ಹಲವರ ಬಳಿ ತಮ್ಮದೇ ಆದ ಒರಿಜಿನಲ್ ಪಹಣಿ ಪತ್ರ (ಉತಾರಿ) ಇರುವುದಿಲ್ಲ. ಕಾರಣಾಂತರಗಳಿಂದ ಅವರು ತಮ್ಮ ಪಹಣಿ ಪತ್ರವನ್ನು ಕಳೆದುಕೊಂಡಿರುತ್ತಾರೆ. ಅಂತಹ ರೈತರಿಗೆ ಇಲ್ಲೊಂದು ಭರ್ಜರಿ ಸಿಹಿ ಸುದ್ದಿ ಇದೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಇಂದು ನೀವು ಸರ್ಕಾರದ ಯಾವುದೇ ಯೋಜನೆಯ ಲಾಭ ಪಡೆಯಬೇಕಾದರೆ ಅದಕ್ಕೆ ನಿಮ್ಮ ಬಳಿ ನಿಮ್ಮ ಜಮೀನಿನ ಸ್ವಂತ ಪಹಣಿ ಪತ್ರ ಇರಬೇಕಾದುದು ಕಡ್ಡಾಯ.
Thank you for reading this post, don't forget to subscribe!ಅಂತೆಯೇ ಹಲವರ ಬಳಿ ತಮ್ಮದೇ ಆದ ಒರಿಜಿನಲ್ ಪಹಣಿ ಪತ್ರ (ಉತಾರಿ) ಇರುವುದಿಲ್ಲ. ಕಾರಣಾಂತರಗಳಿಂದ ಅವರು ತಮ್ಮ ಪಹಣಿ ಪತ್ರವನ್ನು ಕಳೆದುಕೊಂಡಿರುತ್ತಾರೆ. ಅಂತಹ ರೈತರಿಗೆ ಇಲ್ಲೊಂದು ಭರ್ಜರಿ ಸಿಹಿ ಸುದ್ದಿ ಇದೆ.
ಹೌದು ರಾಜ್ಯ ಸರಕಾರದ ಭೂಮಿ ತಂತ್ರಾಂಶದಲ್ಲಿ ಇಂತಹದ್ದೊಂದು ವಿನೂತನ ಫೀಚರ್ ನೀಡಲಾಗಿದೆ. ರೈತರು ಭೂಮಿ ತಂತ್ರಾಂಶದಲ್ಲಿ ಲಾಗಿನ್ ಆಗಿ ಕೇವಲ 10 ರೂಪಾಯಿ ಪೇ ಮಾಡಿ ತಮ್ಮ ಒರಿಜಿನಲ್ ಪಹಣಿ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದು.
ಭೂಮಿ ತಂತ್ರಾಂಶದಲ್ಲಿ ಲಾಗಿನ್ ಆಗಿ ಒರಿಜಿನಲ್ ಪಹಣಿ ಪತ್ರ ಡೌನ್ಲೋಡ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಹೆಸರು, ಮೊಬೈಲ್ ನಂಬರ್ ಹಾಗೂ ನಿಮ್ಮ ಮೇಲ್ ಐಡಿ ಹಾಕಿ ಲಾಗಿನ್ ಆಗಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ , ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ Go ಮೇಲೆ ಕ್ಲಿಕ್ ಮಾಡಿ.
ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು surnoc ಮೇಲೆ ಕ್ಲಿಕ್ ಮಾಡಿ ಸ್ಟಾರ್ ಅನ್ನು ಆಯ್ಕೆ ಮಾಡಿ, ನಂತರ ನಿಮ್ಮ ಜಮೀನಿನ ಹಿಸ್ಸಾ ನಂಬರ್ ಹಾಕಿ Fetch details ಮೇಲೆ ಕ್ಲಿಕ್ ಮಾಡಿ. ನಿಮಗೆ ನಿಮ್ಮ ಜಮೀನಿನ ವಿವರಗಳು ಕಾಣಿಸುತ್ತವೆ.
ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಒರಿಜಿನಲ್ ಪಹಣಿಪತ್ರವನ್ನು ಡೌನ್ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಬೇಕೆಂದರೆ pay and print I-RTC ಮೇಲೆ ಕ್ಲಿಕ್ ಮಾಡಿ. Net banking ಅಥವಾ ಕ್ರೆಡಿಟ್ ಕಾರ್ಡ್ ಇಲ್ಲವೇ ಡೆಬಿಟ್ ಕಾರ್ಡ್ ಮೂಲಕ 10 ರೂಪಾಯಿ ಹಣ ಪೇ ಮಾಡಿ ನಿಮ್ಮ ಮೊಬೈಲ್ ಗೆ ಡೌನ್ಲೋಡ್ ಮಾಡಿಕೊಳ್ಳಿ. ನಂತರ ನಿಮಗೆ ಬೇಕಾದಾಗ ಪ್ರಿಂಟ್ ತೆಗೆದುಕೊಳ್ಳಿ.
ಹಂತ -6) ಒಂದು ವೇಳೆ ನಿಮಗೆ ಪ್ರಿಂಟ್ ಬೇಡ ಕೇವಲ ನೀವು ನೋಡುತ್ತಿನಿ ಎಂದರೆ ಮೇಲೆ ತೋರಿಸಿರುವ ಚಿತ್ರದಲ್ಲಿ ತೋರಿಸಿದಂತೆ view RTC ಎಂದು ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ. ನಂತರ ಕೆಳಗೆ ತೋರಿಸಿದಂತೆ ನಿಮ್ಮ ಜಮೀನಿನ ಒರಿಜಿನಲ್ ಪಹಣಿ ಪತ್ರ ಡೌನ್ಲೋಡ್ ಆಗುತ್ತದೆ.
ಈ ರೀತಿಯಾಗಿ ನೀವು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಜಮೀನಿನ ಒರಿಜಿನಲ್ ಪಹಣಿ ಪತ್ರವನ್ನು ಸುಲಭವಾಗಿ ಡೌನ್ಲೋಡ್ ಮಾಡಿಕೊಳ್ಳಬಹುದು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode
"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…
ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…
BBK 12 ಫಿನಾಲೆಗೆ ಮುನ್ನವೇ ಬಿಗ್‌ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…
ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…
ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…
ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…