ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ ಸಾಲ ಪಡೆದಿದ್ದೀರಾ? ನಿಮಗೆ ಅದರ ಸ್ಟೇಟಸ್ ಚೆಕ್ ಮಾಡಬೇಕೆ? ನೀವು ಸಾಲವನ್ನು ತೀರಿಸಿದ್ದರೂ ನಿಮ್ಮ ಪಹಣಿಯಲ್ಲಿ ಸಾಲ ತೋರಿಸುತ್ತಿದ್ದರೆ ಏನು ಮಾಡಬೇಕು?
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ ಸಾಲ ಪಡೆದಿದ್ದೀರಾ? ನಿಮಗೆ ಅದರ ಸ್ಟೇಟಸ್ ಚೆಕ್ ಮಾಡಬೇಕೆ? ನೀವು ಸಾಲವನ್ನು ತೀರಿಸಿದ್ದರೂ ನಿಮ್ಮ ಪಹಣಿಯಲ್ಲಿ ಸಾಲ ತೋರಿಸುತ್ತಿದ್ದರೆ ಏನು ಮಾಡಬೇಕು?
Thank you for reading this post, don't forget to subscribe!ನಿಮ್ಮ ಈ ಎಲ್ಲಾ ಪ್ರಶ್ನೆಗಳಿಗೆ ಈ ಅಂಕಣದಲ್ಲಿ ಉತ್ತರ ನೀಡಿದ್ದೇವೆ. ತಪ್ಪದೇ ಅಂಕಣವನ್ನು ಕೊನೆವರೆಗೂ ಓದಿರಿ.
ಭಾರತದಲ್ಲಿ ಕೃಷಿ ಕ್ಷೇತ್ರವು ಬಹುತೇಕ ಮಾನ್ಸೂನ್ ಆಧಾರಿತವಾಗಿದೆ. ಆದ್ದರಿಂದ ಮುಂಗಾರು ವಿಫಲಗೊಂಡ ವರ್ಷ ರೈತರು ಬೆಳೆ ಹಾನಿಯಾಗಿ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕುತ್ತಾರೆ. ಈ ಸಂಕಷ್ಟದಿಂದ ಪಾರಾಗಲು ಅವರು ಸಾಲದ ಸುಳಿಗೆ ಸಿಲುಕುತ್ತಾರೆ.
ಇನ್ನು ಹೆಚ್ಚಿನ ಸಂದರ್ಭಗಳಲ್ಲಿ ರೈತರು ತಾವು ಮಾಡಿದ ಸಾಲವನ್ನು ತೀರಿಸಿದ್ದರೂ ಅವರ ಪಹಣಿಯಲ್ಲಿ ಇನ್ನೂ ಸಾಲವಿದೆ ಎಂದು ತೋರಿಸುತ್ತಿರುತ್ತದೆ. ಅದನ್ನು ಹೇಗೆ ಪರಿಹರಿಸಬೇಕು ಎಂಬುದನ್ನು ಈ ಅಂಕಣದಲ್ಲಿ ತಿಳಿಯೋಣ ಬನ್ನಿ.
ಹಂತ -1) ಮೊದಲು ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ Go ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು surnoc ಮೇಲೇ ಕ್ಲಿಕ್ ಮಾಡಿ ಸ್ಟಾರ್ ಅನ್ನು ಆಯ್ಕೆ ಮಾಡಿ, ಹಿಸ್ಸಾ ನಂಬರ್ ಹಾಕಿ period ಎಂಬಲ್ಲಿ ಅದು ತಾನಾಗೇ ಬರುತ್ತದೆ. ನಂತರ fetch details ಮೇಲೆ ಕ್ಲಿಕ್ ಮಾಡಿ.
ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು view ಬಟನ್ ಮೇಲೆ ಕ್ಲಿಕ್ ಮಾಡಿ.
ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ನಿಮ್ಮ ಜಮೀನಿನ ಪಹಣಿ ಪತ್ರ ಕಾಣಿಸುತ್ತದೆ. ಅದರಲ್ಲಿ ನೀವು ನಿಮ್ಮ ಯಾವ ಸರ್ವೇ ನಂಬರ್ ಗೆ ಎಷ್ಟು ಸಾಲವಿದೆ, ಯಾರ ಹೆಸರ ಮೇಲೆ ಪಹಣಿ ಪತ್ರ ಇದೆ ಎಂಬ ಮಾಹಿತಿ ಸಿಗುತ್ತದೆ.
ಒಂದು ವೇಳೆ ನೀವು ಎಲ್ಲಾ ಸಾಲವನ್ನು ಕಟ್ಟಿದ್ದರೂ ನಿಮ್ಮ ಪಹಣಿ ಪತ್ರದಲ್ಲಿ ಸಾಲವು ತೋರಿಸುತ್ತಿದ್ದರೆ,ತಕ್ಷಣವೇ ನೀವು ಸಾಲ ತೆಗೆದುಕೊಂಡ ನಿಮ್ಮ ಬ್ಯಾಂಕಿಗೆ ಹೋಗಿ ಅದನ್ನು ತೆಗೆಸಲು ಹೇಳಿ.
ಹೀಗೆ ನೀವು ನಿಮ್ಮ ಮನೆಯಲ್ಲಿ ಕುಳಿತು ನಿಮ್ಮ ಮೊಬೈಲ್ ನಲ್ಲೇ ನಿಮ್ಮ ಸಾಲದ ವಿವರವನ್ನು ಸುಲಭವಾಗಿ ತಿಳಿದುಕೊಳ್ಳಬಹುದು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…