ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ ಬರೋಬ್ಬರಿ ಹತ್ತು ಪಟ್ಟು ಏರಿಸಿದೆ.

Spread the love

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧೀಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಇಂದು ನಾವು ಸರ್ಕಾರದ ಎಲ್ಲಾ ರೀತಿಯ ಯೋಜನೆಗಳ ಲಾಭ ಪಡೆಯಲು ಬೇಕಾಗುವ ಪ್ರಮುಖ ದಾಖಲೆಗಳಲ್ಲಿ ಜನನ ಮತ್ತು ಮರಣ ಪ್ರಮಾಣ ಪತ್ರಗಳು ತುಂಬಾ ಅವಶ್ಯಕ ಆಗಿವೆ.

Thank you for reading this post, don't forget to subscribe!

ಮಗುವಿನ ಶಾಲೆಗೆ ದಾಖಲಾತಿ ಮಾಡುವುದರಿಂದ ಹಿಡಿದು, ಆಸ್ತಿ ವರ್ಗಾವಣೆ ಅಂತಹ ಪ್ರಮುಖ ವಿಷಯಗಳಿಗೆ ಅತ್ಯವಶ್ಯಕವಾಗಿ ಬೇಕಾಗುವ ದಾಖಲೆಗಳೆಂದರೆ ಅವು ಜನನ ಮತ್ತು ಮರಣ ಪ್ರಮಾಣ ಪತ್ರ.

ಇದನ್ನೂ ಓದಿ: ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿ

ಇಂತಹ ಪ್ರಮುಖ ದಾಖಲಾತಿಗಳ ಕುರಿತ ರಾಜ್ಯ ಸರ್ಕಾರವು ಹೊಸ ನಿಯಮವನ್ನು ಜಾರಿ ಮಾಡಿದ್ದು, ಇದು ಜನ ಸಾಮಾನ್ಯರಿಗೆ ಶಾಕ್ ನೀಡಿದೆ.

ಹಾಗಾದರೆ ಯಾವುದು ಆ ನಿಯಮ,ಇದರಿಂದ ಜನಸಾಮಾನ್ಯರಿಗೆ ಹೇಗೆ ತೊಂದರೆ ಉಂಟು ಮಾಡಲಿದೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ.ತಪ್ಪದೇ ಕೊನೆಯವರೆಗೂ ಓದಿರಿ.

ಏನಿದು ರಾಜ್ಯ ಸರಕಾರದ ಹೊಸ ನಿಯಮ?

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ ಬರೋಬ್ಬರಿ ಹತ್ತು ಪಟ್ಟು ಏರಿಸಿದೆ.

ಹೌದು ಸ್ನೇಹಿತರೆ ಈ ಹಿಂದೆ ಮರಣ ಪ್ರಮಾಣ ಪತ್ರ 21 ದಿನಗಳ ಒಳಗಡೆ ಪಡೆದುಕೊಳ್ಳಲು ₹0 ಶುಲ್ಕ ಆಗಿತ್ತು.
21 ದಿನಗಳ ಮೇಲೆ 6 ತಿಂಗಳ ಒಳಗಡೆ ಪಡೆದುಕೊಳ್ಳುವವರಿಗೆ  2 ರುಪಾಯಿ ಇತ್ತು.
6 ತಿಂಗಳ ನಿಂದ 1 ವರ್ಷದ ಒಳಗೆ ಪಡೆದು ಕೊಳ್ಳಬೇಕೆನ್ನುವವರಿಗೆ ₹5 ರೂ ಶುಲ್ಕ ನಿಗದಿ ಪಡಿಸಲಾಗಿತ್ತು.

ಇದನ್ನೂ ಓದಿ: ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಆದರೆ ಇದೀಗ 2 ರುಪಾಯಿ 5 ರುಪಾಯಿ ಬದಲಾಗಿ  ₹50 ಮಾಡಲಾಗಿದೆ. ಇದು ಜನಸಾಮಾನ್ಯರ ಮೇಲೆ ತೀವ್ರ ಪರಿಣಮ ಬೀರಿದೆ.
 

ಅಲ್ಲದೆ ಕರ್ನಾಟಕ ಸರ್ಕಾರ ಜನನ, ಮರಣ ನೋಂದಣಿ ನಿಯಮಗಳು 2024 (ತಿದ್ದುಪಡಿ) ಅನ್ನು ಕೂಡ ತಿದ್ದುಪಡಿ ಮಾಡಲಾಗಿದೆ.

ಸಾರ್ವಜನಿಕರಿಗೆ ಜನನ ಪ್ರಮಾಣ ಪತ್ರವು ತಮ್ಮ ಮಕ್ಕಳ ಹೆಸರು ಬದಲಾವಣೆ ,ಹಾಗೂ ಜನ್ಮ ದಿನಾಂಕ ಬದಲಾವಣೆಗೆ ಜನನ ಪ್ರಮಾಣ ಪತ್ರ ತುಂಬಾ ಅವಶ್ಯಕತೆಯಾಗಿರುತ್ತದೆ.

ಇನ್ನು ಮರಣ ಪ್ರಮಾಣ ಪತ್ರವು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರೆ ಅಥವಾ ಅಪಘಾತ ಸಂಭವಿಸಿ ದಾರಿಯಲ್ಲಿ ಮರಣ ಹೊಂದಿದ್ದರೆ , ಆಸ್ತಿ ವರ್ಗಾವಣೆಗೆ, ವಂಶಾವಳಿ ಪಡೆದುಕೊಳ್ಳಲು ಬೇಕಾಗುತ್ತದೆ ‌.

ಇದಲ್ಲದೆ ಪ್ರಮಾಣಪತ್ರಗಳು ಹಲವು ಉದ್ದೇಶಕ್ಕೆ ಬೇಕಾಗುತ್ತವೆ. ಮಕ್ಕಳ ಜನನ ಪ್ರಮಾಣಪತ್ರವನ್ನು ಪೋಷಕರು ಶಾಲೆಗಳ ಪ್ರವೇಶಾತಿಗೆ ಸಲ್ಲಿಸಬೆಕಾಗುತ್ತದೆ.
ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆದುಕೊಳ್ಳಲು ಕೂಡ ಜನನ ಪ್ರಮಾಣ ಪತ್ರ ಸಲ್ಲಿಸಬೇಕಾಗುತ್ತದೆ.

ಮೊದಲು ಉಚಿತವಾಗಿದ್ದಾಗಲೇ ಜಡ ಹಿಡಿದಿರುವ ರಾಜ್ಯ ಸರಕಾರದ ಸರ್ಕಾರಿ ಕಚೇರಿಗೆ ಹೋಗಿ ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳಲು ನೂರಾರು ರೂಪಾಯಿ ತೆರಬೇಕಾಗುತ್ತಿತ್ತು.

ಇನ್ನು ಇದೀಗ ರಾಜ್ಯ ಸರ್ಕಾರವು ಜನನ ಮತ್ತು ಮರಣ ಪ್ರಮಾಣ ಪತ್ರದ ಬೆಲೆ ಏರಿಕೆ ಮಾಡಿರುವುದರಿಂದ ಜನ ಸಾಮಾನ್ಯರ ಜೇಬಿಗೆ ಮತ್ತಷ್ಟು ಕತ್ತರಿ ಬೀಳುವುದು ಗ್ಯಾರಂಟಿ.

ರಾಜ್ಯ ಸರ್ಕಾರವು ತನ್ನ ಗ್ಯಾರಂಟೀ ಯೋಜನೆಗಳಿಗೆ ಹಣ ಪೂರೈಕೆ ಮಾಡಲು ಇಂತಹ ದಾರಿಗಳನ್ನು ಹುಡುಕುತ್ತಿದೆ ಎಂದು ವಿಪಕ್ಷದವರು ಆರೋಪ ಮಾಡುತ್ತಿದ್ದಾರೆ.

ರಾಜಕೀಯ ಏನೇ ಇರಲಿ. ಆದರೆ ಜನಸಾಮಾನ್ಯರ ಪಾಲಿಗೆ ಸರಕಾರಿ ಕಚೇರಿಗಳು ಹಣ ವಸೂಲಿ ಮಾಡುವ ಕೇಂದ್ರಗಳಾಗುತ್ತಿವೆ ಎಂಬ ಕೂಗು ಕೇಳಿ ಬರುತ್ತಿರುವ ಇಂತಹ ಸಂದರ್ಭದಲ್ಲಿ ಬೆಲೆ ಏರಿಕೆಯು ಜನಸಾಮಾನ್ಯರ ಜೇಬಿನಿಂದ ಮತ್ತಷ್ಟು ಹಣ ವಸೂಲಿ ಮಾಡಲು ಸರಕಾರಿ ಕಚೇರಿಗಳಿಗೆ ಅಧಿಕೃತ ಪರವಾನಿಗೆ ನೀಡಿದಂತಾಗಿದೆ ಎಂಬ ಕೂಗು ಕೇಳಿಬರುತ್ತಿವೆ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago