Categories: information

ನಿಮ್ಮ ಹೆಸರು ಇಲ್ಲಿ ಸರಿಪಡಿಸಿದ ಕೂಡಲೇ ಈ ರೈತರಿಗೆ ಬೆಳೆ ಹಾನಿ ಪರಿಹಾರ ಜಮೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಮಳೆಯಿಂದ ಬೆಳೆ ಹಾನಿಯಾದ 46,268 ರೈತರ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಜೋಡಣೆ ಹಾಗೂ ಹೆಸರಿನಲ್ಲಿ ಆಗಿರುವ ವ್ಯತ್ಯಾಸ ಸರಿಪಡಿಸಲಾಗಿದೆ ಕೂಡಲೇ ನೇರವಾಗಿ ಅವರ ಖಾತೆಗೆ ಹಾನಿಯಾದ ಪರಿಹಾರ ಹಣ ಜಮೆ ಮಾಡಲಿಲ್ಲ. ಹಾಗಾದ್ರೆ ಈ ಅಂಕಣದಲ್ಲಿ ನಾನು ಸಂಪೂರ್ಣವಾಗಿ ಏನು ಮಾಡಬೇಕು ತಿಳಿಸಿದ್ದೇನೆ.

Spread the love

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಮಳೆಯಿಂದ ಬೆಳೆ ಹಾನಿಯಾದ 46,268 ರೈತರ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಜೋಡಣೆ ಹಾಗೂ ಹೆಸರಿನಲ್ಲಿ ಆಗಿರುವ ವ್ಯತ್ಯಾಸ ಸರಿಪಡಿಸಲಾಗಿದೆ ಕೂಡಲೇ ನೇರವಾಗಿ ಅವರ ಖಾತೆಗೆ ಹಾನಿಯಾದ ಪರಿಹಾರ ಹಣ ಜಮೆ ಮಾಡಲಿಲ್ಲ.

ಹೌದು, ಈ ಕುರಿತಂತೆ ಸಚಿವ ಕೃಷ್ಣ ಭೈರೇಗೌಡರು ಪ್ರಕಟಿಸಿದ್ದಾರೆ.

ಕಾಂಗ್ರೆಸ್ ನ ತಿಪ್ಪಣ್ಣಪ್ಪ ಕಮಕನೂರು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಲಬುರಗಿಯಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಸತತವಾಗಿ ಸುರಿದ ಮಳೆಯಿಂದಾಗಿ 3.23.318, ರೈತರಿಗೆ 498.73 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. ಆದರೆ 26,394 ರೈತರಿಗೆ ಹಣ ಪಾವತಿ ಆಗಿಲ್ಲ. ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿರುವುದು ಹಾಗೂ ರೈತರ ಹೆಸರಿನಲ್ಲಿ ವ್ಯತ್ಯಾಸ ಇರುವ ಕಾರಣ ನೇರವಾಗಿ ಅವರ ಖಾತೆಗೆ ಜಮೆ ಮಾಡಲಾಗುತ್ತಿಲ್ಲ. ರೈತರು ಈ ವ್ಯತ್ಯಾಸವನ್ನು ಸರಿಪಡಿಸಿದರೆ ದಿನದಲ್ಲಿ ಹಣ ಅವರ ಖಾತೆಗೆ ಜಮೆಯಾಗಲಿದೆ ಎಂದು ಹೇಳಿದರು

Thank you for reading this post, don't forget to subscribe!

ಇದಕ್ಕೂ ಮುನ್ನ ಮಾತನಾಡಿದ ಕಮಕನೂರು, ಬೆಳೆ ಹಾನಿಗೆ ರೈತರಿಗೆ ಇನ್ಪುಟ್ ಸಬ್ಸಿಡಿ ಹೆಚ್ಚು ಮಾಡಲು ಸುಮಾರು 2.76 ಲಕ್ಷ ರೈತರಿಗೆ ಬೆಳೆ ವಿಮೆ ಸರಿಯಾಗಿ ಸಿಕ್ಕಿಲ್ಲ ಎಂದು ಗಮನ ಸೆಳೆದಿದ್ದರು.

ನಿಮಗೆ ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆಯೇ ಇಲ್ಲೇ ಚೆಕ್ ಮಾಡಿ

ಬೆಳೆ ಹಾನಿ ಪರಿಹಾರ ಹಣ ನಿಮಗೆ ಜಮೆಯಾಗಿದೆಯೋ ಇಲ್ಲವೋ ಎಂದು ಪರಿಶೀಲಿಸಲಾಗಿದೆ

https://parihara.karnataka.gov.in/service87/

ಈ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪರಿಹಾರ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ನಂತರ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ಹೋಬಳಿ ಆಯ್ಕೆ ಮಾಡಿಕೊಂಡು ನೀವುರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ  ವರ್ಷ ಆಯ್ಕೆ ಮಾಡಿಕೊಳ್ಳಬೇಕು. ( 2025-26) ಆಯ್ಕೆ ಮಾಡಿಕೊಳ್ಳಬೇಕು. ನಂತರ ಖಾರೀಫ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಫ್ಲಡ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಿದರೆ ಸಾಕು ನಿಮ್ಮ ಖಾತೆಗೆ ಹಣ ಜಮೆಯಾಗಿದೆಯೇ ಇಲ್ಲವೋ ಎಂಬ ಮಾಹಿತಿ ಗೊತ್ತಾಗಲಿದೆ.

ಬೆಳೆ ಸಮೀಕ್ಷೆ ವ್ಯತ್ಯಾಸವಿದ್ದಲ್ಲಿ ಆಕ್ಷೇಪ ಸಲ್ಲಿಸಿ ಇತ್ಯರ್ಥಪಡಿಸಿಲು ರೈತರಿಗೆ ಅವಕಾಶ

ಕೃಷಿ ಜಮೀನುಗಳಲ್ಲಿ ಬೆಳೆ ಸಮೀಕ್ಷೆಯನ್ನು ಸ್ವತಃ ರೈತರೇ ಬೆಳೆ ಸಮೀಕ್ಷೆ ರೈತರ ಆಯಪ್ ನಲ್ಲಿ ಬೆಳೆ ಮಾಹಿತಿ ನಮೂದಿಸಲು ಅವಕಾಶ ಕಲ್ಪಿಸಲಾಗಿದ್ದು, ಯಾವುದೇ ವ್ಯತ್ಯಾಸಗಳು ಕಂಡುಬಂದಲ್ಲಿ ರೈತರು ನಿಗದಿತ ಸಮಯದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು.

ಅವರು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ತರೀಕೆರೆ ವಿಧಾನಸಭಾ  ಕ್ಷೇತ್ರದ ಶಾಸಕ ಜೆ.ಹೆಚ್. ಶ್ರೀನಿವಾಸ ಅವರ ಪ್ರಶ್ನೆಗೆ ಸದನದಲ್ಲಿ ಉತ್ತರಿಸಿದರು.

ರಾಜ್ಯದ ಎಲ್ಲಾ ರೈತರ ತಾಕುಗಳು ಬೆಳೆ ಮಾಹಿತಿ ದಾಖಲಿಸುವ ಸಲುವಾಗಿ ಆದ್ಯತೆ ಮೇರೆಗೆ ಪ್ರಥಮವಾಗಿ ಸ್ವತಃ ರೈತರೇ ಬೆಳೆ ಸಮೀಕ್ಷೆ ರೈತರ ಆಯಪ್ ನಲ್ಲಿ ಬೆಳೆ ಮಾಹಿತಿ ನಮೂದಿಸಲು ಅವಕಾಶ ಕಲ್ಪಿಸಲಾಗಿದೆ.

ಸಕಾಲದಲ್ಲಿ ರೈತರು ಬೆಳೆ ಸಮೀಕ್ಷೆ ಮಾಡದೆ ಇದ್ದಲ್ಲಿ ಖಾಸಗಿ ನಿವಾಸಿಗಳ ಮೂಲಕ ಬೆಳೆ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಖಾಸಗಿ ನಿವಾಸಿಗಳ ಬದಲಿಗೆ ಸಂಗ ಸಂಸ್ಥೆಗಳ ಮೂಲಕ ಬೆಳೆ ಸಮೀಕ್ಷೆ ಮಾಡಿಸಲು ಅವಕಾಶ ಕಲ್ಪಿಸಿಲ್ಲ. ಬೆಳೆ ಮಾಹಿತಿ ಕುರಿತಂತೆ ಯಾವುದೇ ವ್ಯತ್ಯಾಸಗಳು ಕಂಡುಬಂದಲ್ಲಿ ರೈತರು ನಿಗದಿತ ಸಮಯದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.

ರಾಜ್ಯದಲ್ಲಿ ಪ್ರತಿ ವರ್ಷ ಸುಮಾರು 4.40 ಕೋಟಿ ತಾಕುಗಳ ಬೆಳೆ ಸಮೀಕ್ಷೆ ಕೈಗೊಳ್ಳಲಾಗುತ್ತಿದ್ದು, ಸುಮಾರು 2 ಲಕ್ಷ ಆಕ್ಷೇಪಣೆಗಳೂ ಕೂಡ ಸಲ್ಲಿಕೆಯಾಗುತ್ತಿದೆ. ಇಂತಹ ಪ್ರಕರಣಗಳಲ್ಲಿ ಮರು ಸಮೀಕ್ಷೆ ಮಾಡಿಸಿದ್ದೇವೆ. ಅಧಿಕಾರಿ, ಸಿಬ್ಬಂದಿಗಳು ಎಲ್ಲಿಯೂ ಕುಳಿತು ಬೆಳೆ ಸಮೀಕ್ಷೆ ಮಾಡಲು ಅವಕಾಶ ಇರುವುದಿಲ್ಲ ಎಂದರು.

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago