ನಿಮ್ಮ ಬೆಳೆ ಪರಿಹಾರ ಹಣ ಇನ್ನೂ ಜಮೆಯಾಗಿಲ್ಲವೇ? ವಿಳಂಬವಾಗುವುದನ್ನು ತಪ್ಪಿಸಲು ರೈತರು ಈ ಅಗತ್ಯವಾದ ಕೆಲಸಗಳನ್ನು ಕಡ್ಡಾಯವಾಗಿ ಮಾಡಬೇಕು. ಇಲ್ಲಿದೆ ಸಂಪೂರ್ಣ ಮಾಹಿತಿ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.
Thank you for reading this post, don't forget to subscribe!ಪ್ರಸಕ್ತ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಠಿ ಹಾನಿಯಿಂದ ಹಾಳಾದ ಬೆಳೆಗಳಿಗೆ ರಾಜ್ಯ ಸರ್ಕಾರ ಪರಿಹಾರ ಘೋಷಿಸಿದೆ, ವಿವಿಧ ತಾಂತ್ರಿಕ ಕಾರಣಗಳಿಂದ ಪರಿಹಾರ ಹಣ ಪಾವತಿ ವಿಫಲಗೊಂಡ ಪ್ರಕರಣಗಳಲ್ಲಿ ಸಂಬಂಧಿಸಿದ ರೈತರು ರೈತ ಸಂಪರ್ಕ ಕೇಂದ್ರ ಮತ್ತು ಬ್ಯಾಂಕ್‌ಗಳಿಗೆ ಭೇಟಿ ನೀಡಿ ತಾಂತ್ರಿಕ ಸಮಸ್ಯೆ ಬಗೆಹರಿಸುವಂತೆ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಮನವಿ ಮಾಡಿದ್ದಾರೆ.
ಜಿಲ್ಲೆಯಾದ್ಯಂತ ವಿವಿಧ ಕಾರಣಗಳಿಂದ 12,313 ಪ್ರಕರಣಗಳಲ್ಲಿ ಪರಿಹಾರ ಹಣ ಪಾವತಿ ವಿಫಲವಾಗಿದೆ, ಇಂತಹ ರೈತರ ಪಟ್ಟಿಯನ್ನು ಸಂಬಂಧಿಸಿದೆ ಗ್ರಾಮಗಳ ಕೃಷಿ ಅಧಿಕಾರಿ, ಸಹಾಯಕ ಕೃಷಿ ಅಧಿಕಾರಿಗಳು ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಕಚೇರಿಗಳ ಸೂಚನಾ ಫಲಕಗಳ ಪಟ್ಟಿ ಪ್ರಕಟಿಸಿದ ಪರಿಣಾಮ ಇದೂವರೆಗೆ 3,860 ರೈತರು ಸಮಸ್ಯೆ ಸರಿಪಡಿಸಿದ್ದು, ಇನ್ನುಳಿದಂತೆ 8,464 ರೈತರ ಸಮಸ್ಯೆ ಸರಿಪಡಿಸಿಲ್ಲ.
ಫ್ರೂಟ್ಸ್ ತಂತ್ರಾcಶ ಹಾಗೂ ಆಧಾರ್‌ನಲ್ಲಿ ಹೆಸರು ಹೊಂದಾಣಿಕೆಯಲ್ಲಿ ಸಮಸ್ಯೆಯಿಂದ 1,549 ರೈತರಿಗೆ ಪರಿಹಾರ ಹಣ ಪಡೆಯಲು ಸಾಧ್ಯವಾಗಿಲ್ಲ. ಇಂತಹ ರೈತರು ಕೂಡಲೇ ಸಂಬಂಧಪಟ್ಟ ರೈತಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಅಧೇ ರೀತಿ 10,544 ಪ್ರಕರಣಗಳಲ್ಲಿ ಆಧಾರ್-ಎನ್.ಪಿ.ಸಿ.ಐ ಮ್ಯಾಪಿಂಗ್ ಆಗದ ಕಾರಣ ಪರಿಹಾರ ಪಾವತಿ ಹಣ ಖಾತೆಗೆ ಜಮೆಯಾಗಿರುವುದಿಲ್ಲ. ಇಂತಹ ರೈತರು ಬ್ಯಾಂಕ್‌ಗೆ ಭೇಟಿ ನೀಡಬೇಕು ಎಂದು ಡಿ.ಸಿ. ತಿಳಿಸಿದ್ದಾರೆ.
ಇದಲ್ಲದೆ ಕೆ.ವೈ.ಸಿ. ಪೆಂಡಿAಗ್, ನಿಷ್ಕಿçÃಯ ಬ್ಯಾಂಕ್ ಖಾತೆ, ಖಾತೆ ರದ್ದು, ನಿಖರವಲ್ಲದ ಬ್ಯಾಂಕ್ ಖಾತೆ, ನಿಷ್ಕಿçÃಯ ಆಧಾರ್ ಸಂಖ್ಯೆ ಜೋಡಣೆದಂತಹ ಅನೇಕ ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಪರಿಹಾರ ಹಣ ಪಡೆಯಲು ವಿಫಲರಾಗಿರುವ ರೈತರು ಕೂಡಲೆ ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಪರಿಹಾರ ಹಣ ಪಡೆಯುವಂತೆ ಜಿಲ್ಲಾಧಿಕಾರಿಗಳು ರೈತರಲ್ಲಿ ಮನವಿ ಮಾಡಿದ್ದಾರೆ.
ಪ್ರಸಕ್ತ 2025ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಾದ್ಯಂತ ಅಪಾರ ಪ್ರಮಾಣದ ಮಳೆ ಹಾಗೂ ಅತಿವೃಷ್ಟಿಯಿಂದ ಬೆಳೆ ಹಾನಿಯಾದ ರೈತರಿಗೆ 498.72 ಕೋಟಿ ರೂ. ಇನ್ಪುಟ್ ಸಬ್ಸಿಡಿ ಪರಿಹಾರ ಬಿಡುಗಡೆಯಾಗಿದ್ದು, ಸದರಿ ಹಣವನ್ನು ರೈತರ ಸಾಲದ ಖಾತೆಗೆ ಹೊಂದಾಣಿಕೆ ಅಥವಾ ಜಮೆ ಮಾಡುವಂತಿಲ್ಲ. ಇದನ್ನು ಉಲ್ಲಂಘಿಸಿದಲ್ಲಿ ಬ್ಯಾಂಕ್ ಮ್ಯಾನೇಜರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಎಚ್ಚರಿಕೆ ನೀಡಿದ್ದಾರೆ.
ಸೋಮವಾರ ತಮ್ಮ ಕಚೇರಿಯಿಂದ ಜಿಲ್ಲೆಯ ಬ್ಯಾಂಕರ್ಸ್ ಗಳೊಂದಿಗೆ ಗೂಗಲ್ ಮೀಟ್ ಆನ್ ಲೈನ್ ಸಭೆ ನಡೆಸಿದ ಅವರು, ಬೆಳೆ ಪರಿಹಾರ ಯಾವುದೇ ಕಾರಣಕ್ಕೂ ಸಾಲದ ಖಾತೆಗೆ ಹೊಂದಾಣಿಕೆ ಮಾಡಬಾರದೆಂದು ಸ್ಪಷ್ಟವಾದ ಸೂಚನೆ ಬ್ಯಾಂಕ್ ಅಧಿಕಾರಿಗಳಿಗೆ ನೀಡಿದರು.
ಅತಿವೃಷ್ಟಿಯಿಂದ ಬೆಳೆ ಹಾನಿಯಾದ 3,26,183 ರೈತರಿಗೆ ಎನ್.ಡಿ.ಆರ್.ಎಫ್ ಮಾರ್ಗಸೂಚಿಯನ್ವಯ ಪರಿಹಾರದ ಜೊತೆಗೆ ಪ್ರತಿ ಹೆಕ್ಟೇರ್ ಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ 8,500 ರೂ. ಪರಿಹಾರ ಹಣ ಸೇರಿದಂತೆ ಒಟ್ಟಾರೆ ಜಿಲ್ಲೆಗೆ 498.72 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಈಗಾಗಲೆ ರೈತರ ಬ್ಯಾಂಕ್ ಖಾತೆಗೆ ಡಿ.ಬಿ.ಟಿ. ಮೂಲಕ ಪಾವತಿಸಿದೆ ಎಂದರು.
ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ರವಿಗೌಡ ಸೇರಿದಂತೆ ವಿವಿಧ ಬ್ಯಾಂಕಿನ ಅಧಿಕಾರಿಗಳು ಗೂಗಲ್ ಮೀಟ್ ನಲ್ಲಿ ಭಾಗಿಯಾಗಿದ್ದರು
"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…
ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…
BBK 12 ಫಿನಾಲೆಗೆ ಮುನ್ನವೇ ಬಿಗ್‌ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…
ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…
ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…
ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…