Categories: information

ಬೆಳೆ ಸಮೀಕ್ಷೆ ಮೊಬೈಲ್ ನಲ್ಲಿ ಹೀಗೆ ಮಾಡಿ ಬೆಳೆ ವಿಮೆ ಹಣ ಪಡೆಯಿರಿ. ಇಲ್ಲಿದೆ ಸಂಪೂರ್ಣ ಮಾಹಿತಿ.

ಬೆಳೆ ಸಮೀಕ್ಷೆಯನ್ನು ಮೊಬೈಲ್‌ನಲ್ಲೇ ಮಾಡಿ ಬೆಳೆ ವಿಮೆ ಹಣ ಪಡೆಯಬಹುದು. ಯಾವ ಅಪ್ ಬಳಸಬೇಕು, ಹೇಗೆ ವಿವರ ತುಂಬಬೇಕು, ಕೊನೆಯ ದಿನಾಂಕ ಏನು – ಎಲ್ಲ ಮಾಹಿತಿಯನ್ನೂ ಇಲ್ಲಿ ಸಂಪೂರ್ಣವಾಗಿ ತಿಳಿದುಕೊಳ್ಳಿ. ರೈತರಿಗೆ ಬಹಳ ಉಪಯುಕ್ತ ಮಾಹಿತಿ.

Spread the love

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರಿಗೆ ಗುಡ್ ನ್ಯೂಸ್ ಇಲ್ಲಿದೆ. ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿಯೇ ಬೆಳೆ ಸಮೀಕ್ಷೆ ಮಾಡಬಹುದು. ಹೌದು, ರೈತ ಮಿತ್ರರೇ ಇದಕ್ಕೆ ಯಾರ ಸಹಾಯವೂ ಬೇಕಿಲ್ಲ. ಇಲ್ಲಿ ತಿಳಿಸಿದ ಮಾಹಿತಿಯ ಪ್ರಕಾರ ನೀವು ಸುಲಭವಾಗಿ ನಿಮ್ಮ ಬೆಳೆಗಳಿಗೆ ನೀವೇ ಸಮೀಕ್ಷೆ ಮಾಡಿ ಮಾಹಿತಿಯನ್ನು ಅಪ್ಲೋಡ್ ಮಾಡಬಹುದು.

2025-26ನೇ ಸಾಲಿನ ಹಿಂಗಾರು ಬೆಳೆ ಸಮೀಕ್ಷೆ ಈಗಾಗಲೇ ಆರಂಭವಾಗಿದೆ. ರೈತರು ಗೂಗಲ್ ಪ್ಲೇ ಸ್ಟೋರ್ ನಿಂದ ಹಿಂಗಾರು ರೈತರು ಬೆಳೆ ಸಮೀಕ್ಷೆ 2025 ಆಯಪ್ ನ್ನು ಡೌನ್ಲೋಡ್ ಮಾಡಿಕೊಂಡು ಬೆಳೆ ವಿವರವನ್ನು ಖುದ್ದಾಗಿ ದಾಖಲಿಸಬೇಕಿದೆ. ಹೀಗೆ ವಿವರ ದಾಖಲಿಸುವುದರಿಂದ ರೈತರಿಗೆ ಕನಿಷ್ಠ ಬೆಂಬಲ ಯೋಜನೆ, ಬೆಳೆ ವಿಮೆ ಯೋಜನೆ, ಬರಗಾಲ ಮತ್ತು ಪ್ರವಾಹ ಸಂದರ್ಭದಲ್ಲಿ ನಷ್ಟ ಪರಿಹಾರ ಪಡೆಯಲು ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು, ಬೆಳೆಸಾಲ ಪಡೆಯುವಲ್ಲಿ ಅನುಕೂಲವಾಗಲಿದೆ. ಎಲ್ಲಾ ರೈತರು ಬೆಳೆ ವಿವರವನ್ನು ತ್ವರಿತವಾಗಿ ಬೆಳೆ ಸಮೀಕ್ಷೆ ಆಯಪ್ ನಲ್ಲಿ ದಾಖಲಿಸಿ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು.

Thank you for reading this post, don't forget to subscribe!

ಮೊಬೈಲ್ ನಲ್ಲಿ ಬೆಳೆ ಸಮೀಕ್ಷೆ ಮಾಡುವುದು ಹೇಗೆ?

https://play.google.com/store/apps/details?id=com.csk.farmer23_24.cropsurvey

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.ಆಗ ನಿಮಗೆ ಹಿಂಗಾರು ರೈತರ ಬೆಳೆ ಸಮೀಕ್ಷೆ 2025 ಕಾಣಿಸುತ್ತದೆ. ಅಲ್ಲಿ ನೀವು ಇನಸ್ಟಾಲ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಇದಾದ ನಂತರ ವೈಲ್ ಯೂಸಿಂಗ್ ದ ಆಯಪ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲೋ ಮೇಲೆ ಕ್ಲಿಕ್ ಮಾಡಬೇಕು. ಇದಾದ ನಂತರ ಅಗ್ರಿ ಮೇಲೆ ಕ್ಲಿಕ್ ಮಾಡಬೇಕು.  ನಂತರ ನಿಮಗೆ ರೈತರ ಬೆಳೆ ಸಮೀಕ್ಷೆ 2025 ಕೆಳಗಡೆ ಋತು ಹಿಂಗಾರು ಕಾಣಿಸುತ್ತದೆ. ಅದರ ಕಳಗಡೆ ನಿಮಗೆ ಬೆಳೆ ಸಮೀಕ್ಷೆಯಲ್ಲಿ ತೊಂದರೆಯಾದರೆ ಅಲ್ಲಿ ಕಾಣುವ ರೈತರು ಬೆಳೆ ಸಮೀಕ್ಷೆಯ ಉಚಿತ ಸಹಾಯವಾಣಿ ನಂಬರ್ 18004253553 ಗೆ ಸಂಪರ್ಕಿಸಬಹುದು.

ಬೆಳೆ ಸಮೀಕ್ಷೆ ಮಾಡುವಾಗ ಏನೇನು ಮಾಡಬೇಕು?

ಇಕೆವೈಸಿ ಮೂಲಕ ಆಧಾರ್ ದೃಢೀಕರಿಸು ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ನಮೂದಿಸಿ ನ್ನ ಆಧಾರ್ ಮಾಹಿತಿ ಹಾಗೂ ಇತರ ಮಾಹಿತಿಗಳು ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಈಘ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಓಟಿಪಿ ಪಡೆಯಿರಿ Generate OTP ಮೇಲೆ ಕ್ಲಿಕ್ ಮಾಡಬೇಕಾ. ನಿಮ್ಮ ಮೊಬೈಲಿಗೆ ಒಂದು ಓಟಿಪಿ ಬರುತ್ತದೆ.ಆ ಓಟಿಪಿಸಂಖ್ಯೆಯನ್ನು ನೀವು ನಮೂದಿಸಬೇಕು.ಇಲ್ಲದಿದ್ದರೆ ಫೇಸ್ ಕ್ಯಾಪ್ಚುರ್ ಮೇಲೆ ಕ್ಲಿಕ್ ಮಾಡಬೇಕು

ಬೆಳೆ ಸಮೀಕ್ಷೆ ಏಕೆ ಕಡ್ಡಾಯ

ರೈತರು ಬರಗಾಲ ಪರಿಹಾರ, ಬೆಳೆ ವಿಮೆ, ಬೆಳೆ ಹಾನಿ ಪರಿಹಾರ ಪಡೆಯಲು ರೈತರು ಬೆಳೆ ಸಮೀಕ್ಷೆ ಮಾಡುವುದು ಕಡ್ಡಾಯವಾಗಿದೆ. ಇನ್ನೇಕೆ ತಡ ಈಗಲೇ ಬೆಳೆ ಸಮೀಕ್ಷೆ ಮಾಡಿ ಬೆಳೆ ಪರಿಹಾರ ಪಡೆಯಿರಿ.

ರೈತರು ಬೆಳೆ ವಿವರ ದಾಖಲಿಸದೇ ಹೋದಲ್ಲಿ ಸರ್ಕಾರದ ಯೋಜನೆಯ ಲಾಭದಿಂದ ವಂಚಿತರಾಗುವ ಸಾಧ್ಯತೆಯಿದೆ. ಆದ್ದರಿಂದ ಬೆಳೆ ವಿವರ ದಾಖಲಿಸಬೇಕು ಎಂದು ಲಕ್ಷ್ಮೇಶ್ವರ ಕೃಷಿ ಸಂಪರ್ಕ ಕೇಂದ್ರದ ಸಹಾಯಕ ನಿರ್ದೇಶಕ ಚಂದ್ರಶೇಖರ ನರಸಮ್ಮನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೈತರು ಹೆಚ್ಚಿನ ಆಸಕ್ತಿಯಂದಿಗೆ ಬೆಳೆ ಸಮೀಕ್ಷೆಯಲ್ಲಿ ಪಾಲ್ಗೊಂಡು ತಮ್ಮ ಜಮೀನಿನ ಬೆಳೆ ಮಾಹಿತಿ ದಾಖಲಿಸಬೇಕು. ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಆಯಾ ಗ್ರಾಮಗಳಿಗೆ ನಿಯೋಜಿಸಿದ ಖಾಸಗಿ ನಿವಾಸಿಗಳನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode

Recent Posts

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago