Categories: information

ಬೆಳೆ ಪರಿಹಾರ ಹಣ ಜಮೆಯಾಗಿಲ್ಲವೇ? ರೈತರೇ ಈ ಕೆಲಸ ಮಾಡಿ! ಇಲ್ಲಿದೆ ಸಂಪೂರ್ಣ ಮಾಹಿತಿ.

ನಿಮ್ಮ ಬೆಳೆ ಪರಿಹಾರ ಹಣ ಇನ್ನೂ ಜಮೆಯಾಗಿಲ್ಲವೇ? ವಿಳಂಬವಾಗುವುದನ್ನು ತಪ್ಪಿಸಲು ರೈತರು ಈ ಅಗತ್ಯವಾದ ಕೆಲಸಗಳನ್ನು ಕಡ್ಡಾಯವಾಗಿ ಮಾಡಬೇಕು. ಇಲ್ಲಿದೆ ಸಂಪೂರ್ಣ ಮಾಹಿತಿ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.

Thank you for reading this post, don't forget to subscribe!

ಪ್ರಸಕ್ತ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಠಿ ಹಾನಿಯಿಂದ ಹಾಳಾದ ಬೆಳೆಗಳಿಗೆ ರಾಜ್ಯ ಸರ್ಕಾರ ಪರಿಹಾರ ಘೋಷಿಸಿದೆ, ವಿವಿಧ ತಾಂತ್ರಿಕ ಕಾರಣಗಳಿಂದ ಪರಿಹಾರ ಹಣ ಪಾವತಿ ವಿಫಲಗೊಂಡ ಪ್ರಕರಣಗಳಲ್ಲಿ ಸಂಬಂಧಿಸಿದ ರೈತರು ರೈತ ಸಂಪರ್ಕ ಕೇಂದ್ರ ಮತ್ತು ಬ್ಯಾಂಕ್‌ಗಳಿಗೆ ಭೇಟಿ ನೀಡಿ ತಾಂತ್ರಿಕ ಸಮಸ್ಯೆ ಬಗೆಹರಿಸುವಂತೆ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಮನವಿ ಮಾಡಿದ್ದಾರೆ.

ಜಿಲ್ಲೆಯಾದ್ಯಂತ ವಿವಿಧ ಕಾರಣಗಳಿಂದ 12,313 ಪ್ರಕರಣಗಳಲ್ಲಿ ಪರಿಹಾರ ಹಣ ಪಾವತಿ ವಿಫಲವಾಗಿದೆ, ಇಂತಹ ರೈತರ ಪಟ್ಟಿಯನ್ನು ಸಂಬಂಧಿಸಿದೆ ಗ್ರಾಮಗಳ ಕೃಷಿ ಅಧಿಕಾರಿ, ಸಹಾಯಕ ಕೃಷಿ ಅಧಿಕಾರಿಗಳು ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಕಚೇರಿಗಳ ಸೂಚನಾ ಫಲಕಗಳ ಪಟ್ಟಿ ಪ್ರಕಟಿಸಿದ ಪರಿಣಾಮ ಇದೂವರೆಗೆ 3,860 ರೈತರು ಸಮಸ್ಯೆ ಸರಿಪಡಿಸಿದ್ದು, ಇನ್ನುಳಿದಂತೆ 8,464 ರೈತರ ಸಮಸ್ಯೆ ಸರಿಪಡಿಸಿಲ್ಲ.

ಫ್ರೂಟ್ಸ್ ತಂತ್ರಾcಶ ಹಾಗೂ ಆಧಾರ್‌ನಲ್ಲಿ ಹೆಸರು ಹೊಂದಾಣಿಕೆಯಲ್ಲಿ ಸಮಸ್ಯೆಯಿಂದ 1,549 ರೈತರಿಗೆ ಪರಿಹಾರ ಹಣ ಪಡೆಯಲು ಸಾಧ್ಯವಾಗಿಲ್ಲ. ಇಂತಹ ರೈತರು ಕೂಡಲೇ ಸಂಬಂಧಪಟ್ಟ ರೈತಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಅಧೇ ರೀತಿ 10,544 ಪ್ರಕರಣಗಳಲ್ಲಿ ಆಧಾರ್-ಎನ್.ಪಿ.ಸಿ.ಐ ಮ್ಯಾಪಿಂಗ್ ಆಗದ ಕಾರಣ ಪರಿಹಾರ ಪಾವತಿ ಹಣ ಖಾತೆಗೆ ಜಮೆಯಾಗಿರುವುದಿಲ್ಲ. ಇಂತಹ ರೈತರು ಬ್ಯಾಂಕ್‌ಗೆ ಭೇಟಿ ನೀಡಬೇಕು ಎಂದು ಡಿ.ಸಿ. ತಿಳಿಸಿದ್ದಾರೆ.

ಇದಲ್ಲದೆ ಕೆ.ವೈ.ಸಿ. ಪೆಂಡಿAಗ್, ನಿಷ್ಕಿçÃಯ ಬ್ಯಾಂಕ್ ಖಾತೆ, ಖಾತೆ ರದ್ದು, ನಿಖರವಲ್ಲದ ಬ್ಯಾಂಕ್ ಖಾತೆ, ನಿಷ್ಕಿçÃಯ ಆಧಾರ್ ಸಂಖ್ಯೆ ಜೋಡಣೆದಂತಹ ಅನೇಕ ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಪರಿಹಾರ ಹಣ ಪಡೆಯಲು ವಿಫಲರಾಗಿರುವ ರೈತರು ಕೂಡಲೆ ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಪರಿಹಾರ ಹಣ ಪಡೆಯುವಂತೆ ಜಿಲ್ಲಾಧಿಕಾರಿಗಳು ರೈತರಲ್ಲಿ ಮನವಿ ಮಾಡಿದ್ದಾರೆ.

ಬೆಳೆ ಪರಿಹಾರ ಹಣ ಸಾಲದ ಖಾತೆಗೆ ಹೊಂದಾಣಿಕೆ ಮಾಡುವಂತಿಲ್ಲ: ಡಿ.ಸಿ. ಬಿ.ಪೌಜಿಯಾ ತರನ್ನುಮ್

ಪ್ರಸಕ್ತ 2025ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಾದ್ಯಂತ ಅಪಾರ ಪ್ರಮಾಣದ ಮಳೆ ಹಾಗೂ ಅತಿವೃಷ್ಟಿಯಿಂದ ಬೆಳೆ ಹಾನಿಯಾದ ರೈತರಿಗೆ 498.72 ಕೋಟಿ ರೂ. ಇನ್ಪುಟ್ ಸಬ್ಸಿಡಿ ಪರಿಹಾರ ಬಿಡುಗಡೆಯಾಗಿದ್ದು, ಸದರಿ ಹಣವನ್ನು ರೈತರ ಸಾಲದ ಖಾತೆಗೆ ಹೊಂದಾಣಿಕೆ ಅಥವಾ ಜಮೆ ಮಾಡುವಂತಿಲ್ಲ. ಇದನ್ನು ಉಲ್ಲಂಘಿಸಿದಲ್ಲಿ ಬ್ಯಾಂಕ್ ಮ್ಯಾನೇಜರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಎಚ್ಚರಿಕೆ ನೀಡಿದ್ದಾರೆ.

ಸೋಮವಾರ ತಮ್ಮ ಕಚೇರಿಯಿಂದ ಜಿಲ್ಲೆಯ ಬ್ಯಾಂಕರ್ಸ್ ಗಳೊಂದಿಗೆ ಗೂಗಲ್ ಮೀಟ್ ಆನ್ ಲೈನ್ ಸಭೆ ನಡೆಸಿದ ಅವರು, ಬೆಳೆ ಪರಿಹಾರ ಯಾವುದೇ ಕಾರಣಕ್ಕೂ ಸಾಲದ ಖಾತೆಗೆ ಹೊಂದಾಣಿಕೆ ಮಾಡಬಾರದೆಂದು ಸ್ಪಷ್ಟವಾದ ಸೂಚನೆ ಬ್ಯಾಂಕ್ ಅಧಿಕಾರಿಗಳಿಗೆ ನೀಡಿದರು.

ಅತಿವೃಷ್ಟಿಯಿಂದ ಬೆಳೆ ಹಾನಿಯಾದ 3,26,183 ರೈತರಿಗೆ ಎನ್.ಡಿ.ಆರ್.ಎಫ್ ಮಾರ್ಗಸೂಚಿಯನ್ವಯ ಪರಿಹಾರದ ಜೊತೆಗೆ ಪ್ರತಿ ಹೆಕ್ಟೇರ್ ಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ 8,500 ರೂ. ಪರಿಹಾರ ಹಣ ಸೇರಿದಂತೆ ಒಟ್ಟಾರೆ ಜಿಲ್ಲೆಗೆ 498.72 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಈಗಾಗಲೆ ರೈತರ ಬ್ಯಾಂಕ್ ಖಾತೆಗೆ ಡಿ.ಬಿ.ಟಿ. ಮೂಲಕ ಪಾವತಿಸಿದೆ ಎಂದರು.

ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ರವಿಗೌಡ ಸೇರಿದಂತೆ ವಿವಿಧ ಬ್ಯಾಂಕಿನ ಅಧಿಕಾರಿಗಳು ಗೂಗಲ್ ಮೀಟ್ ನಲ್ಲಿ ಭಾಗಿಯಾಗಿದ್ದರು

ಓದುಗರಲ್ಲಿ ವಿನಂತಿ,

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago