ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಇತ್ತೀಚೆಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡಿದ್ದ 3,454 ಕೋಟಿ ರೂಪಾಯಿಯನ್ನು ಬರಗಾಲದಿಂದ ಹಾನಿಗೊಳಗಾಗಿದ್ದ ಅರ್ಹ 34 ಲಕ್ಷ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಿದೆ.
Thank you for reading this post, don't forget to subscribe!ಅಲ್ಲದೇ ರಾಜ್ಯ ಸರ್ಕಾರವು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹೆಚ್ಚುವರಿಯಾಗಿ 500 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿ ಪ್ರತಿ ರೈತರಿಗೆ ತಲಾ ₹3,000 ನಂತೆ ನೇರವಾಗಿ ಅರ್ಹ ರೈತರ ಖಾತೆಗೆ ಜಮಾ ಮಾಡಿತ್ತು. ಹಾಗಾಗಿ ರೈತರಿಗೆ ಈ ಬಾರಿ ರಾಜ್ಯ ಸರ್ಕಾರದಿಂದ ಬೆಳೆ ಹಾನಿ ಪರಿಹಾರ 3 ಕಂತುಗಳಲ್ಲಿ ಹಣ ಜಮಾ ಆಗಿದೆ.
ಇದನ್ನೂ ಓದಿ: ಮನೆಯಲ್ಲಿ ಕುಳಿತು ಮೊಬೈಲ್ ನಲ್ಲಿ ನಿಮ್ಮ ಹೊಲದ ಮ್ಯಾಪ್ ಚೆಕ್ ಮಾಡಿ! ಕಾಲುದಾರಿ, ಹಳ್ಳ ಎಲ್ಲವೂ ಈ ಮ್ಯಾಪ್ ನಲ್ಲಿ ಕಾಣುತ್ತದೆ !
ಇವತ್ತಿನ ಅಂಕಣದಲ್ಲಿ ನೀವು ನಿಮ್ಮ ಮೊಬೈಲ್ ನಲ್ಲಿ ಆಧಾರ್ ನಂಬರ್ ಹಾಕಿ ನಿಮಗೆ ಇಲ್ಲಿಯವರೆಗೆ ಎಷ್ಟು ಬರ ಪರಿಹಾರ ಹಣ ಜಮಾ ಆಗಿದೆ ಎಂಬುದನ್ನ ಸುಲಭವಾಗಿ ಚೆಕ್ ಮಾಡುವ ವಿಧಾನವನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ ಹಾಗೂ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ ಮತ್ತು ಇದೆ ರೀತಿಯ ವಿಶೇಷ ಮಾಹಿತಿಗಾಗಿ ಕೆಳಗೆ ನೀಡಲಾಗಿರುವ ನಮ್ಮ ವಾಟ್ಸಾಪ್ ಗ್ರೂಪ್ ಗೆ ಸೇರಿಕೊಳ್ಳಿ.
ಇದನ್ನೂ ಓದಿ: ಬೆಳೆ ಪರಿಹಾರ: ನಿಮ್ಮ ಪಹಣಿ ಪತ್ರ (ಉತಾರಿ) ಕ್ಕೆ ಮೊಬೈಲ್ ನಲ್ಲೇ ಆಧಾರ್ ಲಿಂಕ್ ಮಾಡಿ! ಲಿಂಕ್ ಮಾಡಲು ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
ಬೆಳೆ ಪರಿಹಾರ ಚೆಕ್ ಮಾಡುವುದು ಹೇಗೆ?
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ರಾಜ್ಯ ಸರ್ಕಾರದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.
https://parihara.karnataka.gov.in/service92/
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ವರ್ಷ, ಋತು ಮತ್ತು ವಿಪತ್ತಿನ ವಿಧವನ್ನು ಕೆಳಗೆ ತೋರಿಸಿದಂತೆ ತುಂಬಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ 4 ಆಯ್ಕೆಗಳು ಕಾಣುತ್ತವೆ. ಅಲ್ಲಿ ನೀವು ಆಧಾರ ಕಾರ್ಡ ನಂಬರ ಮೇಲೆ ಕ್ಲಿಕ್ ಮಾಡಿ.
ಇದನ್ನೂ ಓದಿ: ಬೆಳೆ ಪರಿಹಾರ ಹಣ : ಸರ್ವೇ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !

ಹಂತ-4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ, Fetch ಮೇಲೆ ಕ್ಲಿಕ್ ಮಾಡಿ.

ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಹೆಸರಿನ ಎಡ ಭಾಗದಲ್ಲಿ ಇರುವ ವೃತ್ತಾಕಾರ ಗುರುತಿನ ಮೇಲೆ ಕ್ಲಿಕ್ ಮಾಡಿ. ಆಗ ನಿಮಗೆ ಕೆಳಗೆ ನಿಮ್ಮ ಖಾತೆಗೆ ಇಲ್ಲಿಯವರೆಗೆ ಒಟ್ಟು ಎಷ್ಟು ಕಂತಿನ ಹಣ ಜಮಾ ಆಗಿದೆ, ಯಾವ ಬ್ಯಾಂಕ್ ಖಾತೆಗೆ ಜಮಾ ಆಗಿದೆ ಮತ್ತು ಯಾವ ದಿನಾಂಕದಂದು ಜಮಾ ಆಗಿದೆ ಎಂಬ ಸಂಪೂರ್ಣ ಮಾಹಿತಿ ಸಿಗುತ್ತದೆ.

ಈ ರೀತಿಯಾಗಿ ನೀವು ನಿಮ್ಮ ಖಾತೆಗೆ ಇಲ್ಲಿಯವರೆಗೆ ಜಮಾ ಆಗಿರುವ ಬೆಳೆ ಪರಿಹಾರ ಹಣವನ್ನು ನಿಮ್ಮ ಮೊಬೈಲ್ ನಲ್ಲಿ ಸುಲಭವಾಗಿ ಚೆಕ್ ಮಾಡಬಹುದು. ಹಾಗೂ ನಿಮಗೆ ಯಾವ ಕಂತಿನಲ್ಲಿ ಎಷ್ಟು ಹಣ ಜಮಾ ಆಗಿದೆ ಎಂಬ ಮಾಹಿತಿಯೂ ಸಿಗುತ್ತದೆ.
ಇದನ್ನೂ ಓದಿ: Bele Parihara: ಬೆಳೆಹಾನಿ ಪರಿಹಾರ ಹಣ ಜಮಾ ಆಗದೇ ಇರಲು ಇಲ್ಲಿವೆ ನೋಡಿ ಪ್ರಮುಖ ಕಾರಣಗಳು! ಇವುಗಳನ್ನು ಸರಿಪಡಿಸಿ ನಿಮಗೆ ಹಣ ಬರುತ್ತೆ
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ಇಂದಿನಿಂದ ನಾಲ್ಕು ದಿನ 17 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಲ್ಲೆಲ್ಲಿ ಮಳೆ ಇಲ್ಲಿದೆ ಮಾಹಿತಿ!ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ತೇವಾಂಶ ಭರಿತ ಮೋಡದ ಕಾರಣ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಾರ್ಚ್ 22 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
- Heavy Rain: 4 ದಿನ ಭಾರೀ ಮಳೆ, ರಾಜ್ಯದ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ!25 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ಮಲೆನಾಡು, ಕರಾವಳಿ, ಒಳನಾಡು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
- ನಾಡಕಚೇರಿ ಅಲೆದಾಟಕ್ಕೆ ಬಿತ್ತು ಬ್ರೇಕ್! ಈಗ Mobile ನಲ್ಲೇ ಪಡೆಯಿರಿ ಜಾತಿ-ಆದಾಯ ಪ್ರಮಾಣಪತ್ರನಾಡಕಚೇರಿ ಅಲೆದಾಟಕ್ಕೆ ಬಿತ್ತು ಬ್ರೇಕ್! ಈಗ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ಮೊಬೈಲ್ನಲ್ಲೇ ಸುಲಭವಾಗಿ ಅರ್ಜಿ ಸಲ್ಲಿಸಿ ಪಡೆದುಕೊಳ್ಳಬಹುದು. ಸಮಯ, ಹಣ ಮತ್ತು ಶ್ರಮ ಉಳಿಸುವ ಕರ್ನಾಟಕ ಸರ್ಕಾರದ ಡಿಜಿಟಲ್ ಸೇವೆಗಳ ಸಂಪೂರ್ಣ ಮಾಹಿತಿ ಇಲ್ಲಿ.
- ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಹಳೆಯ ಪಹಣಿಯನ್ನು ಸುಲಭವಾಗಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಹಿಂದಿನ ಅಂಕಣಗಳಲ್ಲಿ ನಾವು ಮೋಬೈಲ್ ನಲ್ಲಿಯೇ ನಿಮ್ಮ ಪಹಣಿ ಪತ್ರಕ್ಕೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿಕೊಟ್ಟಿದ್ದೇವೆ. ಇವತ್ತಿನ ಅಂಕಣದಲ್ಲಿ ನಾವು ನಿಮಗೆ ಮನೆಯಲ್ಲಿಯೇ ಕುಳಿತು ನೀವು ನಿಮ್ಮ ಹಳೆಯ ಪಹಣಿ ಪತ್ರ ಡೌನ್ಲೋಡ್ ಮಾಡಿ ನೋಡುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ.
- ಮಾರ್ಚ್ 15 ರಿಂದ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಇಲ್ಲಿದೆ ಮಾಹಿತಿಮಾರ್ಚ್ 15ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ, ರೈತರು ಯಾವ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ. 🌧️🌾
- ನಿಮ್ಮ ಮೊಬೈಲ್ ನಲ್ಲಿ ಜಮೀನಿನ ಖಾತಾ ಬದಲಾವಣೆಗೆ ಅರ್ಜಿ ಹೀಗೆ ಸಲ್ಲಿಸಿ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.ಮೊಬೈಲ್ನಲ್ಲೇ ಜಮೀನಿನ ಖಾತಾ ಬದಲಾವಣೆಗೆ ಈಗ ಅರ್ಜಿ ಸಲ್ಲಿಸಬಹುದು. ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ, ಶುಲ್ಕ ಮತ್ತು ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ. ಮನೆಯಲ್ಲೇ ಕುಳಿತು ಸುಲಭವಾಗಿ ಖಾತಾ ವರ್ಗಾವಣೆ ಮಾಡಿ.
- ಕುರಿ ಸಾಕಾಣಿಕೆ ಮಾಡುವವರಿಗೆ 1.75 ಲಕ್ಷ ಸಬ್ಸಿಡಿ ನೀಡಲಿದೆ ಸರ್ಕಾರ! ಈಗಲೇ ಅರ್ಜಿ ಸಲ್ಲಿಸಿ!ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ರಾಜ್ಯ ಸರ್ಕಾರವು ಇತ್ತೀಚೆಗೆ ಕಳೆದ ಸಾಲಿನ ಮುಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆ ಪರಿಹಾರ ಹಣವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಿದೆ. ಅಲ್ಲದೇ ಸಣ್ಣಾತ್ತು ಅತಿ ಸಣ್ಣ ರೈತರಿಗೆ ಹೆಚ್ಚುವರಿ ಪರಿಹಾರವಾಗಿ ತಲಾ 3,000 ರೂಪಾಯಿ ಹಣವನ್ನು ಜಮಾ ಮಾಡಿದೆ.
- ನಿಮ್ಮ ಹೊಲದ ಸರ್ವೇ ನಂಬರ್ ನಲ್ಲಿ ಯಾರ ಯಾರ ಹೆಸರಿದೆ ಎಂಬುದನ್ನು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!ಇದೀಗ ನೀವು ನಿಮ್ಮ ಮೊಬೈಲ್ ನಲ್ಲೇ ನಿಮ್ಮ ಜಮೀನಿನ ಸರ್ವೇ ನಂಬರ್ ನಲ್ಲಿ ಯಾರ ಯಾರ ಹೆಸರಿದೆ ಮತ್ತು ಯಾರ ಹೆಸರಿಗೆ ಎಷ್ಟು ಎಕರೆ ಜಮೀನಿದೆ ಮತ್ತು ಯಾರ ಹೆಸರಿಗೆ ಎಷ್ಟು ಸಾಲವಿದೆ ಎಂಬುದನ್ನು ಸುಲಭವಾಗಿ ಚೆಕ್ ಮಾಡಬಹುದು.
- ಪಿಎಂ ಕಿಸಾನ್: ಇಕೆವೈಸಿ ಆಗದೇ ಇರುವ ರೈತರ ಪಟ್ಟಿ ಬಿಡುಗಡೆ ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧೀಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಕಳೆದ ಅಂಕಣದಲ್ಲಿ ನಾವು 21 ನೇ ಕಂತಿನ ಪಿಎಂ ಕಿಸಾನ್ ಸಮ್ಮಾನ ಯೋಜನೆಯ ಅರ್ಹ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ.
- 38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸಿಗಲಿದೆ : ಇಲ್ಲಿದೆ ಮಾಹಿತಿಕರ್ನಾಟಕದ ಸುಮಾರು 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಕೃಷಿ ಸಾಲ ನೀಡುವ ಮಹತ್ವದ ಯೋಜನೆ ಜಾರಿಗೆ ಬಂದಿದೆ. ಈ ಯೋಜನೆಯ ಮೂಲಕ ರೈತರು ಸುಲಭವಾಗಿ ಕೃಷಿ ಚಟುವಟಿಕೆಗಳಿಗೆ ಹಣಕಾಸು ಸಹಾಯ ಪಡೆಯಬಹುದು. ಅರ್ಹತೆ, ಸಾಲದ ಮೊತ್ತ ಮತ್ತು ಅರ್ಜಿ ಸಲ್ಲಿಸುವ ವಿಧಾನ ಕುರಿತು ಸಂಪೂರ್ಣ ಮಾಹಿತಿ ಇಲ್ಲಿ ತಿಳಿದುಕೊಳ್ಳಿ. 🌾💰
- ಪಿಎಂ ಕಿಸಾನ್ 22ನೇ ಕಂತಿನ ಹಣ ನಿಮಗೆ ಜಮೆಯಾಗುವುದೇ ಇಲ್ಲೇ ಚೆಕ್ ಮಾಡಿಪಿಎಂ ಕಿಸಾನ್ 22ನೇ ಕಂತಿನ ಹಣ ನಿಮ್ಮ ಖಾತೆಗೆ ಜಮೆಯಾಗಿದೆ ಅಥವಾ ಇಲ್ಲವೇ ಎಂಬುದನ್ನು ಈಗಲೇ ಚೆಕ್ ಮಾಡಿ. Pradhan Mantri Kisan Samman Nidhi ಯೋಜನೆಯ ಲಾಭಾರ್ಥಿಗಳು ತಮ್ಮ ಬೆನಿಫಿಶಿಯರಿ ಸ್ಟೇಟಸ್ ಮತ್ತು ಪೇಮೆಂಟ್ ವಿವರಗಳನ್ನು ಸರಳವಾಗಿ ಹೇಗೆ ಪರಿಶೀಲಿಸಬಹುದು ಎಂಬುದನ್ನು ಈ ಲೇಖನದಲ್ಲಿ ತಿಳಿಯಿರಿ. 🚜💰










