ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಕಳೆದ ಸಾಲಿನ ಮುಂಗಾರು ಹಂಗಾಮಿನ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರ ಬರ ಪರಿಹಾರ ಹಣವನ್ನು ಒಟ್ಟು 3 ಕಂತುಗಳಲ್ಲಿ ಬಿಡುಗಡೆ ಮಾಡಿದೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಕಳೆದ ಸಾಲಿನ ಮುಂಗಾರು ಹಂಗಾಮಿನ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರ ಬರ ಪರಿಹಾರ ಹಣವನ್ನು ಒಟ್ಟು 3 ಕಂತುಗಳಲ್ಲಿ ಬಿಡುಗಡೆ ಮಾಡಿದೆ.
Thank you for reading this post, don't forget to subscribe!ಇದಕ್ಕಾಗಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದಿಂದ 3,454 ಕೋಟಿ ರೂಪಾಯಿ ಅನುದಾನವನ್ನು ಪಡೆದಿತ್ತು. ಅಲ್ಲದೇ ರಾಜ್ಯ ಸರ್ಕಾರ ತನ್ನ ಸ್ವಂತ ಖಜಾನೆಯಿಂದ 500 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹೆಚ್ಚುವರಿ ಪರಿಹಾರವಾಗಿ ತಲಾ 3,000 ರೂಪಾಯಿ ಹಣವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಿದೆ.
ಹೀಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದಿಂದ ಬಂದ ಹಣವನ್ನು 3 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ಬೇರೆ ಬೇರೆ ಸರ್ವೇ ನಂಬರ್ ಜಮೀನಿನ ಮೇಲೆ ಜಮಾ ಆಗಿದೆ.
ಹಾಗಾದರೆ ಯಾವ ಸರ್ವೆ ನಂಬರ್ ಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸುತ್ತೇವೆ. ಆದ್ದರಿಂದ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ಹಂತ -1) ಮೊಟ್ಟ ಮೊದಲು ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಕೆಳಗೆ ತೋರಿಸಿದಂತೆ ವರ್ಷ, ಋತು ಮತ್ತು ವಿಪತ್ತಿನ ವಿಧವನ್ನು ಕ್ರಮವಾಗಿ 2023-24, ಮುಂಗಾರು ಹಾಗೂ ಬರ ಎಂದು ನಮೂದಿಸಿ Get Data ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಸರ್ವೇ ನಂಬರ್ ಮೇಲೆ ಕ್ಲಿಕ್ ಮಾಡಿ.
ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ಹಾಗೂ ಸರ್ವೇ ನಂಬರ್, ಸರ್ನಾಕ್ ಮತ್ತು ಹಿಸ್ಸಾ ಸಂಖ್ಯೆಯನ್ನು ನಮೂದಿಸಿ Fetch ಮೇಲೆ ಕ್ಲಿಕ್ ಮಾಡಿ.
ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನಿಮ್ಮ ಯಾವ ಸರ್ವೆ ನಂಬರಿಗೆ ಎಷ್ಟು ಹಣ ಜಮಾ ಆಗಿದೆಅತ್ತು ಯಾವ ದಿನಾಂಕದಂದು ಆಗಿದೆ ಹಾಗೂ ಯಾವ ಬ್ಯಾಂಕಿಗೆ ಜಮಾ ಆಗಿದೆ ಎಂಬ ಮಾಹಿತಿ ಸಿಗುತ್ತದೆ.
ಈ ರೀತಿಯಾಗಿ ನೀವು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಯಾವ ಸರ್ವೆ ನಂಬರಿಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಸುಲಭವಾಗಿ ಚೆಕ್ ಮಾಡಬಹುದು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode
ಕರ್ನಾಟಕದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಮುನ್ಸೂಚನೆ,…
ಕರ್ನಾಟಕದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣದ ಕುರಿತು ಮಹತ್ವದ ಮಾಹಿತಿ ಇಲ್ಲಿದೆ. ಹಣ ಬಿಡುಗಡೆ ಆಗಿದೆಯೇ, ನಿಮ್ಮ…
ಅಕ್ಟೋಬರ್ 15ರಿಂದ ಕರ್ನಾಟಕದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.…
ನಿಮ್ಮ ಬೆಳೆ ವಿಮೆ ಹಣ ಇನ್ನೂ ಜಮೆಯಾಗಿಲ್ಲವೇ? ಬೆಳೆ ವಿಮೆ ಪಡೆಯಲು ರೈತರು ಯಾವ ಕ್ರಮಗಳನ್ನು ಅನುಸರಿಸಬೇಕು, ಅರ್ಜಿಯ ಸ್ಥಿತಿಯನ್ನು…
Karnataka Rain Alert: ರಾಜ್ಯದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 4 ದಿನಗಳ ಮಳೆಯ ಮುನ್ಸೂಚನೆ ಕುರಿತು ಹವಾಮಾನ ಇಲಾಖೆ…
ಬಾಲಿವುಡ್ ನಟ ಶಾರುಖ್ ಖಾನ್ ಜೈಲು ಸೇರಿದ್ದರು, ಅವರನ್ನು ನಟ ನಾನಾ ಪಾಟೇಕರ್ ಬಿಡಿಸಿಕೊಂಡು ಬಂದಿದ್ದರು ಎಂಬ ಕುತೂಹಲಕಾರಿ ವಿಚಾರ…