ಈ ಯೋಜನೆ ಅಡಿಯಲ್ಲಿ ಬಡತನ ರೇಖೆಗಿಂತ ಕೆಳಗಿರುವ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಪಡಿತರ ಚೀಟಿ (Ration Card) ವಿತರಣೆ ಮಾಡಿ,ಕುಟುಂಬದ ಪ್ರತಿಯೊಬ್ಬ ಸದಸ್ಯನಿಗೆ ತಲಾ 10 ಕೆಜಿ ಅಕ್ಕಿ ಉಚಿತ ರೇಷನ್ ನೀಡಲಾಗುತ್ತಿದೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತ ಮಿತ್ರರೇ ರಾಜ್ಯ ಸರ್ಕಾರವು ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳಿಗೆ ರೇಷನ್ ಕಾರ್ಡ್ (BPL Card) ಮೂಲಕ ಪ್ರತಿ ತಿಂಗಳು ಉಚಿತ ಅಕ್ಕಿ, ಎಣ್ಣೆ ದವಸ ಧಾನ್ಯಗಳನ್ನು ನೀಡುತ್ತಿದೆ.
Thank you for reading this post, don't forget to subscribe!ಈ ಯೋಜನೆ ಅಡಿಯಲ್ಲಿ ಬಡತನ ರೇಖೆಗಿಂತ ಕೆಳಗಿರುವ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಪಡಿತರ ಚೀಟಿ (Ration Card) ವಿತರಣೆ ಮಾಡಿ,ಕುಟುಂಬದ ಪ್ರತಿಯೊಬ್ಬ ಸದಸ್ಯನಿಗೆ ತಲಾ 10 ಕೆಜಿ ಅಕ್ಕಿ ಉಚಿತ ರೇಷನ್ ನೀಡಲಾಗುತ್ತಿದೆ.
ಆದರೆ ಈ ಯೋಜನೆಯನ್ನು ಹಲವರು ದುರುಪಯೋಗಪಡಿಸಿಕೊಂಡು ಅಕ್ರಮವಾಗಿ ರೇಷನ್ ಕಾರ್ಡ್ ಪಡೆದು ಉಚಿತ ಅಕ್ಕಿ, ದವಸ ಧಾನ್ಯಗಳನ್ನು ಪಡೆಯುತ್ತಿದ್ದಾರೆ. ಇಂತಹವರ ವಿರುದ್ಧ ಇದೀಗ ರಾಜ್ಯ ಸರ್ಕಾರವು ಕಠಿಣ ಕ್ರಮ ಕೈಗೊಳ್ಳುತ್ತಿದೆ.
ಅಲ್ಲದೆ ಈ ಯೋಜನೆ ಅಡಿಯಲ್ಲಿ ಕುಟುಂಬದ ಪ್ರತಿಯೊಬ್ಬ ಸದಸ್ಯನಿಗೆ 5 ಕೆಜಿ ಅಕ್ಕಿ ಹಾಗೂ ಇನ್ನುಳಿದ 5 ಕೆಜಿ ಅಕ್ಕಿಯ ಬದಲಾಗಿ ₹680 ಹಣವನ್ನು ನೇರವಾಗಿ ಆಯಾ ಕುಟುಂಬದ ಯಜಮಾನ/ಯಜಮಾನಿಯ ಖಾತೆಗೆ ಜಮಾ ಮಾಡಲಾಗುತ್ತಿದೆ.
ಆದರೆ ಸರ್ವರ್ ಪ್ರಾಬ್ಲಮ್ ಆಗಿರುವುದರಿಂದ ಈ ತಿಂಗಳು ಬರಬೇಕಾಗಿದ್ದ ಅನ್ನ ಭಾಗ್ಯ ಯೋಜನೆ ಹಣ ಇನ್ನೂ ಅರ್ಹ ಫಲಾನುಭವಿಗಳ ಖಾತೆಗೆ ಜಮಾ ಆಗಿಲ್ಲ. ಆದರೆ ಶೀಘ್ರದಲ್ಲೇ ತಾಂತ್ರಿಕ ದೋಷಗಳನ್ನು ಪರಿಹರಿಸಿ ಎಲ್ಲಾ ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಅವರು ತಿಳಿಸಿದ್ದಾರೆ.
ಇನ್ನು ಹಿಂದಿನ ತಿಂಗಳ ಅನ್ನ ಭಾಗ್ಯ ಯೋಜನೆ ಹಣ ಜಮಾ ಆಗಿದೆಯಾ ಅಥವಾ ಇಲ್ಲವಾ,ಯಾವ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿದೆ ಎಂಬುದನ್ನು ಕೆಳಗೆ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಹಂತ -1) ಮೊಟ್ಟ ಮೊದಲು ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಆ್ಯಪ್ ಆದ DBT KARNATAKA ಲಿಂಕ್ ಮೇಲೆ ಕ್ಲಿಕ್ ಮಾಡಿ ಗೂಗಲ್ ಪ್ಲೇಸ್ಟೋರಿಂದ ಇನ್ಸ್ಟಾಲ್ ಮಾಡಿಕೊಳ್ಳಿ.
ಹಂತ -2) ನಂತರ ನಿಮ್ಮ ಹೆಸರು, ಆಧಾರ್ ನಂಬರ್ ಹಾಕಿ ನಿಮ್ಮ ಮೊಬೈಲ್ ಗೆ OTP ಬರುತ್ತದೆ. ಅದನ್ನು ಹಾಕಿ ಲಾಗಿನ್ ಆಗಿ. ನಂತರ ನಿಮಗೆ ಕೆಳಗೆ ತೋರಿಸಿದಂತೆ ಹೋಮ್ ಪೇಜ್ ಕಾಣುತ್ತದೆ. ಅಲ್ಲಿ ನೀವು ಪಾವತಿ ಸ್ಥಿತಿ (Payment Status) ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಗೃಹ ಲಕ್ಷ್ಮಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆ ಎಂಬ ಎರಡು ಆಯ್ಕೆ ಕಾಣುತ್ತವೆ. ನೀವು ಅನ್ನಭಾಗ್ಯ ಯೋಜನೆ ಮೇಲೆ ಕ್ಲಿಕ್ ಮಾಡಿ.
ಹಂತ -4) ನಂತರ ಅಲ್ಲಿ ನಿಮಗೆ ಇಲ್ಲಿಯವರೆಗೆ ಎಷ್ಟು ಹಣ ಜಮಾ ಆಗಿದೆ ಮತ್ತು ಯಾವ ಯಾವ ತಿಂಗಳ ಹಣ ಜಮಾ ಆಗಿದೆ ಎಂಬುದರ ಸಂಪೂರ್ಣ ಮಾಹಿತಿ ಸಿಗುತ್ತದೆ.
ಈ ರೀತಿಯಾಗಿ ನೀವು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಅನ್ನಭಾಗ್ಯ ಯೋಜನೆಯ ಹಣ ಜಮಾ ಆಗಿದೆಯಾ ಅಥವಾ ಇಲ್ಲವಾ ಎಂಬುದನ್ನು ಸುಲಭವಾಗಿ ಚೆಕ್ ಮಾಡಬಹುದು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…
ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…