ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿಮಗೆಲ್ಲ ತಿಳಿದಿರುವಂತೆ ಕಳೆದ ಸಾಲಿಗಿಂತ ಈ ವರ್ಷ ಮುಂಗಾರು ಮಳೆ ಪ್ರಮಾಣ ಅಂದಾಜಿಗಿಂತ ಹೆಚ್ಚಾಗಿದ್ದು, ಇದರಿಂದ ಹಲವು ರೈತರ ಬೆಳೆಗಳು ಹಾನಿಗೊಳಗಾಗಿವೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿಮಗೆಲ್ಲ ತಿಳಿದಿರುವಂತೆ ಕಳೆದ ಸಾಲಿಗಿಂತ ಈ ವರ್ಷ ಮುಂಗಾರು ಮಳೆ ಪ್ರಮಾಣ ಅಂದಾಜಿಗಿಂತ ಹೆಚ್ಚಾಗಿದ್ದು, ಇದರಿಂದ ಹಲವು ರೈತರ ಬೆಳೆಗಳು ಹಾನಿಗೊಳಗಾಗಿವೆ.
Thank you for reading this post, don't forget to subscribe!ಇನ್ನು ಮಳೆಯ ಅಬ್ಬರ ಮುಂದುವರಿದಿರುವುದರಿಂದ ಬೆಳೆ ಹಾನಿ ಪ್ರಮಾಣ ಇನ್ನೂ ಹೆಚ್ಚಾಗಲಿದೆ. ಕಳೆದ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಿ ರೈತರ ಬೆಳೆ ಹಾನಿಯಾಗಿದ್ದವು. ಆದರೆ ಈ ಬಾರಿ ಸರಾಸರಿಗಿಂತ ಹೆಚ್ಚು ಮಳೆಯಾಗಿ ಕೆಲವು ಜಿಲ್ಲೆಗಳಲ್ಲಿ ಗುಡ್ಡ ಕುಸಿತ, ಪ್ರವಾಹವಾಗಿ ಆ ಭಾಗದ ರೈತರ ಬೆಳೆ ಮತ್ತೆ ಹಾನಿಗೊಳಗಾಗಿವೆ.
ಈ ವರ್ಷದಲ್ಲಿ ಅತಿಯಾದ ಮಳೆಯಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರ ಸದ್ಯ ಒಟ್ಟು 777 ಕೋಟಿ ರೂಪಾಯಿ ಅನುದಾನವನ್ನು ಪರಿಹಾರವಾಗಿ ಬಿಡುಗಡೆ ಮಾಡಿದೆ. ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು,” ಈ ವರ್ಷ ಮುಂಗಾರು ಸರಾಸರಿಗಿಂತ ಹೆಚ್ಚಾಗಿದ್ದು, ರೈತರ ಬೆಳೆಗಳಿಗೆ ತುಂಬಾ ಹಾನಿ ಉಂಟಾಗಿದೆ. ಈ ಕಾರಣದಿಂದ ನಮ್ಮ ಸರಕಾರವು ರೈತರಿಗೆ ಆರ್ಥಿಕವಾಗಿ ಧನ ಸಹಾಯ ಮಾಡಿ ಅವರ ಬೆನ್ನಿಗೆ ನಿಲ್ಲಲು ಈಗ 777 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ” ಎಂದು ತಿಳಿಸಿದರು.
ಇನ್ನು ಕಂದಾಯ ಸಚಿವ ಕೃಷ್ಣ ಭೈರೇಗೌಡ ಮಾತನಾಡಿ, ” ಬಿಡುಗಡೆ ಮಾಡಲಾದ ಹಣವನ್ನು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ. ಈ ಅನುದಾನದಲ್ಲಿ ಹಾಸನ ಜಿಲ್ಲೆಗೆ ಅತಿ ಹೆಚ್ಚು ಅನುದಾನ ಸಿಕ್ಕಿದ್ದು ಒಟ್ಟು 23 ಕೋಟಿಯನ್ನು ನೀಡಲಾಗಿದೆ. ಇನ್ನು ಮಂಡ್ಯ ಜಿಲ್ಲೆಗೆ 20 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ” ಎಂದು ಅವರು ತಿಳಿಸಿದರು.
ಆದ್ದರಿಂದ ಈ ವರ್ಷದ ಮಳೆಯಿಂದ ಬೆಳೆ ಹಾನಿಯಾದ ರೈತರು ಆದಷ್ಟು ಬೇಗನೆ ತಮ್ಮ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ತಮ್ಮ ಬೆಳೆ ಹಾನಿಯ ವಿಷಯವನ್ನು ತಿಳಿಸಿ ಪರಿಹಾರವನ್ನು ಪಡೆದುಕೊಳ್ಳಿ.
ಇನ್ನು ಇತ್ತೀಚೆಗಷ್ಟೇ ಕಳೆದ ಸಾಲಿನ ಬೆಳೆ ಹಾನಿ ಪರಿಹಾರವನ್ನು ರಾಜ್ಯ ಸರ್ಕಾರ 3 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಮಾಡಿತ್ತು. ಅಲ್ಲದೇ ಹೆಚ್ಚುವರಿಯಾಗಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ 500 ಕೋಟಿ ರೂಪಾಯಿ ಹೆಚ್ಚುವರಿ ಅನುದಾನವನ್ನು ನೀಡಿತ್ತು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…
ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…
BBK 12 ಫಿನಾಲೆಗೆ ಮುನ್ನವೇ ಬಿಗ್ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…
ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…
ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…
ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…