ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ಬಾರಿ ಹಿಂಗಾರು ಋತುವಿನಲ್ಲಿ ಅಕಾಲಿಕ ಮಳೆಯಾಗಿ ರಾಜ್ಯದ ಹಲವೆಡೆ ಬೆಳೆಗಳು ಹಾನಿಗೆ ಒಳಗಾಗಿವೆ.
Thank you for reading this post, don't forget to subscribe!ಇದೀಗ ಹಿಂಗಾರು ಹಂಗಾಮಿನಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು ಮುಂದಿನ ಒಂದು ವಾರದಲ್ಲಿ ಎಲ್ಲಾ ಅರ್ಹ ರೈತರ ಖಾತೆಗೆ ಪರಿಹಾರ ಹಣ ಜಮಾ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.
ಇದನ್ನೂ ಓದಿ: ಜಾಬ್ ಕಾರ್ಡ್ ಇದ್ದವರಿಗೆ ದಿನಕ್ಕೆ 316 ರೂಪಾಯಿ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ!
ಈ ವರ್ಷದ ಹಿಂಗಾರು ಹಂಗಾಮಿನಲ್ಲಿ ಅಕಾಲಿಕವಾಗಿ ಸುರಿದ ಮಳೆಗೆ 1.58 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದ್ದು, ಬೆಳೆ ಹಾನಿಗೊಳಗಾದ ರೈತರಿಗೆ 120 ಕೋಟಿ ರೂಪಾಯಿ ಪರಿಹಾರ ಹಣವನ್ನು(bele parihara amount) ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗುವುದು ಎಂದು ಕೃಷ್ಣ ಭೈರೇಗೌಡ ಅವರು ಮಾಧ್ಯಮಗಳಿಗೆ ಹೇಳಿದರು.
ಇನ್ನು ನಿಮ್ಮ ಬೆಳೆ ಕೂಡ ಹಿಂಗಾರು ಹಂಗಾಮಿನಿಂದ ಹಾನಿಗೊಳಗಾಗಿ ಹಿಂಗಾರು ಬೆಳೆ ಪರಿಹಾರಕ್ಕೆ ನೀವು ಅರ್ಜಿ ಸಲ್ಲಿಸಿದ್ದರೆ ನಿಮ್ಮ ಅರ್ಜಿ ಸ್ಥಿತಿಯನ್ನು ನೀವು ಮನೆಯಲ್ಲೇ ಕುಳಿತು ಚೆಕ್ ಮಾಡಬಹುದು.
ಇದನ್ನೂ ಓದಿ: ಮಿನಿ ಟ್ರ್ಯಾಕ್ಟರ್ ಮತ್ತು ಪವರ್ ಟಿಲ್ಲರ್ ಖರೀದಿಗೆ ಶೇ.90 ರಷ್ಟು ಸಬ್ಸಿಡಿ ನೀಡಲಿದೆ ಸರ್ಕಾರ! ಈಗಲೇ ಅರ್ಜಿ ಸಲ್ಲಿಸಿ !
ಹೌದು ರೈತ ಮಿತ್ರರೇ, ಇದೀಗ ನೀವು ರಾಜ್ಯ ಸರಕಾರ ಬಿಡುಗಡೆ ಮಾಡಲಿರುವ ಹಿಂಗಾರು ಬೆಳೆ ಪರಿಹಾರ ಹಣವನ್ನು ನಿಮ್ಮ ಮೊಬೈಲ್ ನಲ್ಲಿ ಸುಲಭವಾಗಿ ಚೆಕ್ ಮಾಡಬಹುದು. ಅದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಹಿಂಗಾರು ಬೆಳೆ ಪರಿಹಾರ ಅರ್ಜಿ ಸ್ಥಿತಿ ಚೆಕ್ ಮಾಡುವುದು ಹೇಗೆ?
ಹಂತ -1) ಮೊದಲಿಗೆ ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
http://parihara.karnataka.gov.in/
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ಕನ್ನಡ ಅಥವಾ ಇಂಗ್ಲಿಷ್ ಭಾಷೆ ಮೇಲೆ ಕ್ಲಿಕ್ ಮಾಡಿ ಮುಂದುವರಿಯಿರಿ. ಅಲ್ಲಿ ನಿಮಗೆ Parihara Payment Reports ಎಂದು ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಅಲ್ಲಿ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು Village Wise List ಮೇಲೆ ಕ್ಲಿಕ್ ಮಾಡಿ. ನಂತರ ವರ್ಷ, ಋತು ಮತ್ತು ವಿಪತ್ತಿನ ವಿಧವನ್ನು ಆಯ್ಕೆ ಮಾಡಿ. ನಂತರ ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ Get Report ಮೇಲೆ ಕ್ಲಿಕ್ ಮಾಡಿ.

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನಿಮ್ಮ ಗ್ರಾಮದಲ್ಲಿ ಹಿಂಗಾರು ಬೆಳೆ ಪರಿಹಾರ ಹಣಕ್ಕೆ ಅರ್ಹರಾಗಿರುವ ರೈತರ ಪಟ್ಟಿ ಕಾಣಿಸುತ್ತದೆ. ಅದರಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ.

ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಹಿಂಗಾರು ಬೆಳೆ ಪರಿಹಾರ ಹಣ ಬರುವುದಿಲ್ಲ.ಈ
ಈ ರೀತಿಯಾಗಿ ನೀವು ಸುಲಭವಾಗಿ ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲೇ ನಿಮ್ಮ ಹಿಂಗಾರು ಬೆಳೆ ಪರಿಹಾರ ಅರ್ಜಿಯ ಸ್ಥಿತಿಯನ್ನು ಚೆಕ್ ಮಾಡಬಹುದು.
ವಿಶೇಷ ಸೂಚನೆ: ತಾಂತ್ರಿಕ ದೋಷದಿಂದ ರಾಜ್ಯ ಸರಕಾರದ ಮೇಲಿನ ಲಿಂಕ್ ಓಪನ್ ಆಗುತ್ತಿಲ್ಲ. ದಯವಿಟ್ಟು ಸ್ವಲ್ಪ ಸಮಯದ ನಂತರ ಪ್ರಯತ್ನಿಸಿ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode=ac_t