ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಯಾದ ರೈತರಿಗೆ ಗುಡ್ ನ್ಯೂಸ್. ಇನ್ ಪುಟ್ ಸಬ್ಸಿಡಿ ನೇರವಾಗಿ ಆಧಾರ ಸಂಖ್ಯೆಗೆ ಜೋಡಣೆ ಹೊಂದಿರುವ ಸಂಬಂದಪಟ್ಟ ರೈತರ ಬ್ಯಾಂಕ್ ಖಾತೆಗಳಿಗೆ ಮುಂದಿನ 3-4 ದಿನಗಳಲ್ಲಿ ಪರಿಹಾರ ಹಣ ಜಮೆಯಾಗಲಿದೆ ಹೌದು, ಬೆಳೆ ಹಾನಿಯಾದ ರೈತರ ಖಾತೆಗೆ ಹಣ ಜಮೆ ಮಾಡಲು ಮಂಜೂರಾತಿ ಸಿಕ್ಕಿದೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಯಾದ ರೈತರಿಗೆ ಗುಡ್ ನ್ಯೂಸ್. ಇನ್ ಪುಟ್ ಸಬ್ಸಿಡಿ ನೇರವಾಗಿ ಆಧಾರ ಸಂಖ್ಯೆಗೆ ಜೋಡಣೆ ಹೊಂದಿರುವ ಸಂಬಂದಪಟ್ಟ ರೈತರ ಬ್ಯಾಂಕ್ ಖಾತೆಗಳಿಗೆ ಮುಂದಿನ 3-4 ದಿನಗಳಲ್ಲಿ ಪರಿಹಾರ ಹಣ ಜಮೆಯಾಗಲಿದೆ ಹೌದು, ಬೆಳೆ ಹಾನಿಯಾದ ರೈತರ ಖಾತೆಗೆ ಹಣ ಜಮೆ ಮಾಡಲು ಮಂಜೂರಾತಿ ಸಿಕ್ಕಿದೆ.
ಪ್ರಸಕ್ತ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭಾರಿ ಮಳೆ ಹಾಗೂ ಪ್ರವಾಹದಿಂದ ಹಾನಿಯಾದ ಬೆಳೆಗಳಿಗೆ ರಾಜ್ಯ ಸರ್ಕಾರ ಎಸ್.ಡಿ.ಆರ್.ಎಫ್/ ಎನ್.ಡಿ.ಆರ್.ಎಫ್ ಮಾರ್ಗಸೂಚಿಯನ್ವಯ ಜಿಲ್ಲೆಯ 3.26 ಲಕ್ಷ ರೈತರಿಗೆ 250.97 ಕೋಟಿ ರೂಪಾಯಿ ಪರಿಹಾರ ಮಂಜೂರಾತಿ ನೀಡಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ
ಜಿಲ್ಲೆಯಾದ್ಯಂತ ಕಳೆದ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಅಪಾರ ಪ್ರಮಾಣದಲ್ಲಿ ಬಿದ್ದ ಮಳೆಯಿಂದ 3.24 ಲಕ್ಷ ಹೆಕ್ಟೇರ್ ಪ್ರದೇಶ ಕೃಷಿ, ತೋಟಗಾರಿಕೆ ಪ್ರದೇಶ ಹಾನಿಯಾಗಿದ್ದಕ್ಕೆ ಪರಿಹಾರ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ಇದೀಗ ಸರ್ಕಾರ ಪರಿಹಾರ ತಂತ್ರಾಂಶದಲ್ಲಿ ಅರ್ಹ ರೈತರ ಹಾಗೂ ಹಾನಿ ಪ್ರದೇಶದ ದತ್ತಾಂಶದನ್ವಯ ಮೊದಲನೆ ಹಂತದಲ್ಲಿ SDRF/NDR ಈ ಮಾರ್ಗಸೂಚಿಯನ್ವಯ ಜಿಲ್ಲೆಯ 3,26,183 ಫಲಾನುಭವಿ ರೈತರಿಗೆ ಒಟ್ಟು 250.97 ಕೋಟಿ ರೂಪಾಯಿ ಹಣ ಮಂಜೂರಾತಿ ನೀಡಲಾಗಿದ್ದು, ಇನ್ ಪುಟ್ ಸಬ್ಸಿಡಿ ನೇರವಾಗಿ ಆಧಾರ ಸಂಖ್ಯೆಗೆ ಜೋಡಣೆ ಹೊಂದಿರುವ ಸಂಬಂದಪಟ್ಟ ರೈತರ ಬ್ಯಾಂಕ್ ಖಾತೆಗಳಿಗೆ ಮುಂದಿನ 3-4 ದಿನಗಳಲ್ಲಿ ಪರಿಹಾರ ಹಣ ಜಮೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಸರ್ಕಾರ ಮತ್ತು ಎನ್.ಡಿ.ಆರ್.ಎಫ್ ಸೇರಿದಂತೆ ಖುಷ್ಕಿ ಜಮೀನಿನ ತಲಾ ಹೆಕ್ಟೇರ್ ಗೆ 17 ಸಾವಿರ ರೂಪಾಯಿ ನೀಡಲಾಗುವುದು. ಅದೇ ರೀತಿ ನೀರಾವರಿ ಜಮೀನಿಗೆ 17500 ರೂಪಾಯಿ ಪರಿಹಾರ ನೀಡಲಾಗುವುದು. ಬಹು ಬೆಳೆ ಬೆಳೆಯುವ ಜಮೀನಿಗೆ 31 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಲಾಗಿದೆ. ಆದರೆ ಹೆಚ್ಚಿನ ಮಳೆಯಿರುವುದರಿಂದ ಬೆಳೆ ಹಾನಿಯ ಜಂಟಿ ಸಮೀಕ್ಷೆ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಸಮೀಕ್ಷೆಯ ನಂತರ ಬೆಳೆ ಹಾನಿಯಾದ ಎಲ್ಲಾ 10 ಲಕ್ಷ ಹೆಕ್ಟೇರ್ ಗೆ ಪರಿಹಾರ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಪರಿಹಾರ ಘೋಷಣೆಯಿಂದಾಗಿ ಮಳೆಯಾಶ್ರಿತ ಪ್ರತಿ ಹೆಕ್ಟೇರ್‌ಗೆ 8,500 + 8,500 ಸೇರಿ 17,000 ರೂಪಾಯಿ, ನೀರಾವರಿ ಬೆಳೆಗಳಿಗೆ 17,000 + 8,500 ಸೇರಿ 25,500 ರೂಪಾಯಿ ಹಾಗೂ ಬಹು ವಾರ್ಷಿಕ ಬೆಳೆಗಳಿಗೆ 22,500 + 8,500 ಸೇರಿ 31,000 ರೂಪಾಯಿ ಪರಿಹಾರ ಸಿಗಲಿದೆ ಎಂದರು.
Bele hani parihara status ಬೆಳೆ ಹಾನಿ ಪರಿಹಾರ ಸ್ಟೇಟಸ್ ಹೀಗೆ ಚೆಕ್ ಮಾಡಿ
ಬೆಳೆ ಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡಲು ಈ
https://parihara.karnataka.gov.in/PariharaPayment/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಪರಿಹಾರ ಪೆಜ್ ತೆರೆದುಕೊಳ್ಳುತ್ತದೆ. ಅಲ್ಲಿ ಪರಿಹಾರ ಹಣ ಸಂದಾಯ ವರದಿ ಕೆಳಗಡೆ Select Calamity Type ನಲ್ಲಿ Flood, ಆಯ್ಕೆ ಮಾಡಿಕೊಳ್ಳಬೇಕು. ನಂತರ Select Year ನಲ್ಲಿ 2025-26 ಆಯ್ಕೆ ಮಾಡಿಕೊಳ್ಳಬೇಕು. ನಂತರ ಆಧಾರ್ ಕಾರ್ಡ್ ನಮೂದಿಸಬೇಕು ಇದಾದ ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ನಂತರ ವಿವರಗಳ್ನು ಪಡೆಯಲು ಮೇಲೆ ಕ್ಲಿಕ್ ಮಾಡಬೇಕು.ನಂತರ ತೆರೆದುಕೊಳ್ಳುವ ಪೇಜ್ ನಲ್ಲಿ ಅಲ್ಲಿ ಕೇಳಲಾದ ಮಾಹಿತಿ ಭರ್ತಿ ಮಾಡಿ ಸ್ಟೇಟಸ್ ತಿಳಿದುಕೊಳ್ಳಬೇಕು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode=ac_t
"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…
ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…
BBK 12 ಫಿನಾಲೆಗೆ ಮುನ್ನವೇ ಬಿಗ್‌ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…
ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…
ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…
ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…