ಆತ್ಮೀಯ ರೈತ ಬಾಂಧವರೇ ತಮಗೆಲ್ಲೇಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ತಮಗೆಲ್ಲ ತಿಳಿದಿರುವಂತೆ ಕಳೆದ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಾಡಿಕೆಗಿಂತ ಕಡಿಮೆ ಮಳೆಯಾದ ಕಾರಣ ಎಲ್ಲ ಬೆಳೆಗಳು ನಷ್ಟವಾಗಿದ್ದವು.
Thank you for reading this post, don't forget to subscribe!
ಅದಕ್ಕೆ ಪ್ರತಿಕ್ರಿಯೆಯಾಗಿ ರಾಜ್ಯ ಸರ್ಕಾರವು ಬೆಳೆಹಾನಿಯಾದ ಪ್ರತಿ ರೈತರ ಖಾತೆಗೆ ನೇರವಾಗಿ ಬೆಳೆ ಹಾನಿ ಪರಿಹಾರ ಹಣ ಜಮಾ ಮಾಡುವ ಕ್ರಮವನ್ನು ತೆಗೆದುಕೊಂಡಿದ್ದಾರೆ. ಅದರಂತೆ ಈಗಾಗಲೇ ಮೂರು ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗಿದೆ.
ಅಲ್ಲದೇ ರಾಜ್ಯ ಸರಕಾರ ಹೆಚ್ಚುವರಿಯಾಗಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕೇಂದ್ರ ಸರ್ಕಾರದ ಅನುದಾನ ಅಲ್ಲದೇ ರಾಜ್ಯ ಸರ್ಕಾರದ ಬೊಕ್ಕಸದಿಂದ 500 ಕೋಟಿ ರೂಪಾಯಿ ವೆಚ್ಚದಲ್ಲಿ ರೈತರಿಗೆ ಹೆಚ್ಚುವರಿ ಪರಿಹಾರ ಹಣ ಜಮಾ ಮಾಡುತ್ತಿದೆ.
ಆದರೆ ಇನ್ನೂ ಹಲವು ರೈತರಿಗೆ ಬರ ಪರಿಹಾರದ ಒಂದು ಕಂತಿನ ಹಣವು ಬಂದಿಲ್ಲ. ಅಂತಹ ಹಣ ಜಮಾ ಆಗದೇ ಇರುವ ರೈತರು ಏನು ಮಾಡಬೇಕು, ಎಲ್ಲಿ ದಾಖಲೆ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿ ತಿಳಿಯಲು ಈ ಅಂಕಣವನ್ನು ಕೊನೆವರೆಗೂ ತಪ್ಪದೇ ಓದಿರಿ.
ಬೆಳೆ ಪರಿಹಾರ ಹಣ ಜಮಾ ಆಗದೇ ಇರಲು ಕಾರಣವೇನು?
ಹಲವು ರೈತರ ಖಾತೆಗೆ ಬೆಳೆ ಪರಿಹಾರ ಹಣ ಜಮಾ ಆಗದೇ ಇರಲು ಮುಖ್ಯ ಕಾರಣವೆಂದರೆ ಅಂತಹ ರೈತರು ತಮ್ಮ ಹೆಸರಿಗೆ ಎಫ್ ಐ ಡಿ (FID) ನಂಬರ್ ಮಾಡಿಸದೇ ಇರುವುದು.
ಹೌದು ರೈತರೇ ಇದೀಗ ಸರ್ಕಾರದ ಎಲ್ಲ ಯೋಜನೆಗಳ ಲಾಭ ಪಡೆಯಲು ರೈತರಿಗೆ ಎಫ್ ಐ ಡಿ (FID) ನಂಬರ್ ಕಡ್ಡಾಯವಾಗಿದ್ದು ಈ ನಂಬರ್ ಇಲ್ಲದಿದ್ದರೆ ನಿಮಗೆ ಬೆಳೆ ಪರಿಹಾರ ಹಣ, ಬೆಳೆ ವಿಮೆ ಹಣ ಅಥವಾ ಪಿಎಂ ಕಿಸಾನ್ ಹಣ ಜಮಾ ಆಗುವುದಿಲ್ಲ. ಇದೆಲ್ಲಕ್ಕೂ ಎಫ್ ಐ ಡಿ (FID) ನಂಬರ ಬೇಕೆ ಬೇಕು.
ನಿಮ್ಮ ಹೆಸರಿಗೆ FID ನಂಬರ್ ಇದೆಯಾ ಅಥವಾ ಇಲ್ಲವಾ ಎಂಬುದನ್ನು ಮೊಬೈಲ್ ನಲ್ಲಿ ತಿಳಿಯಲು ಕೆಳಗೆ ತಿಳಿಸಿದ ವಿಧಾನವನ್ನು ಅನುಸರಿಸಿ.
ಮೊಬೈಲ್ ನಲ್ಲೇ FID ನಂಬರ್ ಚೆಕ್ ಮಾಡುವುದು ಹೇಗೆ?
ಹಂತ -1) ರೈತರೇ ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣುತ್ತದೆ. ಅಲ್ಲಿ ನೀವು ನಿಮ್ಮ 12 ಸಂಖ್ಯೆಯ ಆಧಾರ್ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಒಂದು ಹೊಸ ಪೇಜ್ ತೆರೆದುಕೊಳ್ಳುತ್ತದೆ. ಅದರಲ್ಲಿ ನಿಮ್ಮ ಹೆಸರಿಗೆ FID ನಂಬರ್ ಇದ್ದರೆ ಅಲ್ಲಿ ಕಾಣಿಸುತ್ತದೆ. ಅದರ ಜೊತೆಗೆ ನಿಮ್ಮ ಪಿಎಂ ಕಿಸಾನ್ ಐಡಿ ನಂಬರ್ ಕೂಡ ಕಾಣುತ್ತದೆ ಮತ್ತು ಯಾವ ಸರ್ವೆ ನಂಬರಿಗೆ ನಿಮ್ಮ FID ನಂಬರ್ ಲಿಂಕ್ ಆಗಿದೆ ಎಂಬ ಮಾಹಿತಿ ಸಿಗುತ್ತದೆ.
ಒಂದು ವೇಳೆ ನಿಮ್ಮ ಹೆಸರಿಗೆ ಎಫ್ ಐ ಡಿ (FID) ನಂಬರ್ ಇಲ್ಲದಿದ್ದರೆ ಈ ಕೂಡಲೇ ನೀವು ಎಫ್ ಐ ಡಿ (FID) ನಂಬರ್ ಮಾಡಿಸಿ. ಎಫ್ ಐ ಡಿ (FID) ನಂಬರ್ ಮಾಡಿಸುವುದು ಹೇಗೆ ಮತ್ತು ಅದಕ್ಕೆ ಯಾವ ದಾಖಲೆಗಳು ಬೇಕಾಗುತ್ತವೆ ಎಂಬುದನ್ನು ಕೆಳಗೆ ತಿಳಿಸಿದ್ದೇವೆ ತಪ್ಪದೇ ಓದಿ.
FID ನಂಬರ್ ಇಲ್ಲದಿದ್ದರೆ ಏನು ಮಾಡಬೇಕು?
ರೈತ ಮಿತ್ರರೇ ಈಗಾಗಲೇ ನಿಮಗೆ ಮೇಲೆ ತಿಳಿಸಿದಂತೆ ಸರ್ಕಾರದ ಯಾವುದೇ ಕಾರ್ಯಕ್ರಮವಾಗಲಿ ಅಥವಾ ಯೋಜನೆಯಾಗಲಿ ಅಥವಾ ಸಬ್ಸಿಡಿಯಾಗಲಿ , ಅದರ ಪ್ರಯೋಜನ ಪಡೆಯಲು ನಿಮ್ಮ ಬಳಿ ನಿಮ್ಮ ಸ್ವಂತ FID ನಂಬರ್ ಇರುವುದು ಅವಶ್ಯಕ. ಹಾಗಾಗಿ ಒಂದು ವೇಳೆ ನಿಮ್ಮ ಹೆಸರಿಗೆ FID ನಂಬರ್ ರಚನೆಯಾಗದೆ ಇದ್ದರೆ, ನೀವು ಈ ಕೂಡಲೇ ನಿಮ್ಮ ಸಮೀಪದ ಗ್ರಾಮ್ ಒನ್ ಅಥವಾ ಸಾಮಾನ್ಯ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಕೆಳಗೆ ನೀಡಲಾಗಿರುವ ದಾಖಲೆಗಳನ್ನು ಕೊಟ್ಟು ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕಾಗುತ್ತವೆ?
- ಆಧಾರ ಕಾರ್ಡ
- ಹೊಲದ ಉತಾರಿ
- ಇತ್ತೀಚಿನ ಭಾವಚಿತ್ರ (ಫೋಟೋ)
- ಬ್ಯಾಂಕ್ ಪಾಸ್ ಬುಕ್ ಝೆರಾಕ್ಸ್
- ಜಾತಿ ಪ್ರಮಾಣ ಪತ್ರ ( ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ)
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಿದ್ದು, ವಿದ್ಯಾರ್ಥಿಗಳು ತಮ್ಮ ರ್ಯಾಂಕ್, ಅಂಕಗಳು ಹಾಗೂ ಸ್ಕೋರ್ಕಾರ್ಡ್ನ್ನು ಆನ್ಲೈನ್ನಲ್ಲಿ ಪರಿಶೀಲಿಸಬಹುದು. ಇಂಜಿನಿಯರಿಂಗ್, ಫಾರ್ಮಸಿ, ಕೃಷಿ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆಗೆ ಇದು ಮಹತ್ವದ ಹಂತವಾಗಿದೆ.
- ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯಲ್ಲಿ ಹೆಸರು ತಿದ್ದುಪಡಿ ಮಾಡುವಂತೆ ಪಹಣಿಯಲ್ಲಿ ಹೆಸರು ತಪ್ಪಾಗಿರುವುದನ್ನು ಸಹ ರೈತರು ಸರಿಪಡಿಸಬಹುದುರೈತರು ತಮ್ಮ ಪಹಣಿಗಳಲ್ಲಿ ಹೆಸರು ತಂದೆಯ ಹೆಸರನ್ನು ಸರಿಯಾಗಿ ಗಮನಿಸಿರುವುದಿಲ್ಲ. ಸ್ಪೆಲಿಂಗ್ ಮಿಸ್ಟೇಕ್ ಇದ್ದರೂ ನೀವು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತೀರಿ. ಹಾಗಾಗಿ ನಿಮ್ಮ ಪಹಣಿಯನ್ನು ಒಮ್ಮೆ ಪರಿಶೀಲಿಸಿಕೊಳ್ಳಿ. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ಸಂಪೂರ್ಣ ಮಾಹಿತಿ.
- Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ ಹೆಚ್ಚು ಸುರಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಾವಿರಾರು ರೈತರ ಬೆಳೆಗಳು ಹಾನಿಗೆ ಒಳಗಾಗಿವೆ.
- Trump Warns Oman Over Hormuz Strait Mediation With Iran
Amid escalating tensions in the Strait of Hormuz, the United States has launched fresh strikes on Iran following alleged drone threats targeting American vessels. Explosions were reported near Bandar Abbas as regional security concerns continue to intensify.
- ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ ಊಹಾಪೋಹಗಳ ನಡುವೆ ಸಂವಿಧಾನಾತ್ಮಕ ಪ್ರಕ್ರಿಯೆ ಹೇಗಿರುತ್ತದೆ ಎಂಬುದರ ಬಗ್ಗೆ ಇದೀಗ ಕುತೂಹಲ ಹೆಚ್ಚಾಗಿದೆ.
- ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj Mishra ರಾತ್ರೋರಾತ್ರಿ ಮುಂಬೈಗೆ ತೆರಳಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿದೆ. ಕಾಂಗ್ರೆಸ್ ಒಳರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಬದಲಾವಣೆ ಚರ್ಚೆ ಮತ್ತೆ ಜೋರಾಗಿದೆ.
- Milk-Curd: ಹಾಲಿನ ಜೊತೆ ಮೊಸರೂ ಕುಡೀತೀರಾ? ಇದು ಎಷ್ಟು ಡೇಂಜರ್ ಗೊತ್ತಾ?
ಹಾಲಿನ ಜೊತೆ ಮೊಸರು ಸೇವಿಸುವ ಅಭ್ಯಾಸ ಇದೆಯಾ? ಆಯುರ್ವೇದದ ಪ್ರಕಾರ ಈ ಫುಡ್ ಕಾಂಬಿನೇಷನ್ ಜೀರ್ಣಕ್ರಿಯೆಗೆ ತೊಂದರೆ ಉಂಟುಮಾಡಬಹುದು. ಗ್ಯಾಸ್ಟ್ರಿಕ್, ಅಜೀರ್ಣ, ಹೊಟ್ಟೆ ಉಬ್ಬರ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳ ಅಪಾಯ ಹೆಚ್ಚಾಗಬಹುದು. ಹಾಲು-ಮೊಸರು ಒಂದೇ ವೇಳೆ ಸೇವಿಸುವ ಮುನ್ನ ಈ ಮಾಹಿತಿ ತಿಳಿದುಕೊಳ್ಳಿ.
- ಪೋಷಕರೇ ಗಮನಿಸಿ : `CET’ ಸರ್ಕಾರಿ ಕೋಟಾದ ಸೀಟು ಪಡೆದರೂ ಕಾಲೇಜುಗಳು ಹೆಚ್ಚು ಶುಲ್ಕ ಕೇಳಿದರೆ ಜಸ್ಟ್ ಹೀಗೆ ದೂರು ನೀಡಿ.!
CET ಮೂಲಕ ಸರ್ಕಾರಿ ಕೋಟಾದ ಸೀಟು ಪಡೆದ ವಿದ್ಯಾರ್ಥಿಗಳಿಂದ ಕೆಲ ಕಾಲೇಜುಗಳು ಹೆಚ್ಚುವರಿ ಶುಲ್ಕ ಕೇಳುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ನಿಗದಿತ ಶುಲ್ಕಕ್ಕಿಂತ ಹೆಚ್ಚು ಹಣ ಕೇಳಿದರೆ ಪೋಷಕರು ಹಾಗೂ ವಿದ್ಯಾರ್ಥಿಗಳು ತಕ್ಷಣವೇ KEA ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಅಧಿಕೃತವಾಗಿ ದೂರು ಸಲ್ಲಿಸಬಹುದು. ದೂರು ನೀಡುವ ಸರಳ ವಿಧಾನ ಹಾಗೂ ಅಗತ್ಯ ದಾಖಲೆಗಳ ಮಾಹಿತಿ ಇಲ್ಲಿದೆ.
- ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ ಮುನ್ಸೂಚನೆ, ಯೆಲ್ಲೂ ಅಲರ್ಟ್ ಘೋಷಣೆ
ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ, ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜನರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
- BREAKING NEWS : ಮುಖ್ಯಮಂತ್ರಿ ಸ್ಥಾನಕ್ಕೆ ಪರಮೇಶ್ವಸರ್ ಹೆಸರು ಪ್ರಸ್ತಾಪಿಸಿದ ಸಿಎಂ ಸಿದ್ದರಾಮಯ್ಯ.!
ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಡಾ. ಜಿ. ಪರಮೇಶ್ವರ್ ಅವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದಾರೆ ಎನ್ನುವ ಮಾಹಿತಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಮುಂದಿನ ನಿರ್ಧಾರ ಏನು ಎಂಬುದರ ಮೇಲೆ ರಾಜ್ಯ ರಾಜಕೀಯದ ಕುತೂಹಲ ಹೆಚ್ಚಾಗಿದೆ.
- Karnataka Politics: ಡಿ.ಕೆ ಶಿವಕುಮಾರ್ಗೆ ಪಟ್ಟಾಭಿಷೇಕದ ಜೊತೆ ಸಿದ್ದರಾಮಯ್ಯ ನಾಲ್ವರು ಆಪ್ತರಿಗೆ ಡಿಸಿಎಂ ಹುದ್ದೆ ಸಾಧ್ಯತೆ
ಕರ್ನಾಟಕ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿರುವ ನಾಯಕತ್ವ ಬದಲಾವಣೆ ಚರ್ಚೆ ಮತ್ತಷ್ಟು ತೀವ್ರಗೊಂಡಿದೆ. ಡಿ.ಕೆ ಶಿವಕುಮಾರ್ಗೆ ಮುಖ್ಯಮಂತ್ರಿ ಪಟ್ಟಾಭಿಷೇಕ ಸಾಧ್ಯತೆ ಎನ್ನಲಾಗುತ್ತಿದ್ದರೆ, ಸಿದ್ದರಾಮಯ್ಯ ಆಪ್ತ ನಾಲ್ವರು ನಾಯಕರಿಗೆ ಡಿಸಿಎಂ ಹುದ್ದೆ ನೀಡುವ ಫಾರ್ಮುಲಾ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ಭಾರೀ ಚರ್ಚೆ ಶುರುವಾಗಿದೆ. ರಾಜ್ಯ ರಾಜಕೀಯದಲ್ಲಿ ಹೊಸ ಸಮೀಕರಣಗಳಿಗೆ ವೇದಿಕೆ ಸಿದ್ಧವಾಗಿದೆಯೇ ಎಂಬ ಕುತೂಹಲ ಹೆಚ್ಚಾಗಿದೆ!