ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಬೆಂಗಳೂರು, ಅತಿವೃಷ್ಟಿಯಿಂದ ನೊಂದ ರೈತರಿಗೆ ಯಾವುದೇ ವಿಳಂಬ ಮಾಡದೆ ಸಕಾಲದಲ್ಲಿ ಸ್ಪಂದಿಸುವುದನ್ನು ನಮ್ಮ ಸರ್ಕಾರವು ಆದ್ಯತೆಯಾಗಿ ಪರಿಗಣಿಸಿದೆ. - ಬೆಳೆ ಹಾನಿಯಾದ ರೈತರ ವಿವರವನ್ನು ಈಗಾಗಲೇ PARIHARA (ಪರಿಹಾರ) ತಂತ್ರಾಂಶದಲ್ಲಿ ದಾಖಲಿಸಿದ್ದು, ಒಟ್ಟು 3,26,183 ರೈತರಿಗೆ ರೂ. 250.97 ಕೋಟಿ ಬೆಳೆ ಹಾನಿ ಪರಿಹಾರ ಮುಂದಿನ 3-4 ದಿನಗಳಲ್ಲಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಬೆಂಗಳೂರು, ಅತಿವೃಷ್ಟಿಯಿಂದ ನೊಂದ ರೈತರಿಗೆ ಯಾವುದೇ ವಿಳಂಬ ಮಾಡದೆ ಸಕಾಲದಲ್ಲಿ ಸ್ಪಂದಿಸುವುದನ್ನು ನಮ್ಮ ಸರ್ಕಾರವು ಆದ್ಯತೆಯಾಗಿ ಪರಿಗಣಿಸಿದೆ. – ಬೆಳೆ ಹಾನಿಯಾದ ರೈತರ ವಿವರವನ್ನು ಈಗಾಗಲೇ PARIHARA (ಪರಿಹಾರ) ತಂತ್ರಾಂಶದಲ್ಲಿ ದಾಖಲಿಸಿದ್ದು, ಒಟ್ಟು 3,26,183 ರೈತರಿಗೆ ರೂ. 250.97 ಕೋಟಿ ಬೆಳೆ ಹಾನಿ ಪರಿಹಾರ ಮುಂದಿನ 3-4 ದಿನಗಳಲ್ಲಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.
Thank you for reading this post, don't forget to subscribe!ಕಲಬುರಗಿ ಜಿಲ್ಲೆಯಲ್ಲಿ ಆಗಷ್ಟ್ ತಿಂಗಳಿನಲ್ಲಿ 69% ಹಾಗೂ ಸೆಪ್ಟೆಂಬರ್ 63% ಹೆಚ್ಚು ಮಳೆಯಿಂದಾಗಿ NDRF ಮಾರ್ಗಸೂಚಿಯನ್ವಯ ಕೃಷಿ, ತೋಟಗಾರಿಕೆ ಮತ್ತು ಕಂದಾಯ ಇಲಾಖೆಯ ಜಂಟಿ ಸಮೀಕ್ಷೆಯ ವರದಿಯ ಅನುಸಾರ ಕಲಬುರಗಿ ಜಿಲ್ಲೆಯಲ್ಲಿ 3,24,205 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ವರದಿಯಾಗಿರುತ್ತದೆ ಎಂದು ಸರ್ಕಾರಕ್ಕೆ ವರದಿ ಸಲ್ಲಿಸಲಾಗಿರುತ್ತದೆ. ಹತ್ತಿ, ತೊಗರಿ, ಸೂರ್ಯಕಾಂತಿ ಹಾಗೂ ಅರಿಶಿಣ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಿದ ಒಟ್ಟು 2,67,560 ರೈತರ 3,35,046.2 ಹೆಕ್ಟೇರ್ ಪ್ರದೇಶಕ್ಕೆ ಬೆಳೆ ವಿಮೆಯ ಮಧ್ಯಂತರ ಪರಿಹಾರ (Mid-Season Adversity) ನೀಡಲು ಸರ್ಕಾರ ಆದೇಶಿಸಿದೆ. ಬೆಳೆವಿಮೆ ಪರಿಹಾರ ಕೆಲವೇ ದಿನಗಳಲ್ಲಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ.
ಹಾನಿಯಾದ ಹತ್ತಿ ಬೆಳೆ ನೋಂದಣಿ ಮಾಡಿಸಿದ ರೈತರ- ಸಂಖ್ಯೆ10,025. ಪ್ರದೇಶ-11,727.5 ಹೆಕ್ಟೇರ್. ಅಂದಾಜು ಬೆಳೆ ವಿಮೆ ಮಧ್ಯಂತರ ಪರಿಹಾರ- ರೂ 9.95 ಕೋಟಿ. ತೊಗರಿ ಬೆಳೆ ವಿಮೆ ನೋಂದಣಿ ಮಾಡಿಸಿದ ರೈತರ- ಸಂಖ್ಯೆ 2,56,845. ಪ್ರದೇಶ– 3,22,734 ಹೆಕ್ಟೇರ್. ಅಂದಾಜು ಬೆಳೆ ವಿಮೆ ಮಧ್ಯಂತರ ಪರಿಹಾರ- ರೂ 232.81ಕೋಟಿ ಸೂರ್ಯಕಾಂತಿ ಬೆಳೆ ವಿಮೆ ನೋಂದಣಿ ಮಾಡಿಸಿದ ರೈತರ ಸಂಖ್ಯೆ- 382. ಪ್ರದೇಶ- 392.088 ಹೆಕ್ಟೇರ್. ಅಂದಾಜು ಬೆಳೆ ವಿಮೆ ಮಧ್ಯಂತರ ಪರಿಹಾರ ರೂ 0.24 ಕೋಟಿಯಾಗಿದೆ.
ಅರಿಶಿಣ ಬೆಳೆ ವಿಮೆ ನೋಂದಣಿ ಮಾಡಿಸಿದ ರೈತರ ಸಂಖ್ಯೆ- 308. ಪ್ರದೇಶ- 192.615 ಹೆಕ್ಟೇರ್. ಅಂದಾಜು ಬೆಳೆ ವಿಮೆ ಮಧ್ಯಂತರ ಪರಿಹಾರ ರೂ 0.41ಕೋಟಿ. ಒಟ್ಟು ಬೆಳೆ ವಿಮೆ ನೋಂದಣಿ ಮಾಡಿಸಿದ ರೈತರ ಸಂಖ್ಯೆ -2,67,560. ಪ್ರದೇಶ- 3,35,046.2 ಹೆಕ್ಟೇರ್ ಹಾಗೂ ಒಟ್ಟು ಪರಿಹಾರ ರೂ 243.41ಕೋಟಿ. ಉದ್ದು, ಹೆಸರು, ಸೋಯಾ ಅವರೆ ಹಾಗೂ ಇನ್ನಿತರ ಬೆಳಗಳಿಗೆ ಬೆಳೆ ಹಾನಿ ಕುರಿತು ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪದಡಿ (Localized calamity) ದೂರು ನೀಡಿದ ಒಟ್ಟು 22,385 ರೈತರಿಗೆ ರೂ. 8.79 ಕೊಟಿ ಬೆಳೆವಿಮೆ ಪರಿಹಾರ ಕೆಲವೇ ದಿನಗಳಲ್ಲಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ರೈತ ದೇಶದ ಬೆನ್ನೆಲುಬು ಎನ್ನುತ್ತಾರೆ, ಆ ಬೆನ್ನೆಲುಬನ್ನು ಗಟ್ಟಿಯಾಗಿಸಿ, ಉಳಿಸಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯ ಎಂದು ಭಾವಿಸಿದ್ದೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದ್ದಾರೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t
"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…
ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…
BBK 12 ಫಿನಾಲೆಗೆ ಮುನ್ನವೇ ಬಿಗ್‌ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…
ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…
ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…
ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…