ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ಸಾಲಿನ ಮುಂಗಾರು ಬೆಳೆ ವಿಮೆಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಗೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರವು ಕಳೆದ ಒಂದು ತಿಂಗಳಿಂದ ಅವಕಾಶ ನೀಡಿತ್ತು.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ಸಾಲಿನ ಮುಂಗಾರು ಬೆಳೆ ವಿಮೆಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಗೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರವು ಕಳೆದ ಒಂದು ತಿಂಗಳಿಂದ ಅವಕಾಶ ನೀಡಿತ್ತು.
Thank you for reading this post, don't forget to subscribe!ಇವತ್ತಿನ ಅಂಕಣದಲ್ಲಿ ನಾವು ಈ ಸಾಲಿನ ಅಂದರೆ 2024-25 ನೇ ಸಾಲಿನ ಬೆಳೆ ವಿಮೆಗೆ ಲಭ್ಯವಿರುವ ಬೆಳೆಗಳು ಯಾವುವು ಹಾಗೂ ಅವುಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ. ಆದ್ದರಿಂದ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ಆತ್ಮೀಯ ಓದುಗರೇ, ಅತಿವೃಷ್ಟಿ , ಅನಾವೃಷ್ಟಿ,ಭೂಕಂಪ, ಸುನಾಮಿ ಇದೇ ಮುಂತಾದ ಪ್ರಕೃತಿ ವಿಕೋಪಗಳಿಗೆ ಸಿಲುಕಿ ಅತೀ ಹೆಚ್ಚು ಸಂಕಷ್ಟಕ್ಕೆ ಒಳಗಾಗುವ ಕ್ಷೇತ್ರವೆಂದರೆ ಅದು ಕೃಷಿ. ಇನ್ನು ಭಾರತದಲ್ಲಿ ಸುಮಾರು ಶೇಕಡಾ 60 ರಷ್ಟು ಕುಟುಂಬಗಳು ಈ ಕೃಷಿಯನ್ನೇ ನಂಬಿ ಬದುಕುತ್ತಿವೆ. ಆದರೆ ಮೇಲೆ ಸೂಚಿಸಿದ ಪ್ರಕೃತಿ ವಿಕೋಪಗಳಾದಾಗ ಇಂತಹ ರೈತರ ಬದುಕು ತುಂಬಾ ದುಸ್ತರವಾಗುತ್ತದೆ. ಸಾಲ ಶೂಲ ಮಾಡಿ ಬಿತ್ತಿ ಬೆಳೆದ ಬೆಳೆ ಹೀಗೆ ಪ್ರಕೃತಿ ವಿಕೋಪಕ್ಕೆ ಸಿಲುಕಿದ ಮರು ಕ್ಷಣವೇ ಎಷ್ಟೊ ರೈತ ಕುಟುಂಬಗಳು ಸಾಲದ ಹೊರೆ ತಾಳದೇ ಬೀದಿಗೆ ಬೀಳುತ್ತವೆ.
ಇಂತಹ ಸಂದರ್ಭದಲ್ಲಿ ರೈತರಿಗೆ ನೆರವಾಗುವ ದೃಷ್ಟಿಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು 50:50 ಅನುಪಾತದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಜಾರಿಗೆ ತಂದಿವೆ. ಈ ಯೋಜನೆಯ ಅಡಿಯಲ್ಲಿ ಪ್ರಕೃತಿ ವಿಕೋಪಗಳಿಗೆ ಸಿಲುಕಿ ಬೆಳೆ ಹಾನಿಯಾದ ರೈತರಿಗೆ ಆರ್ಥಿಕವಾಗಿ ಧನ ಸಹಾಯವನ್ನು ನೀಡಲಾಗುತ್ತಿದೆ.
ಹಾಗಾಗಿ ಈ ಯೋಜನೆಯ ಲಾಭವನ್ನು ಪಡೆಯಬೇಕಾದರೆ ರೈತರು ಮೊದಲು ರಾಜ್ಯ ಸರಕಾರದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ, ಈ ಸಾಲಿನ ಬೆಳೆ ವಿಮೆಗೆ ಅರ್ಜಿ ಸಲ್ಲಿಸಬೇಕು. ನಿಮ್ಮ ಜಿಲ್ಲೆಯ ಯಾವ ಬೆಳೆಗೆ ಎಷ್ಟು ವಿಮೆ ಮಾಡಿಸಬೇಕು ಹಾಗೂ ಅರ್ಜಿ ಸಲ್ಲಿಸುವುದು ಹೇಗೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುದನ್ನು ಕೆಳಗೆ ತೋರಿಸಲಾಗಿದೆ. ತಪ್ಪದೇ ಕೊನೆಯವರೆಗೂ ಓದಿರಿ ಹಾಗೂ ಇದೇ ರೀತಿಯ ಉಪಯುಕ್ತ ಮಾಹಿತಿ ಪಡೆಯಲು ಕೆಳಗೆ ನೀಡಲಾಗಿರುವ ನಮ್ಮ WhatsApp ಗುಂಪಿಗೆ ಸೇರಿ.
ಹಂತ -1) ಮೊದಲಿಗೆ ರೈತರು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ವರ್ಷ 2024-25 ಹಾಕಿ, ಋತು ಆಯ್ಕೆಯನ್ನು kharif ಎಂದು ನಮೂದಿಸಿ.
ಹಂತ-3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು crop you can isure ಮೇಲೆ ಕ್ಲಿಕ್ ಮಾಡಿ.
ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ, ಕೆಳಗೆ ನೀಡಲಾಗಿರುವ Dispaly ಬಟನ್ ಮೇಲೆ ಕ್ಲಿಕ್ ಮಾಡಿ.
ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ನಿಮ್ಮ ಜಿಲ್ಲೆಯಲ್ಲಿ ಈ ಸಾಲಿನ ಮುಂಗಾರು ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಯಾವ ಯಾವ ಬೆಳೆಗಳು ಇವೆ ಮತ್ತು ಬೆಳೆ ವಿಮೆ ಎಷ್ಟು ಇದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಸಿಗುತ್ತದೆ.
ಈ ರೀತಿಯಾಗಿ ನೀವು ಈ ಸಾಲಿನ ಮುಂಗಾರು ಬೆಳೆ ವಿಮೆಗೆ ಅರ್ಜಿ ಸಲ್ಲಿಸುವ ಮುನ್ನ ನಿಮ್ಮ ಜಿಲ್ಲೆಯಲ್ಲಿ ಯಾವ ಯಾವ ಬೆಳೆಗಳಿಗೆ ಬೆಳೆವಿಮೆ ಲಭ್ಯವಿದೆ ಎಂಬ ಮಾಹಿತಿಯನ್ನು ಪಡೆಯಬಹುದಾಗಿದೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…
ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…