Categories: information

ನಿಮ್ಮ ಮಗಳ ಹೆಸರಿಗಿರುವ ಭಾಗ್ಯಲಕ್ಷ್ಮೀ ಬಾಂಡ್ ಹಣ ಪಡೆಯಲು ಈ ದಾಖಲೆ ಸಲ್ಲಿಸಿ! ಇಲ್ಲಿದೆ ಸಂಪೂರ್ಣ ಮಾಹಿತಿ.,

submit Bhagyalakshmi bond documents: ಭಾಗ್ಯಲಕ್ಷ್ಮೀ ಯೋಜನೆಯಡಿ ನೋಂದಣಿ ಮಾಡಿಸಿ ಭಾಗ್ಯಲಕ್ಷ್ಮೀ ಬಾಂಡ್ ಪಡೆದಿರುವ ಯಾವ ಯಾವ ಫಲಾನುಭವಿಗಳಿಗೆಹಣ ಜಮೆಯಾಗಿಲ್ಲವೆ ಅವರು ಕೆಳಗೆ ಸೂಚಿಸಿದ ದಾಖಲೆಗಳನ್ನು ಸಲ್ಲಿಸಲು ಕೋರಲಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಅಂಕಣವನ್ನು ಕೊನೆಯವರೆಗೂ ಓದಿರಿ.

Spread the love

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ,submit Bhagyalakshmi bond documents: ಭಾಗ್ಯಲಕ್ಷ್ಮೀ ಯೋಜನೆಯಡಿ ನೋಂದಣಿ ಮಾಡಿಸಿ ಭಾಗ್ಯಲಕ್ಷ್ಮೀ ಬಾಂಡ್ ಪಡೆದಿರುವ ಯಾವ ಯಾವ ಫಲಾನುಭವಿಗಳಿಗೆಹಣ ಜಮೆಯಾಗಿಲ್ಲವೆ ಅವರು ಕೆಳಗೆ ಸೂಚಿಸಿದ ದಾಖಲೆಗಳನ್ನು ಸಲ್ಲಿಸಲು ಕೋರಲಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಅಂಕಣವನ್ನು ಕೊನೆಯವರೆಗೂ ಓದಿರಿ.

ಹೌದು, ಕಲಬುರಗಿ (ನಗರ) ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ಭಾಗ್ಯಲಕ್ಷ್ಮೀ ಯೋಜನೆಯಡಿ 2006-07 ರಲ್ಲಿ ನೋಂದಣಿಯಾಗಿ 18 ವರ್ಷ  ಪೂರ್ಣಗೊಂಡ ಫಲಾನುಭವಿಗಳಿಗೆ ಪರಿಪಕ್ವ ಮೊತ್ತ ನೀಡಲು ಅರ್ಜಿಯೊಂದಿಗೆ ಈ ಕೆಳಕಂಡ ದಾಖಲೆಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಸಲ್ಲಿಸಬೇಕು.

ಅರ್ಹ ಫಲಾನುಭವಿಗಳು ಅರ್ಜಿಯೊಂದಿಗೆ ಭಾಗ್ಯಲಕ್ಷ್ಮೀ ಮ್ಯಾಚುರಿಟಿ ಕ್ಲೇಂ ಫಾರ್ಮ, ಭಾಗ್ಯಲಕ್ಷ್ಮೀ ಮೂಲ ಬಾಂಡ್, ಮೊದಲು ಅರ್ಜಿ ಸಲ್ಲಿಸುವಾಗ ಕೊಟ್ಟಿರುವ ಮಗುವಿನ ಜನನ ಪ್ರಮಾಣ ಪತ್ರ ಶಾಲೆಯಿಂದ ಪಡೆದ ವ್ಯಾಸಂಗ ಪ್ರಮಾಣ ಪತ್ರ , ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಮಗುವಿನ ಆಧಾರ್ ಕಾರ್ಡ್, ಚಾಲ್ತಿಯಲ್ಲಿರುವ ಮಗುವಿನ ಹೆಸರಿನಲ್ಲಿರುವ ಬ್ಯಾಂಕ್ ಖಾತೆ ಪುಸ್ತಕ (ಯಾವುದೇ ಜಂಟಿ ಖಾತೆ ನಡೆಯುವುದಿಲ್ಲ) ಬಿಪಿಎಲ್ ಪಡಿತರ ಚೀಟಿ, ತಂದೆ ಮತ್ತು ತಾಯಿಯವರ ಆಧಾರ್ ಕಾರ್ಡ್, ಸಂತಾನಹರಣ ಶಸ್ತ್ರ ಚಿಕಿತ್ಸೆಪ್ರತಿಯನ್ನು ದೃಢೀಕರಣ ಲಗತ್ತಿಸಬೇಕು. ವಿದ್ಯಾಭ್ಯಾಸದ ಬಗ್ಗೆ ಫಲಾನುಭವಿರವರಿಂದ ದೃಢೀಕರಣ, ಕುಟುಂಬದಲ್ಲಿ ಮಕ್ಕಳ ಬಗ್ಗೆ ಸಿಡಿಪಿಓ ಅವರಿಂದ ದೃಢೀಕರಣ ಎಲ್ಲಾ ದಾಖಲೆಗಳ ನಾಲ್ಕು ಪ್ರತಿಯನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಸಲ್ಲಿಸಬೇಕು

Thank you for reading this post, don't forget to subscribe!

submit Bhagyalakshmi bond documents ನಿಮ್ಮ ಭಾಗ್ಯಲಕ್ಷ್ಮೀ ಬಾಂಡ್ ಸ್ಟೇಟಸ್ ಮೊಬಲ್ ನಲ್ಲಿ ಹೀಗೆ ಚೆಕ್ ಮಾಡಿ

ಭಾಗ್ಯಲಕ್ಷ್ಮೀ ಬಾಂಡ್ ಸ್ಟೇಟಸ್ ಮೊಬೈಲ್ ನಲ್ಲೇ ನೋಡಲು ಈ

http://blakshmi.kar.nic.in:8080 /

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಭಾಗ್ಯಲಕ್ಷ್ಮೀ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಭಾಗ್ಯಲಕ್ಷ್ಮೀ ಯೋಜನೆಯ ಕುರಿತಂತೆ ಮಾಹಿತಿ ಇರುತ್ತದೆ.  ಯೋಜನೆ ಆರಂಭಾವಾದಾಗ  ಭಾಗ್ಯಲಕ್ಷ್ಮೀ ಯೋಜನೆಯಡಿ ನಿಬಂಧನೆಗಳ ಮಾಹಿತಿ ಇರುತ್ತದೆ. Bhagyalakshi status ಚೆಕ್ ಮಾಡಲು ಮೇಲ್ಗಡೆ Home ಪಕ್ಕದಲ್ಲಿರುವ query/search ಕೆಳಗಡೆ ಕಾಣುವ Multi Search ಮೇಲೆ ಕ್ಲಿಕ್ ಮಾಡಬೇಕು.

ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ District ನಲ್ಲಿ ನಿಮ್ಮ ಜಿಲ್ಲೆ, Project ನಲ್ಲಿ ತಾಲೂಕು, cercle ನಲ್ಲಿ ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಮಗುವಿನ ಹೆಸರು ನಮೂದಿಸಬೇಕು. ಹುಟ್ಟಿದ ದಿನಾಂಕ ನಮೂದಿಸಿ ಅಲ್ಲಿ ಕಾಣುವ ಕೋಡ್ ನಂಬರ್ ನ್ನು ಕೆಳಗಡೆ ಇಮೇಜ್ ಕೋಡ್ ಬಾಕ್ಸ್ ನಲ್ಲಿ ನಮೂದಿಸಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು.

ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ Child Id ಕೆಳಗಡೆ ಕಾಣುವ ನಂಬರ್ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮತ್ತೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಭಾಗ್ಯಲಕ್ಷ್ಮೀ ಬಾಂಡ್ ಸ್ಟೇಟಸ್ ಮಾಹಿತಿ ಕಾಣುತ್ತದೆ


ಸ್ಟೇಟಸ್ ನಲ್ಲಿ ಬಾಂಡ್ ವಿತರಿಸಲಾಗಿದೆಯೋ ಇಲ್ಲವೋ?  ಎಲ್ಐಸಿಯಿಂದ ಪ್ರಿಂಟ್ ಆಗಿದೆಯೋ ಇಲ್ಲವೋ? ಜಿಲ್ಲೆ, ತಾಲೂಕು, ಗ್ರಾಮ, ಮಗುವಿನ ಹೆಸರು, ತಂದೆ ತಾಯಿಯ ಹೆಸರು, ಯಾವ ವರ್ಗಕ್ಕೆ ಮಗು ಸೇರಿದೆ?  ಭಾಗ್ಯಲಕ್ಷ್ಮೀ ಪಾಲಿಸಿ ಮಾಡಿಸುವಾಗ ತಂದೆ ತಾಯಿಯ ವಯಸೆಷ್ಟಿತ್ತು.ಮಗುವಿನ ಹೆಸರಿಗೆ ಎಷ್ಟು ಹಣ ಜಮೆ ಮಾಡಲಾಗಿದೆ ಹಾಗೂ ಚೆಕ್ ನಂಬರ್ ಸೆರಿದಂತೆ ಇನ್ನಿತರ ಮಾಹಿತಿ ಇರುತ್ತದೆ.

ಭಾಗ್ಯಲಕ್ಷ್ಮೀ ಯೋಜನೆಯನ್ನು ಬಿಜೆಪಿ ಸರ್ಕಾರ ಅಧಿಕಾರವಿದ್ದಾಗ ಜಾರಿಗೆ ತಂದಿತ್ತು. ನಂತರ ಭಾಗ್ಯಲಕ್ಮೀ ಯೋಜನೆಯನ್ನು ಆಗಸ್ಟ್ 2008 ರಲ್ಲಿ ಮಾರ್ಪಡಿಸಲಾಗಿದೆ. ಮಾರ್ಪಡಿಸಿದ ದಿನಾಂಕ 1-8-2008 ರ ನಂತರ ಭಾಗ್ಯಲಕ್ಷ್ಮೀ ಯೋಜನೆಯಡಿ ನೋಂದಣಿಯಾದ ಕುಟುಂಬದ ಮೊದಲ  ಮಗುವಿನ ಹೆಸರಿನಲ್ಲಿ 19,300 ರೂಪಾಯಿ ಹಾಗೂ ಎರಡನೇ ಮಗುವಿನ ಹೆಸರಿನಲ್ಲಿ 18,350 ರೂಪಾಯಿ ಮೊತ್ತವನ್ನು ಠೇವಣಿ ಮಾಡಲಾಗಿರುತ್ತದೆ. ಮೊದಲು 10 ಸಾವಿರ ರೂಪಾಯಿ ಠೇವಣಿ ಇಲಡಾಗುತ್ತಿತ್ತು. 18 ವರ್ಷ ಪೂರ್ಣಗೊಂಡು ನಿಬಂದನೆಗಳನ್ನು ಪೂರೈಸಿದ ಕುಟುಂಬದ ಮೊದಲನೇ ಫಲಾನುಭವಿಗೆ 1,00,097 ರೂಪಾಯಿ ಹಾಗೂ ಎರಡನೇ ಫಲಾನುಭವಿಗೆ 1,00,052 ರೂಪಾಯಿ ದೊರೆಯುತ್ತದೆ

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode

Recent Posts

SSLC ವಿದ್ಯಾರ್ಥಿಗಳೇ ಗಮನಿಸಿ: ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ

"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…

56 years ago

ರಾಜ್ಯದಲ್ಲಿ ನಡುಗುವ ಚಳಿ! ಈ 7 ಜಿಲ್ಲೆಗಳಲ್ಲಿ ‘ಶೀತ ಗಾಳಿ’ಯ ಅಲರ್ಟ್. ಜನವರಿ 10 ರವರೆಗೆ ಈ ಜಿಲ್ಲೆಯವರಿಗೆ ಎಚ್ಚರಿಕೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…

56 years ago

BBK 12 Finale: ಬಿಗ್‌ಬಾಸ್‌ ಘೋಷಣೆಗೂ ಮುನ್ನವೇ ವಿನ್ನರ್ ಹೆಸರು ಲೀಕ್ ಮಾಡಿದ ವಿಕಿಪೀಡಿಯಾ

BBK 12 ಫಿನಾಲೆಗೆ ಮುನ್ನವೇ ಬಿಗ್‌ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…

56 years ago

ನೀವು ಖರೀದಿಸುವ ಜಮೀನಿನಹೆಸರು ಯಾರುದು? ಆ ಜಮೀನಿನ ಅಕ್ಕಪಕ್ಕ ಮಾಲಿಕರ ಹೆಸರು ಇಲ್ಲಿ ಚೆಕ್ ಮಾಡಿ.

ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…

56 years ago

ಗೃಹಲಕ್ಷ್ಮಿ ಯೋಜನೆಯ ಬಾಕಿ ₹4000 ಹಣ ಒಟ್ಟಿಗೆ ಜಮಾ? ಖಾತೆಗೆ ಹಣ ಬರುವುದು ಯಾವಾಗ?  ಸಂಕ್ರಾಂತಿಗೆ ಸರ್ಕಾರದಿಂದ ಸಿಕ್ತು ಸ್ಪಷ್ಟನೆ. ಇಲ್ಲಿದೆ ಡಿಟೇಲ್ಸ್!

ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…

56 years ago

ಶೇ. 90 ರಷ್ಚು ಸಬ್ಸಿಡಿಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳು ಇಲ್ಲಿದೆ ಮಾಹಿತಿ

ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…

56 years ago