ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ನೀವು ಕೇಂದ್ರ ಸರ್ಕಾರ ಅಥವಾ ರಾಜ್ಯ ಸರಕಾರದ ಯಾವುದೇ ಯೋಜನೆಯ ಲಾಭ ಪಡೆಯಬೇಕೆಂದರೆ ನಿಮ್ಮ ಹೆಸರಿಗೆ FID ನಂಬರ್ ಅಂದರೆ ಫಾರ್ಮರ್ಸ್ ಐಡಿ ಇರುವುದು ಕಡ್ಡಾಯವಾಗಿದೆ. ಒಂದು ವೇಳೆ ನಿಮ್ಮ ಹೆಸರಿಗೆ FID ನಂಬರ್ ಇರದಿದ್ದರೆ ನೀವು ಸರಕಾರದ ಹಲವು ಯೋಜನೆಗಳಿಂದ ವಂಚಿತರಾಗಬೇಕಾಗುತ್ತದೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ನೀವು ಕೇಂದ್ರ ಸರ್ಕಾರ ಅಥವಾ ರಾಜ್ಯ ಸರಕಾರದ ಯಾವುದೇ ಯೋಜನೆಯ ಲಾಭ ಪಡೆಯಬೇಕೆಂದರೆ ನಿಮ್ಮ ಹೆಸರಿಗೆ FID ನಂಬರ್ ಅಂದರೆ ಫಾರ್ಮರ್ಸ್ ಐಡಿ ಇರುವುದು ಕಡ್ಡಾಯವಾಗಿದೆ. ಒಂದು ವೇಳೆ ನಿಮ್ಮ ಹೆಸರಿಗೆ FID ನಂಬರ್ ಇರದಿದ್ದರೆ ನೀವು ಸರಕಾರದ ಹಲವು ಯೋಜನೆಗಳಿಂದ ವಂಚಿತರಾಗಬೇಕಾಗುತ್ತದೆ.
Thank you for reading this post, don't forget to subscribe!ಹೌದು ರೈತ ಬಾಂಧವರೇ,ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯಿಂದ ಹಿಡಿದು ರಾಜ್ಯ ಸರ್ಕಾರದ ಬೆಳೆ ವಿಮೆ, ಬೆಳೆ ಪರಿಹಾರ ಹಣ ಹೀಗೆ ಸರ್ಕಾರದ ಯಾವುದೇ ಯೋಜನೆಯ ಲಾಭ ಪಡೆಯಲು ನಿಮ್ಮ ಬಳಿ FID ನಂಬರ್ ಅವಶ್ಯಕವಾಗಿ ಇರಬೇಕು. ಅಲ್ಲದೆ ಬಿತ್ತನೆ ಬೀಜದಿಂದ ಹಿಡಿದು, ಇನ್ನಿತರ ಕೃಷಿ ಚಟುವಟಿಕೆಗಳಿಗೆ ಬೇಕಾಗುವ ಯಾವುದೇ ಉಪಕರಣಗಳ ಮೇಲೆ ಸಬ್ಸಿಡಿ ಪಡೆಯಲು ಕೂಡ ನಿಮ್ಮದೇ ಆದ ಒಂದು FID ನಂಬರ್ ಇರಲೇಬೇಕು.
ಹಾಗಾದರೆ ನಿಮ್ಮ ಮೊಬೈಲ್ ನಲ್ಲಿ ಮನೆಯಲ್ಲಿಯೇ ಕುಳಿತು ನಿಮ್ಮ ಹೆಸರಿಗೆ FID ನಂಬರ್ ಇದೆಯಾ ಇಲ್ಲವಾ ಎಂಬುದನ್ನು ಇವತ್ತಿನ ಈ ಅಂಕಣದಲ್ಲಿ ತಿಳಿಯೋಣ. ಒಂದು ವೇಳೆ ನಿಮ್ಮ ಹೆಸರಿಗೆ FID ನಂಬರ್ ಇರದಿದ್ದರೆ ಹೇಗೆ ಮಾಡಿಸಬೇಕು ಮತ್ತು ಯಾವ ಯಾವ ದಾಖಲೆಗಳು ಬೇಕಾಗುತ್ತವೆ ಎಂಬುದನ್ನು ತಿಳಿಸುತ್ತೇವೆ. ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ಹಂತ -1) ರೈತರೇ ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://fruitspmk.karnataka.gov.in/MISReport/GetDetailsByAadhaar.aspx
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ 12 ಸಂಖ್ಯೆಯ ಆಧಾರ್ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಒಂದು ಹೊಸ ಪೇಜ್ ತೆರೆದುಕೊಳ್ಳುತ್ತದೆ. ಅದರಲ್ಲಿ ನಿಮ್ಮ ಹೆಸರಿಗೆ FID ನಂಬರ್ ಇದ್ದರೆ ಅಲ್ಲಿ ಕಾಣಿಸುತ್ತದೆ. ಅದರ ಜೊತೆಗೆ ನಿಮ್ಮ ಪಿಎಂ ಕಿಸಾನ್ ಐಡಿ ನಂಬರ್ ಕೂಡ ಕಾಣುತ್ತದೆ ಮತ್ತು ಯಾವ ಸರ್ವೆ ನಂಬರಿಗೆ ನಿಮ್ಮ FID ನಂಬರ್ ಲಿಂಕ್ ಆಗಿದೆ ಎಂಬ ಮಾಹಿತಿ ಸಿಗುತ್ತದೆ.
ವಿಶೇಷ ಸೂಚನೆ: ತಾಂತ್ರಿಕ ಕಾರಣದಿಂದ ಮೇಲಿನ ಲಿಂಕ್ ಓಪನ್ ಆಗುತ್ತಿಲ್ಲ. ದಯವಿಟ್ಟು ಸ್ವಲ್ಪ ಸಮಯ ಬಿಟ್ಟು ಪ್ರಯತ್ನಿಸಿ.
ರೈತ ಮಿತ್ರರೇ ಈಗಾಗಲೇ ನಿಮಗೆ ಮೇಲೆ ತಿಳಿಸಿದಂತೆ ಸರ್ಕಾರದ ಯಾವುದೇ ಕಾರ್ಯಕ್ರಮವಾಗಲಿ ಅಥವಾ ಯೋಜನೆಯಾಗಲಿ ಅಥವಾ ಸಬ್ಸಿಡಿಯಾಗಲಿ , ಅದರ ಪ್ರಯೋಜನ ಪಡೆಯಲು ನಿಮ್ಮ ಬಳಿ ನಿಮ್ಮ ಸ್ವಂತ FID ನಂಬರ್ ಇರುವುದು ಅವಶ್ಯಕ. ಹಾಗಾಗಿ ಒಂದು ವೇಳೆ ನಿಮ್ಮ ಹೆಸರಿಗೆ FID ನಂಬರ್ ರಚನೆಯಾಗದೆ ಇದ್ದರೆ, ನೀವು ಈ ಕೂಡಲೇ ನಿಮ್ಮ ಸಮೀಪದ ಗ್ರಾಮ್ ಒನ್ ಅಥವಾ ಸಾಮಾನ್ಯ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಕೆಳಗೆ ನೀಡಲಾಗಿರುವ ದಾಖಲೆಗಳನ್ನು ಕೊಟ್ಟು ಅರ್ಜಿ ಸಲ್ಲಿಸಿ.
ಈ ಮೇಲಿನ ದಾಖಲೆಗಳನ್ನು ನೀಡಿ ನೀವು ನಿಮ್ಮ ಹತ್ತಿರದ ಗ್ರಾಮ ಒನ್ ಅಥವಾ ಸಾಮಾನ್ಯ ಸೇವಾ ಕೇಂದ್ರದಲ್ಲಿ ನಿಮ್ಮ ಸ್ವಂತ FID ನಂಬರ್ ರಚನೆ ಮಾಡಿಕೊಳ್ಳಿ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t
ಭುವನೇಶ್ವರ್ ಕುಮಾರ್ ಅವರ ಕಂಬ್ಯಾಕ್‌ಗೆ ‘ಧುರಂಧರ್’ ಖ್ಯಾತಿಯ ಅಕ್ಷಯ್ ಖನ್ನಾ ಹೋಲಿಕೆ ಮಾಡಲಾಗಿದ್ದು, ರೋಹಿತ್ ಶರ್ಮಾ ಅವರ ಹೃದಯಸ್ಪರ್ಶಿ ಸಂದೇಶ…
ಪಿಎಂ ಕಿಸಾನ್ ಯೋಜನೆಯ 24ನೇ ಕಂತಿನ ಹಣ ಅಕ್ಟೋಬರ್ 30ರಂದು ಬಿಡುಗಡೆಯಾಗಲಿದೆಯೇ? ರೈತರ ಖಾತೆಗೆ ₹2,000 ಜಮೆಯಾಗುವ ಮಾಹಿತಿ, ಪಿಎಂ…
ಕರ್ನಾಟಕದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಮುನ್ಸೂಚನೆ,…
ಕರ್ನಾಟಕದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣದ ಕುರಿತು ಮಹತ್ವದ ಮಾಹಿತಿ ಇಲ್ಲಿದೆ. ಹಣ ಬಿಡುಗಡೆ ಆಗಿದೆಯೇ, ನಿಮ್ಮ…
ಅಕ್ಟೋಬರ್ 15ರಿಂದ ಕರ್ನಾಟಕದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.…
ನಿಮ್ಮ ಬೆಳೆ ವಿಮೆ ಹಣ ಇನ್ನೂ ಜಮೆಯಾಗಿಲ್ಲವೇ? ಬೆಳೆ ವಿಮೆ ಪಡೆಯಲು ರೈತರು ಯಾವ ಕ್ರಮಗಳನ್ನು ಅನುಸರಿಸಬೇಕು, ಅರ್ಜಿಯ ಸ್ಥಿತಿಯನ್ನು…