Categories: information

ರೈತರಿಗೆ ಗುಡ್ ನ್ಯೂಸ್ ನಿಮ್ಮ ಜಮೀನಿನ ಇ ಸ್ಕೇಚ್ ಮೊಬೈಲ್ ನಲ್ಲಿ ಹೀಗೆ ಪಡೆಯಿರಿ. ಇಲ್ಲಿದೆ ಸಂಪೂರ್ಣ ಮಾಹಿತಿ.

ರೈತರಿಗೆ ಮತ್ತೊಂದು ಗುಡ್ ನ್ಯೂಸ್! ಈಗ ನಿಮ್ಮ ಜಮೀನಿನ ಇ-ಸ್ಕೇಚ್ (E-Sketch) ಅನ್ನು ಕಚೇರಿ ಸುತ್ತಾಡದೇ, ನೇರವಾಗಿ ಮೊಬೈಲ್ ಮೂಲಕವೇ ಪಡೆಯಬಹುದು. ಭೂಮಿ ದಾಖಲೆಗಳಿಗೆ ಸಂಬಂಧಿಸಿದ ಈ ಡಿಜಿಟಲ್ ಸೌಲಭ್ಯದಿಂದ ಜಮೀನಿನ ಗಡಿ, ಅಳತೆ ಹಾಗೂ ವಿವರಗಳನ್ನು ಸುಲಭವಾಗಿ ಪರಿಶೀಲಿಸಬಹುದು. ಕೆಲವೇ ನಿಮಿಷಗಳಲ್ಲಿ ಆನ್‌ಲೈನ್ ಮೂಲಕ ಇ-ಸ್ಕೇಚ್ ಡೌನ್‌ಲೋಡ್ ಮಾಡುವ ವಿಧಾನ, ಅಗತ್ಯ ದಾಖಲೆಗಳು ಹಾಗೂ ಉಪಯೋಗದ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

Spread the love

ರೈತಬಾಂಧವರಿಗೆ ಗುಡ್ ನ್ಯೂಸ್ ಇಲ್ಲಿದೆ. ರೈತರು ಈಗ ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ತಮ್ಮ ಜಮೀನಿನ ಇ ಸ್ಕೆಚ್ ನ್ನು ಪಡೆದುಕೊಳ್ಳಬಹುದು. ಹೌದು, ರೈತ ಮಿತ್ರರೇ ಕೇವಲ ಒಂದೇ ನಿಮಿಷದಲ್ಲಿ ನಿಮ್ಮ ಜಮೀನಿನ ಸರ್ವೆ ನಂಬರ್ ನಮೂದಿಸಿ ಇ ಸ್ಕೆಚ್ ಹಾಗೂ ಜಮೀನಿನ ಸ್ಕೆಚ್ ಮ್ಯಾಪನ್ನು ಪಡೆಯಬಹುದು. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ನೋಡಿ ಮಾಹಿತಿ.

Thank you for reading this post, don't forget to subscribe!

ಜಮೀನಿನ ಇ ಸ್ಕೆಚ್ ಪಡೆಯುವುದು ಹೇಗೆ?

ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಜಮೀನಿನ ಇ ಸ್ಕೆಚ್ ಪಡೆಯಲು ಈ

https://www.landrecords.karnataka.gov.in/service2/RTC.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ Bhoomi Online Land Records View ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮಗೆ current Year, Old year, Mr, Mutation status, Khata Extract, Survey Document, Akarband, RTCwith Skecth, E chawadi  ಹಾಗೂ Survey Sketch ಕಾಣಿಸುತ್ತದೆ. ಅಲ್ಲಿ ನೀವು Survey Sketch ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಇನ್ನೊಂದು ಪೇಜ್ ತೆರೆದುಕೊಳ್ಳತ್ತದೆ. ಡಿಜಿಟೈಸ್ಡ್ ಸಮೀಕ್ಷೆ ನಕ್ಷೆ  ಪೇಜ್ ಓಪನ್ ಆಗುತ್ತದೆ. ಅಲ್ಲಿ  ನಿಮಗೆ ಕೆಲವು ಆಯ್ಕೆಗಳು ಕಾಣಿಸುತ್ತವೆ. ಅಲ್ಲಿ  ಗ್ರಾಮ ಹುಡುಕಾಟ Village Search ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಊರನ್ನು ಟೈಪ್ ಮಾಡಬೇಕು. ಆಗ ಅದರ ಕೆಳಗಡೆ ನಿಮಗೆ ನಿಮ್ಮ ಊರು, ಹೋಬಳಿ, ತಾಲೂಕು ಹಾಗೂ ಜಿಲ್ಲೆ ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಜಮೀನಿನ ಸರ್ವೆ ನಂಬರ್ ನಮೂದಿಸಬೇಕು. ನಂತರ ಸರ್ನಾಕ್  ನಲ್ಲಿ ಸ್ಟಾರ್ ಆಯ್ಕೆ ಮಾಡಿಕೊಳ್ಳಬೇಕು.

ಇದಾದ ನಂತರ ಹಿಸ್ಸಾ ನಂಬರ್ ನಮೂದಿಸಬೇಕು. ನಂತರ ಹುಡುಕು Search ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಮೂದಿಸಿದ ಸರ್ವೆ ನಂಬರಿನಲ್ಲಿ ಯಾರ ಯಾರ ಹೆಸರಿದೆ ಅವರ ಹೆಸರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣಿಸುತ್ತದೆ. ಅದರ ಕೆಳಗಡೆ ನಿಮಗೆ ಜಮೀನಿನ ಸ್ಕೆಚ್ ಕಾಣಿಸುತ್ತದೆ. ನಿಮ್ಮ ಜಮೀನಿನ ಆಕಾರ ಕಾಣಿಸುತ್ತದೆ. ಇದನ್ನು ನೀವು ಡೌನ್ಲೋಡ್ ಮಾಡಿಕೊಳ್ಳಬಹುದು.

ಜಮೀನಿನ ಸ್ಕೆಚ್ ಮ್ಯಾಪ್ ಪಡೆಯುವುದು ಹೇಗೆ?

ನಿಮ್ಮ ಜಮೀನನ ಸ್ಕೆಚ್ ಮ್ಯಾಪ್ ಬೇಕಾದರೆ ನೀವು ಅಲ್ಲಿ ಕಾಣುವ View Sketch on Map ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಹೊಲ ಅಂದರೆ ಜಮೀನು ಕಾಣಿಸುತ್ತದೆ. ಜಮೀನಿನ ಆಕಾರ ಸಂಪೂರ್ಣವಾಗಿ ಕಲರ್ ನಲ್ಲಿ ಕಾಣಿಸುತ್ತದೆ. ಇದನ್ನು ನೀವು ಡೌನ್ಲೋಡ್ ಮಾಡಿಟ್ಟುಕೊಳ್ಳಬೇಕು. ಇದರಿಂದ ನಿಮ್ಮ ಜಮೀನು ಸ್ಪಷ್ಟವಾಗಿ ಕಾಣಿಸುತ್ತದೆ. ಒಮ್ಮೆ ಇದನ್ನು ಚೆಕ್ ಮಾಡಿ ನೋಡಿ ಖುಷಿ ಎನಿಸುತ್ತದೆ.

ಇದೇ ರೀತಿ ನಿಮಗೆ ಜಮೀನಿಗೆ ಸಂಬಂಧಿಸಿದ ಮಾಹಿತಿಗಳನ್ನು ನೀವು ನಿಮ್ಮ ಬಳಿಯಿರುವ ಮೊಬೈಲ್ ನಲ್ಲೇ ಪಡೆದುಕೊಳ್ಳಬಹುದು. ಸರ್ಕಾರವು ಸಹ ರೈತರಿಗೆ ಸುಲಭವಾಗಿ ಜಮೀನಿನ ಮಾಹಿತಿ ಸಿಗಲೆಂದು ಆನ್ಲೈನ್ ವ್ಯವಸ್ಥೆಯನ್ನು ಮಾಡಿಕೊಟ್ಟಿದೆ. ಇತ್ತೀಚೆಗೆ ರೈತರು ಕೇವಲ ಮೊಬೈಲ್ ಬಳಸುವ ಜ್ಞಾನವಿದ್ದರೆ ಸಾಕು ಮನೆಯಲ್ಲಿಯೇ ಕುಳಿತು ಯಾರ ಸಹಾಯವೂ ಇಲ್ಲದೆ ತಮ್ಮ ಜಮೀನಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನು ಕ್ಷಣಾರ್ಧದಲ್ಲಿ ಪಡೆದುಕೊಳ್ಳಬಹುದು.

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇https://chat.whatsapp.com/FM1qVgdNtJm5m1M9SL0BHc?mode=ac_t

Recent Posts

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago