ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ,ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ವರ್ಷಕ್ಕೆ 943 ಟನ್ ಆಹಾರ ವ್ಯರ್ಥವಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ್ದಾರೆ. ಅನ್ನವನ್ನು ವ್ಯರ್ಥ ಮಾಡುವುದು ಅನ್ನಬ್ರಹ್ಮನಿಗೆ ಮಾಡುವ ಅವಮಾನ ಎಂದು ಅವರು ಹೇಳಿದರು. ಹಸಿವಿನ ಸಂಕಟ ನನಗೆ ಗೊತ್ತು, ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ ಎಂದರು. ಅನ್ನಭಾಗ್ಯದ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ,ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ವರ್ಷಕ್ಕೆ 943 ಟನ್ ಆಹಾರ ವ್ಯರ್ಥವಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ್ದಾರೆ. ಅನ್ನವನ್ನು ವ್ಯರ್ಥ ಮಾಡುವುದು ಅನ್ನಬ್ರಹ್ಮನಿಗೆ ಮಾಡುವ ಅವಮಾನ ಎಂದು ಅವರು ಹೇಳಿದರು. ಹಸಿವಿನ ಸಂಕಟ ನನಗೆ ಗೊತ್ತು, ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ ಎಂದರು. ಅನ್ನಭಾಗ್ಯದ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು
Thank you for reading this post, don't forget to subscribe!
ಬೆಂಗಳೂರು : ಅನ್ನಭಾಗ್ಯದ ಅಕ್ಕಿಯನ್ನು ಸಂಗ್ರಹಿಸಿ ಕಾಳ ಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಾಳ ಸಂತೆ ಮಾರಾಟ ತಪ್ಪಿಸಲು 5 ಕೆಜಿ ಅಕ್ಕಿ ಕೊಟ್ಟು ಉಳಿದ ಐದು ಕೆಜಿ ಕಾಳು, ಬೇಳೆ ವಿತರಿಸಲು ತೀರ್ಮಾನಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ವಿಶ್ವ ಆಹಾರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕವಿ ಬೇಂದ್ರೆಯವರು ರೈತರನ್ನು ಅನ್ನಬ್ರಹ್ಮ ಎಂದು ಕರೆದಿದ್ದಾರೆ. ಆದ್ದರಿಂದ ಅನ್ನ ವ್ಯರ್ಥ ಮಾಡುವುದು, ಬಿಸಾಡುವುದು ಅನ್ನಬ್ರಹ್ಮನಿಗೆ ಮಾಡುವ ಅವಮಾನ. ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು, ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ಕಾಂಗ್ರೆಸ್ ಬದ್ದತೆ. ಹೀಗಾಗಿ ಬಡವರ ಪರವಾದ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು ಕಾಂಗ್ರೆಸ್. ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಪ್ರಧಾನಿ ಮನ ಮೋಹನ್ ಸಿಂಗ್. ಆಹಾರ ಭದ್ರತೆ ಕಾಯ್ದೆಯನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿತ್ತು. ಬಡವರ ವಿರೋಧಿ ನೀತಿ ಬಿಜೆಪಿಯ ಸಿದ್ಧಾಂತ. ಇದನ್ನು ಅರ್ಥ ಮಾಡಿಕೊಳ್ಳಬೇಕು. ಆ ಕಡೆ ಬಿಜೆಪಿಗೂ ಚಪ್ಪಾಳೆ ತಟ್ಟೋದು, ಈ ಕಡೆ ಬಡವರ ಪರ ಕಾರ್ಯಕ್ರಮ ಕೊಟ್ಟ ಕಾಂಗ್ರೆಸ್ಸಿಗೂ ಚಪ್ಪಾಳೆ ತಟ್ಟೋದು ಮಾಡಬೇಡಿ. ಅನ್ನದ ಪರವಾಗಿ ಇರುವ ಕಾಂಗ್ರೆಸ್ ಬದ್ಧತೆ ಅರ್ಥ ಮಾಡಿಕೊಳ್ಳಿ ಎಂದು ಕರೆ ನೀಡಿದರು. ಆಹಾರದ ಬಗ್ಗೆ ಜಾಗ್ರತೆ, ಸಣ್ಣ ರೈತರ ರಕ್ಷಣೆ ಮಾಡುವುದು ನಮ್ಮ , ನಿಮ್ಮ ಮತ್ತು ನಾಗರಿಕ ಸಮಾಜದ ಜವಾಬ್ದಾರಿ ಎಂದರು
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode
"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…
ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…
BBK 12 ಫಿನಾಲೆಗೆ ಮುನ್ನವೇ ಬಿಗ್‌ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…
ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…
ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…
ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…