ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಕಳೆದ ಸಾಲಿನ ಅಂದಾಜು ಮಳೆಗಿಂತ ಹೆಚ್ಚು ಸುರಿದ ಕಾರಣ ರಾಜ್ಯದಲ್ಲಿ ಲಕ್ಷಾಂತರ ರೈತರ ಬೆಳೆಗಳು ಹಾನಿಗೊಳಗಾಗಿವೆ.
Thank you for reading this post, don't forget to subscribe!ಇಂತಹ ಬೆಳೆ ಹಾನಿಗೊಳಗಾದ ರೈತರಿಗೆ ಇದೀಗ ಈ ಸಾಲಿನ ಬೆಳೆ ವಿಮೆ ಹಣ ಜಮಾ ಮಾಡಲಾಗುತ್ತಿದ್ದು, ಅರ್ಹ ರೈತರ ಖಾತೆಗೆ ಈಗಾಗಲೇ ನೇರವಾಗಿ ಬೆಳೆ ಹಾನಿಯಾದ ರೈತರ ಪ್ರತಿ ಎಕರೆಗೆ ₹37,300 ರೂಪಾಯಿಯಂತೆ ಹಣ ಜಮಾ ಮಾಡಲಾಗುತ್ತಿದೆ.
ಇದನ್ನೂ ಓದಿ: ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ₹4.75 ಲಕ್ಷ ರೂಪಾಯಿ ಸಹಾಯಧನ ! ಈಗಲೇ ಅರ್ಜಿ ಸಲ್ಲಿಸಿ
ಹಾಗಾದರೆ ಈ ವರ್ಷ ನಿಮ್ಮ ಬೆಳೆ ಮುಂಗಾರಿನಿಂದ ಹಾನಿಯಾಗಿದ್ದರೆ, ನಿಮ್ಮ ಖಾತೆಗೂ ಹಣ ಜಮಾ ಆಗುತ್ತದೆ. ನಿಮ್ಮ ಖಾತೆಗೆ ಹಣ ಜಮಾ ಆಗಿದೆಯಾ ಅಥವಾ ಇಲ್ಲವಾ ಎಂಬುದನ್ನು ಮೊಬೈಲ್ ನಲ್ಲೇ ಸುಲಭವಾಗಿ ಚೆಕ್ ಮಾಡಿಕೊಳ್ಳುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಬೆಳೆ ವಿಮೆ ಹಣ ಜಮಾ ಆಗಿದೆಯಾ ಎಂದು ಹೀಗೆ ಚೆಕ್ ಮಾಡಿ:-
ಹಂತ -1) ಮೊದಲಿಗೆ ನಿಮಗೆ ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://samrakshane.karnataka.gov.in/
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ವರ್ಷ 2024-25ಹಾಕಿ ಋತುವನ್ನು kharif ಎಂದು ಆಯ್ಕೆ ಮಾಡಿ, Go ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು Check Status ಮೇಲೆ ಕ್ಲಿಕ್ ಮಾಡಿ.

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಬೆಳೆ ವಿಮೆಗೆ ಸಲ್ಲಿಸಿದ ಅರ್ಜಿಯ ಸಂಖ್ಯೆ ಅಥವಾ ಮೊಬೈಲ್ ನಂಬರ್ ಅಥವಾ ಆಧಾರ ಕಾರ್ಡ ನಂಬರ್ ಹಾಕಿ ಕೆಳಗೆ ನೀಡಲಾಗಿರುವ ಕ್ಯಾಪ್ಚ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.

ಹಂತ -5) ನಂತರ ನಿಮಗೆ ಈ ಸಾಲಿನ ಬೆಳೆ ವಿಮೆ ಹಣ ಜಮಾ ಆಗಿದ್ದರೆ ,ಯಾವ ಖಾತೆಗೆ ಜಮಾ ಆಗಿದೆ ಮತ್ತು ಎಷ್ಟು ಹಣ ಜಮಾ ಆಗಿದೆ,ಯಾವ ದಿನಾಂಕದಂದು ಹಣ ಜಮಾ ಆಗಿದೆ ಎಂಬ ಮಾಹಿತಿ ಸಿಗುತ್ತದೆ.
ಇದನ್ನೂ ಓದಿ: ಆಧಾರ್ ಕಾರ್ಡ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ
ಒಂದು ವೇಳೆ ನಿಮಗೆ No Data Found ಎಂದು ತೋರಿಸುತ್ತಿದ್ದರೆ ನಿಮ್ಮ ಖಾತೆಗೆ ಇನ್ನೂ ಹಣ ಜಮಾ ಆಗಿಲ್ಲ ಎಂದರ್ಥ.
ಈ ರೀತಿಯಾಗಿ ನೀವು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲಿ ಈ ಸಾಲಿನ ಬೆಳೆ ವಿಮೆ ಹಣ ಜಮಾ ಆಗಿದೆಯಾ ಅಥವಾ ಇಲ್ಲವಾ ಎಂದು ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದು.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode