ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,
Thank you for reading this post, don't forget to subscribe!ರಾಜ್ಯದ ಲಕ್ಷಾಂತರ ಮಹಿಳೆಯರ ಖಾತೆಗೆ 23ನೇ ಕಂತಿನ ಹಣ ಇಂದು ಬಿಡುಗಡೆಯಾಗಿದೆ. ಹೌದು, ಈಗಾಗಲೇ ಹಣ ಬಿಡುಗಡೆಯಾಗಿದ್ದರಿಂದ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳ ನಿಮ್ಮ ಖಾತೆಗೆ ಹಣ ಜಮೆಯಾಗಿದೆಯೇ ಚೆಕ್ ಮಾಡಿ ನೋಡಿ,
ಅಕ್ಟೋಬರ್ 20 ರಂದೇ ಗೃಹಲಕ್ಷ್ಮೀ ಯೋಜನೆಯ 22 ನೇ ಕಂತಿನ ಹಣ ಬಿಡುಗಡೆ ಮಾಡಿದ್ದರಿಂದ ಬಹುತೇಕ ಎಲ್ಲಾ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲಾಗಿದೆ. ಆದರೆ ಇನ್ನೂ ಕೆಲವರಿಗೆ ಹಣ ಜಮೆಯಾಗಿಲ್ಲ. ಯಾರಿಗೆ ಜಮೆಯಾಗಿಲ್ಲವೋ ಅಂತಹವರ ಖಾತೆಗೆ ಇನ್ನೆರಡು ದಿನಗಳಲ್ಲಿ ಹಣ ಜಮೆಯಾಗಲಿದೆ.
ಬಾಕಿ ಹಣ ಪಡೆಯಲು ಮಹಿಳೆಯರು ಮಾಡಬೇಕಾದ ಕೆಲಸಗಳು
ಬ್ಯಾಂಕ್ ಖಾತೆ ಚಾಲ್ತಿಯಲ್ಲಿಡಿ
ನಿಮ್ಮ ಬ್ಯಾಂಕ್ ಖಾತೆ ಸಕ್ರಿಯವಾಗಿರಬೇಕು ಮತ್ತು ಆಧಾರ್ ಕಾರ್ಡ್ ಖಾತೆಗೆ ಲಿಂಕ್ ಆಗಿರಬೇಕು.
ಇಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಿ ಮತ್ತು ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡಿಸಿಕೊಳ್ಳಿ. ಇದು ಡಿಬಿಡಿ ಮೂಲಕ ಹಣ ನಿಮ್ಮ ಖಾತೆಗೆ ನೇರವಾಗಿ ಜಮಾ ಆಗಲು ಸಹಾಯ ಮಾಡುತ್ತದೆ
ರೇಷನ್ ಕಾರ್ಡ್ ಮತ್ತು ಇ-ಕೆವೈಸಿ ಅಪ್ಡೇಟ್ ಮಾಡಿಸಿ
ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ರೇಷನ್ ಕಾರ್ಡ್ಗಳಲ್ಲಿ ಮಹಿಳೆಯೇ ಕುಟುಂಬದ ಮುಖ್ಯಸ್ಥರಾಗಿರಬೇಕು.
ಆಧಾರ್ ಮತ್ತು ರೇಷನ್ ಕಾರ್ಡ್ ಲಿಂಕ್ ಆಗಿರುವುದನ್ನು ಖಚಿತಪಡಿಸಿಕೊಳ್ಳಿ.
ರೇಷನ್ ಕಾರ್ಡ್ ಇ-ಕೆವೈಸಿ ಆಗಿಲ್ಲದಿದ್ದರೆ, ನಿಮ್ಮ ಹತ್ತಿರದ ಗ್ರಾಮ ಒನ್ / ಕರ್ನಾಟಕ ಒನ್ ಕೇಂದ್ರಗಳಲ್ಲಿ ಅಪ್ಡೇಟ್ ಮಾಡಿಸಬಹುದು.
Gruhalakshmi amount today released ಗೃಹಲಕ್ಷ್ಮೀ ಯೋಜನೆಯ ಸ್ಟೇಟಸ್ ಹೀಗೆ ಚೆಕ್ ಮಾಡಿ
ಗೃಹಲಕ್ಷ್ಮೀ ಯೋಜನೆಯ ಸೇರಿದಂತೆ ವಿವಿಧ ಯೋಜನೆಗಳ ಸೌಲಭ್ಯಗಳು ನಿಮಗೆ ಸಿಗುತ್ತಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://play.google.com/store/apps/details?id=com.dbtkarnataka&hl=en_IN&pli=1
ಲಿಂಕ್ ಮೇಲೆ ಕ್ಲಿಕ್ ಮಾಡಿ. ನಂತರ ನಿಮಗೆ ಡಿಬಿಟಿ ಯಾಪ್ ಓಪನ್ ಆಗುತ್ತದೆ. ಅಲ್ಲಿ ನೀವು install ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಆಧಾರ್ ಸಂಖ್ಯೆ ಮತ್ತು ಮೊಬೈಲ್ ನಂಬರ್ ನಮೂದಿಸಬೇಕು. ಇದಾದ ನಂತರ ನೀವು ನೀಡಿದ ಮೊಬೈಲ್ ನಂಬರಿಗೆ ಓಟಿಪಿ ಬರುತ್ತದೆ. ಆ ಓಟಿಪಿಯನ್ನು ನಮೂದಿಸಿ ಲಾಗಿನ್ ಆಗಬೇಕು. ನಂತರ ನೀವು ಸರ್ಕಾರದ ವಿವಿಧ ಯೋಜನೆಗಳಿಂದ ನಿಮಗೆ ಹಣ ಜಮೆಯಾಗಿರುವ ಸ್ಥಿತಿಯನ್ನು (ಸ್ಟೇಟಸನ್ನು) ಚೆಕ್ ಮಾಡಬಹುದು.
Gruhalakshmi amount today released ಗೃಹಲಕ್ಷ್ಮಿ ಯೋಜನೆ ಅರ್ಜಿ ಪರಿಶೀಲಿಸಿ
ನಿಮ್ಮ ಯೋಜನೆ ಅರ್ಜಿಯು ಸಕ್ರಿಯವಾಗಿದೆಯೇ ಎಂಬುದನ್ನು ಪರಿಶೀಲಿಸಿ. 6 ತಿಂಗಳಿಗಿಂತ ಹೆಚ್ಚು ಕಾಲ ಹಣ ಬಾರದಿದ್ದರೆ, ನಿಮ್ಮ ಹತ್ತಿರದ ಕೇಂದ್ರಗಳಲ್ಲಿ ಇಕೆವೈಸಿ ಮರುಪೂರೈಸಿ.
ಆಧಾರ್ ಕಾರ್ಡ್ ನವೀಕರಿಸಿ
ಹಲವಾರು ಮಹಿಳೆಯರ ಆಧಾರ್ ವಿವರಗಳಲ್ಲಿ ಹಳೆಯ ವಿಳಾಸ ಅಥವಾ ತಪ್ಪು ಮಾಹಿತಿಗಳಿವೆ. ಇವು ಆಃಖಿ ಟ್ರಾನ್ಸ್ಫರ್ ತಡೆಗಟ್ಟಬಹುದು. ಆದ್ದರಿಂದ ನಿಮ್ಮ ಹತ್ತಿರದ ಆಧಾರ್ ಸೇವಾ ಕೇಂದ್ರದಲ್ಲಿ ನವೀಕರಣ ಮಾಡಿಸಿ.
ಹೆಚ್ಚಿನ ಮಾಹಿತಿ ಪಡೆಯಲು ಎಲ್ಲಿ ಸಂಪರ್ಕಿಸಬೇಕು?
ಯೋಜನೆಗೆ ಸಂಬಂಧಿಸಿದ ಯಾವುದೇ ಸಂದೇಹಗಳು ಅಥವಾ ಬಾಕಿ ಹಣದ ಸ್ಥಿತಿಯನ್ನು ತಿಳಿದುಕೊಳ್ಳಲು ನೀವು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿ ಅಥವಾ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಲು ಕೋರಲಾಗಿದೆ.
ಓದುಗರಲ್ಲಿ ವಿನಂತಿ,
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode=ac_t