅನ್ನ ಭಾಗ್ಯ ಯೋಜನೆ ಹಣ ಜಮಾ ಆಗಿದೆಯಾ ಅಥವಾ ಇಲ್ಲವಾ,ಯಾವ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿದೆ ಎಂಬುದನ್ನು ಕೆಳಗೆ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಅನ್ನಭಾಗ್ಯ ಹಣ ಜಮಾ ಆಗಿದೆಯಾ ಎಂದು ಚೆಕ್ ಮಾಡುವ ವಿಧಾನ:
ಹಂತ -1) ಮೊಟ್ಟ ಮೊದಲು ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಆ್ಯಪ್ ಆದ DBT KARNATAKA ಲಿಂಕ್ ಮೇಲೆ ಕ್ಲಿಕ್ ಮಾಡಿ ಗೂಗಲ್ ಪ್ಲೇಸ್ಟೋರಿಂದ ಇನ್ಸ್ಟಾಲ್ ಮಾಡಿಕೊಳ್ಳಿ.
https://play.google.com/store/apps/details?id=com.dbtkarnataka
ಹಂತ -2) ನಂತರ ನಿಮ್ಮ ಹೆಸರು, ಆಧಾರ್ ನಂಬರ್ ಹಾಕಿ ನಿಮ್ಮ ಮೊಬೈಲ್ ಗೆ OTP ಬರುತ್ತದೆ. ಅದನ್ನು ಹಾಕಿ ಲಾಗಿನ್ ಆಗಿ. ನಂತರ ನಿಮಗೆ ಕೆಳಗೆ ತೋರಿಸಿದಂತೆ ಹೋಮ್ ಪೇಜ್ ಕಾಣುತ್ತದೆ. ಅಲ್ಲಿ ನೀವು ಪಾವತಿ ಸ್ಥಿತಿ (Payment Status) ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಗೃಹ ಲಕ್ಷ್ಮಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆ ಎಂಬ ಎರಡು ಆಯ್ಕೆ ಕಾಣುತ್ತವೆ. ನೀವು ಅನ್ನಭಾಗ್ಯ ಯೋಜನೆ ಮೇಲೆ ಕ್ಲಿಕ್ ಮಾಡಿ.
ಹಂತ -4) ನಂತರ ಅಲ್ಲಿ ನಿಮಗೆ ಇಲ್ಲಿಯವರೆಗೆ ಎಷ್ಟು ಹಣ ಜಮಾ ಆಗಿದೆ ಮತ್ತು ಯಾವ ಯಾವ ತಿಂಗಳ ಹಣ ಜಮಾ ಆಗಿದೆ ಎಂಬುದರ ಸಂಪೂರ್ಣ ಮಾಹಿತಿ ಸಿಗುತ್ತದೆ.
ಈ ರೀತಿಯಾಗಿ ನೀವು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಅನ್ನಭಾಗ್ಯ ಯೋಜನೆಯ ಹಣ ಜಮಾ ಆಗಿದೆಯಾ ಅಥವಾ ಇಲ್ಲವಾ ಎಂಬುದನ್ನು ಸುಲಭವಾಗಿ ಚೆಕ್ ಮಾಡಬಹುದು.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಿದ್ದು, ವಿದ್ಯಾರ್ಥಿಗಳು ತಮ್ಮ ರ್ಯಾಂಕ್, ಅಂಕಗಳು ಹಾಗೂ ಸ್ಕೋರ್ಕಾರ್ಡ್ನ್ನು ಆನ್ಲೈನ್ನಲ್ಲಿ ಪರಿಶೀಲಿಸಬಹುದು. ಇಂಜಿನಿಯರಿಂಗ್, ಫಾರ್ಮಸಿ, ಕೃಷಿ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆಗೆ ಇದು ಮಹತ್ವದ ಹಂತವಾಗಿದೆ.
- ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯಲ್ಲಿ ಹೆಸರು ತಿದ್ದುಪಡಿ ಮಾಡುವಂತೆ ಪಹಣಿಯಲ್ಲಿ ಹೆಸರು ತಪ್ಪಾಗಿರುವುದನ್ನು ಸಹ ರೈತರು ಸರಿಪಡಿಸಬಹುದುರೈತರು ತಮ್ಮ ಪಹಣಿಗಳಲ್ಲಿ ಹೆಸರು ತಂದೆಯ ಹೆಸರನ್ನು ಸರಿಯಾಗಿ ಗಮನಿಸಿರುವುದಿಲ್ಲ. ಸ್ಪೆಲಿಂಗ್ ಮಿಸ್ಟೇಕ್ ಇದ್ದರೂ ನೀವು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತೀರಿ. ಹಾಗಾಗಿ ನಿಮ್ಮ ಪಹಣಿಯನ್ನು ಒಮ್ಮೆ ಪರಿಶೀಲಿಸಿಕೊಳ್ಳಿ. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ಸಂಪೂರ್ಣ ಮಾಹಿತಿ.
- Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ ಹೆಚ್ಚು ಸುರಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಾವಿರಾರು ರೈತರ ಬೆಳೆಗಳು ಹಾನಿಗೆ ಒಳಗಾಗಿವೆ.
- Trump Warns Oman Over Hormuz Strait Mediation With IranAmid escalating tensions in the Strait of Hormuz, the United States has launched fresh strikes on Iran following alleged drone threats targeting American vessels. Explosions were reported near Bandar Abbas as regional security concerns continue to intensify.
- ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ ಊಹಾಪೋಹಗಳ ನಡುವೆ ಸಂವಿಧಾನಾತ್ಮಕ ಪ್ರಕ್ರಿಯೆ ಹೇಗಿರುತ್ತದೆ ಎಂಬುದರ ಬಗ್ಗೆ ಇದೀಗ ಕುತೂಹಲ ಹೆಚ್ಚಾಗಿದೆ.
- ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj Mishra ರಾತ್ರೋರಾತ್ರಿ ಮುಂಬೈಗೆ ತೆರಳಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿದೆ. ಕಾಂಗ್ರೆಸ್ ಒಳರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಬದಲಾವಣೆ ಚರ್ಚೆ ಮತ್ತೆ ಜೋರಾಗಿದೆ.
- Milk-Curd: ಹಾಲಿನ ಜೊತೆ ಮೊಸರೂ ಕುಡೀತೀರಾ? ಇದು ಎಷ್ಟು ಡೇಂಜರ್ ಗೊತ್ತಾ?ಹಾಲಿನ ಜೊತೆ ಮೊಸರು ಸೇವಿಸುವ ಅಭ್ಯಾಸ ಇದೆಯಾ? ಆಯುರ್ವೇದದ ಪ್ರಕಾರ ಈ ಫುಡ್ ಕಾಂಬಿನೇಷನ್ ಜೀರ್ಣಕ್ರಿಯೆಗೆ ತೊಂದರೆ ಉಂಟುಮಾಡಬಹುದು. ಗ್ಯಾಸ್ಟ್ರಿಕ್, ಅಜೀರ್ಣ, ಹೊಟ್ಟೆ ಉಬ್ಬರ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳ ಅಪಾಯ ಹೆಚ್ಚಾಗಬಹುದು. ಹಾಲು-ಮೊಸರು ಒಂದೇ ವೇಳೆ ಸೇವಿಸುವ ಮುನ್ನ ಈ ಮಾಹಿತಿ ತಿಳಿದುಕೊಳ್ಳಿ.
- ಪೋಷಕರೇ ಗಮನಿಸಿ : `CET’ ಸರ್ಕಾರಿ ಕೋಟಾದ ಸೀಟು ಪಡೆದರೂ ಕಾಲೇಜುಗಳು ಹೆಚ್ಚು ಶುಲ್ಕ ಕೇಳಿದರೆ ಜಸ್ಟ್ ಹೀಗೆ ದೂರು ನೀಡಿ.!CET ಮೂಲಕ ಸರ್ಕಾರಿ ಕೋಟಾದ ಸೀಟು ಪಡೆದ ವಿದ್ಯಾರ್ಥಿಗಳಿಂದ ಕೆಲ ಕಾಲೇಜುಗಳು ಹೆಚ್ಚುವರಿ ಶುಲ್ಕ ಕೇಳುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ನಿಗದಿತ ಶುಲ್ಕಕ್ಕಿಂತ ಹೆಚ್ಚು ಹಣ ಕೇಳಿದರೆ ಪೋಷಕರು ಹಾಗೂ ವಿದ್ಯಾರ್ಥಿಗಳು ತಕ್ಷಣವೇ KEA ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಅಧಿಕೃತವಾಗಿ ದೂರು ಸಲ್ಲಿಸಬಹುದು. ದೂರು ನೀಡುವ ಸರಳ ವಿಧಾನ ಹಾಗೂ ಅಗತ್ಯ ದಾಖಲೆಗಳ ಮಾಹಿತಿ ಇಲ್ಲಿದೆ.
- ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ ಮುನ್ಸೂಚನೆ, ಯೆಲ್ಲೂ ಅಲರ್ಟ್ ಘೋಷಣೆರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ, ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜನರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
- BREAKING NEWS : ಮುಖ್ಯಮಂತ್ರಿ ಸ್ಥಾನಕ್ಕೆ ಪರಮೇಶ್ವಸರ್ ಹೆಸರು ಪ್ರಸ್ತಾಪಿಸಿದ ಸಿಎಂ ಸಿದ್ದರಾಮಯ್ಯ.!ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಡಾ. ಜಿ. ಪರಮೇಶ್ವರ್ ಅವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದಾರೆ ಎನ್ನುವ ಮಾಹಿತಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಮುಂದಿನ ನಿರ್ಧಾರ ಏನು ಎಂಬುದರ ಮೇಲೆ ರಾಜ್ಯ ರಾಜಕೀಯದ ಕುತೂಹಲ ಹೆಚ್ಚಾಗಿದೆ.









