ಅಲ್ಲದೆ ಹಲವಾರು ಜಿಲ್ಲೆಗಳಲ್ಲಿ ಕಳೆದರೆಡು ದಿನಗಳಿಂದ ಮೋಡ ಕವಿದ ವಾತಾವರಣ ಏರ್ಪಟ್ಟಿದ್ದು ಮುಂದಿನ 3 ದಿನ ರಾಜ್ಯಾದ್ಯಂತ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಹಿಂಗಾರು ಮಳೆ ಮುಗಿದು ಇನ್ನೇನು ಚಳಿಗಾಲ ಆರಂಭವಾಗಿದೆ ಎನ್ನುವಷ್ಟರಲ್ಲಿ ಫೆಂಗಲ್ ಚಂಡಮಾರುತ (fengal cyclone) ಬೀಸುತ್ತಿದ್ದು ಇದರಿಂದ ರಾಜ್ಯದ ಹಲವು ಕಡೆ ತಂಪಾದ ವಾತಾವರಣ ನಿರ್ಮಾಣವಾಗಿದೆ.
Thank you for reading this post, don't forget to subscribe!ಅಲ್ಲದೆ ಹಲವಾರು ಜಿಲ್ಲೆಗಳಲ್ಲಿ ಕಳೆದರೆಡು ದಿನಗಳಿಂದ ಮೋಡ ಕವಿದ ವಾತಾವರಣ ಏರ್ಪಟ್ಟಿದ್ದು ಮುಂದಿನ 3 ದಿನ ರಾಜ್ಯಾದ್ಯಂತ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಾಗಾದರೆ ಯಾವ ಯಾವ ಜಿಲ್ಲೆಯಲ್ಲಿ ಮಳೆಯಾಗಲಿದೆ ಹಾಗೂ ಯಾವ ಯಾವ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ರಾಜ್ಯದಲ್ಲಿ ಬೀಸುತ್ತಿರುವ ಫೆಂಗಲ್ ಚಂಡಮಾರುತದ ಪರಿಣಾಮವಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಮೂನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಒಳನಾಡಿನ ಮೂರು ಜಿಲ್ಲೆಗಳಿಗೆ ಭಾನುವಾರ ಯೆಲ್ಲೋ ಅಲರ್ಟ್ ನೀಡಿದೆ.
ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೊಡಗು, ತುಮಕೂರು, ಚಾಮರಾಜನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಹವಾಮಾನ ಇಲಾಖೆ ವರದಿ ಮಾಡಿದೆ.
ಇನ್ನು ಮುಂದಿನ 3 ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು ಮೈಸೂರು ಹಾಗೂ ಕೊಡಗು ಜಿಲ್ಲೆಗೆ ಸೋಮವಾರ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಮಂಡ್ಯ, ರಾಮನಗರ, ಹಾಗೂ ಚಾಮರಾಜನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಮಂಗಳವಾವರವೂ ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಳಿದ ಜಿಲ್ಲೆಗಳಲ್ಲಿ ತಂಪಾದ ವಾತಾವರಣ ಇರಲಿದ್ದು ಅದರೊಂದಿಗೆ ಮೋಡ ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು ಜನಸಂಖ್ಯೆ ಕೃಷಿಯನ್ನೇ ಅವಲಂಬಿಸಿದೆ. ಇಂತಹ ಕೃಷಿಯ ಮೂಲ ಅನಿವಾರ್ಯತೆ ಎಂದರೆ ಅದು ಮಳೆ.
ಭಾರತದ ಕೃಷಿಯಂತೂ ಮುಂಗಾರು ಮಳೆಯನ್ನೇ ನೆಚ್ಚಿದ್ದು, ಇಡಿಯ ದೇಶದ ಕೃಷಿ ಚಟುವಟಿಕೆಗಳಲ್ಲ ಮಾನ್ಸೂನ್ ಮೇಲೆ ನಿರ್ಧರಿತವಾಗುತ್ತವೆ. ಇದು ಎಷ್ಟರ ಮಟ್ಟಿಗೆ ಎಂದರೆ ಬೆಳೆಯ ಇಳುವರಿ ಕೂಡ ಮಾನ್ಸೂನ್ ಮೇಲೆ ಅವಲಂಬಿತವಾಗಿದೆ.
ಇದನ್ನೂ ಓದಿ: ಪಿಎಂ ಕಿಸಾನ್: ಇಕೆವೈಸಿ ಆಗದೇ ಇರುವ ರೈತರ ಪಟ್ಟಿ ಬಿಡುಗಡೆ ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ
ಹೀಗಿರುವಾಗ ರೈತರಿಗೆ ಮಳೆಯ ಕುರಿತು ಮಾಹಿತಿ ಇರುವುದು ಅವಶ್ಯಕವಾಗುತ್ತದೆ. ಮಳೆ ನೋಡಿಕೊಂಡು ತಮ್ಮ ಬಿತ್ತನೆ ಕಾರ್ಯ ಅಥವಾ ಇನ್ನಿತರ ಕೃಷಿ ಚಟುವಟಿಕೆಗಳನ್ನು ನಡೆಸಲು ಅವರಿಗೆ ಸಹಾಯವಾಗುತ್ತದೆ.
ಈ ಕಾರಣದಿಂದಲೆ ಕೇಂದ್ರ ಸರ್ಕಾರವು ‘ಮೇಘದೂತ ‘ ಎಂಬ ಮೊಬೈಲ್ ಆ್ಯಪ್ ಅನ್ನು ಬಿಡುಗಡೆ ಮಾಡಿದ್ದು ಅದರ ಮೂಲಕ ನೀವು ನಿಮ್ಮ ಗ್ರಾಮದಲ್ಲಿ ಮಳೆಯಾಗುವ 5 ದಿನಗಳ ಮುಂಚೆಯೇ ಮಳೆಯ ಮಾಹಿತಿಯನ್ನು ಪಡೆಯಬಹುದು.
ಈ ಆ್ಯಪ್ ಅನ್ನು ಬಳಸುವುದು ಹೇಗೆ ? ಇದರಿಂದ ಮಳೆಯ ಮಾಹಿತಿಯನ್ನು ಪಡೆಯುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿದುಕೊಳ್ಳೋಣ. ತಪ್ಪದೇ ಈ ಅಂಕಣವನ್ನು ಕೊನೆಯವರೆಗೂ ಓದಿರಿ.
ಹಂತ -1) ಮೊದಲು ನೀವು ಕೆಳಗೆ ನೀಡಲಾಗಿರುವ ಮೇಘದೂತ ಆ್ಯಪ್ ನ ಅಧಿಕೃತ ಲಿಂಕ್ ಮೇಲೆ ಕ್ಲಿಕ್ ಮಾಡಿ, ಪ್ಲೇಸ್ಟೊರಿನಿಂದ ಇನ್ಸ್ಟಾಲ್ ಮಾಡಿಕೊಳ್ಳಿ.
https://play.google.com/store/apps/details?id=com.aas.meghdoot&hl=en_IN&gl=US
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಭಾಷೆಯನ್ನು ಕನ್ನಡ ಎಂದು ಆಯ್ಕೆ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಮುಂದೆ ಎಂದು ಕಾಣಿಸುವ ಬಟನ್ ಮೇಲೆ ಕ್ಲಿಕ್ ಮಾಡಿ.
ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಸೈನ್ ಅಫ್ ಮೇಲೆ ಕ್ಲಿಕ್ ಮಾಡಿ.
ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಎಲ್ಲಾ ವಿವರಗಳನ್ನು ಸಲ್ಲಿಸಿ.
ಹಂತ -6) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಮೊಬೈಲ್ ನಂಬರ್ ಮತ್ತು ಭಾಷೆಯನ್ನು ಹಾಕಿ ಲಾಗಿನ್ ಮೇಲೆ ಕ್ಲಿಕ್ ಮಾಡಿ.
ಹಂತ -7) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ ಅಲ್ಲಿ ನೀವು While Using the App ಮೇಲೆ ಕ್ಲಿಕ್ ಮಾಡಿ.
ಹಂತ -8) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನಿಮಗೆ ಕೆಳಗೆ ಮುನ್ಸೂಚನೆ ಎಂದು ಕಾಣುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.
ಹಂತ -9) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನಿಮಗೆ ನಿಮ್ಮ ಜಿಲ್ಲೆಯ ಸಂಪೂರ್ಣ ಹವಾಮಾನ ಮುನ್ಸೂಚನೆ ಸಿಗುತ್ತದೆ.
ಈ ರೀತಿಯಾಗಿ ನೀವು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಗ್ರಾಮದ ಸಂಪೂರ್ಣ ಹವಾಮಾನ ವರದಿಯನ್ನು ತಿಳಿದುಕೊಳ್ಳಬಹುದು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…
ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…