ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ನಮ್ಮ ಸಂವಿಧಾನದ 73 ನೇ ತಿದ್ದುಪಡಿಯ ಪ್ರಕಾರ ನಮ್ಮ ದೇಶದಲ್ಲಿ ಪಂಚಾಯತಿಗಳು ಅಧಿಕೃತವಾಗಿ ಜಾರಿಗೆ ಬಂದವು. ಇವು ಗ್ರಾಮೀಣ ಭಾಗದ ಸರ್ಕಾರ ಎಂದೇ ಜನಜನಿತವಾಗಿವೆ. ಕಾರಣ ಗ್ರಾಮೀಣ ಭಾರತದ ಅಭಿವೃದ್ಧಿಯ ಜವಾಬ್ದಾರಿ ಈ ಪಂಚಾಯತಿಗಳ ಮೇಲೆಯೇ ನಿಂತಿದೆ.
ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ನಮ್ಮ ಸಂವಿಧಾನದ 73 ನೇ ತಿದ್ದುಪಡಿಯ ಪ್ರಕಾರ ನಮ್ಮ ದೇಶದಲ್ಲಿ ಪಂಚಾಯತಿಗಳು ಅಧಿಕೃತವಾಗಿ ಜಾರಿಗೆ ಬಂದವು. ಇವು ಗ್ರಾಮೀಣ ಭಾಗದ ಸರ್ಕಾರ ಎಂದೇ ಜನಜನಿತವಾಗಿವೆ. ಕಾರಣ ಗ್ರಾಮೀಣ ಭಾರತದ ಅಭಿವೃದ್ಧಿಯ ಜವಾಬ್ದಾರಿ ಈ ಪಂಚಾಯತಿಗಳ ಮೇಲೆಯೇ ನಿಂತಿದೆ.
Thank you for reading this post, don't forget to subscribe!ಇದಕ್ಕೆ ಪ್ರಮುಖ ಕಾರಣ ಎಂದರೆ ಸರ್ಕಾರದ ಬಳಿ ಸಾಕಷ್ಟು ಸಂಪನ್ಮೂಲದ ಕೊರತೆ. ಅದು ಸಿಬ್ಬಂದಿ ಸಮಸ್ಯೆ ಆಗಿರಬಹುದು ಅಥವಾ ಬಜೆಟ್ ಸಮಸ್ಯೆ ಆಗಿರಬಹುದು. ಇದರ ಕೆಟ್ಟ ಪರಿಣಾಮವನ್ನು ನಾಗರಿಕರು ಅನುಭವಿಸಬೇಕಾಗುತ್ತದೆ. ಇದರಿಂದ ಸರ್ಕಾರ ಅಂದುಕೊಂಡಂತೆ ಜನ ಕಲ್ಯಾಣ ಯೋಜನೆಗಳು ಯಶಸ್ವಿ ಆಗುವುದಿಲ್ಲ.
ಗ್ರಾಮ ಪಂಚಾಯತಿ ಜಾರಿಗೆ ಬಂದ ಮೇಲೆ ಹಳ್ಳಿಗಳಲ್ಲಿ ಮೂಲಭೂತ ಸೌಕರ್ಯಗಳಾದ ರಸ್ತೆ,ಕುಡಿಯುವ ನೀರು,ಶೌಚಾಲಯ, ವಿದ್ಯುತ್ ಮುಂತಾದವುಗಳ ಅಭಿವೃದ್ಧಿಯಾಗಿವೆ. ಅಲ್ಲದೇ ಸರ್ಕಾರಗಳ ಜನ ಕಲ್ಯಾಣ ಯೋಜನೆಗಳ ಅನುಷ್ಠಾನದ ಜವಾಬ್ದಾರಿಯನ್ನು ಅವು ಸಮರ್ಥವಾಗಿ ನಿಭಾಯಿಸುತ್ತಿವೆ.
ಇದೀಗ ನಿಮ್ಮ ಗ್ರಾಮ ಪಂಚಾಯತಿಯಲ್ಲಿ ನಡೆಯುವ ಎಲ್ಲಾ ಜನ ಕಲ್ಯಾಣ ಯೋಜನೆಗಳ ಅನುಷ್ಠಾನದ ಬಗ್ಗೆ ಮಾಹಿತಿ ತಿಳಿಯಲು ರಾಜ್ಯ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಡಿಯಲ್ಲಿ ಪಂಚತಂತ್ರ ಎಂಬ ಪ್ರತ್ಯೇಕ ವೇದಿಕೆಯನ್ನು ಕಲ್ಪಿಸಿದ್ದು ಅಲ್ಲಿ ನೀವು ನಿಮ್ಮ ಗ್ರಾಮ ಪಂಚಾಯತಿ ಅಡಿಯಲ್ಲಿ ಇಲ್ಲಿಯವರೆಗೆ ಯಾವ ಯಾವ ಸೇವೆಗಳನ್ನು ನೀಡಲಾಗಿದೆ ಮತ್ತು ಗ್ರಾಮ ಪಂಚಾಯತಿ ಸದಸ್ಯರು ಯಾರು,ಅಧ್ಯಕ್ಷರು ಯಾರು ಹಾಗೂ ಅವರ ಸಂಪರ್ಕದ ವಿವರಗಳು ಎಲ್ಲಾ ಸಿಗುತ್ತವೆ.
ಹಾಗಾದರೆ ನಿಮ್ಮ ಗ್ರಾಮ ಪಂಚಾಯತಿಯ ಎಲ್ಲಾ ಕೆಲಸಗಳ ಮಾಹಿತಿ ಮಡೆಯುವುದು ಹೇಗೆ ಎಂಬುದನ್ನು ಇವತ್ತಿನ ಅಂಕಣದಲ್ಲಿ ತಿಳಿಸುತ್ತೇವೆ.ತಪ್ಪದೇ ಕೊನೆಯವರೆಗೂ ಓದಿರಿ.
ಹಂತ -1) ಮೊಟ್ಟ ಮೊದಲು ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://panchatantra.karnataka.gov.in/USER_MODULE/userLogin/loadPanchamitra
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು ಹಾಗೂ ನಿಮ್ಮ ಪಂಚಾಯತಿಯ ಹೆಸರನ್ನು ನಮೂದಿಸಿ,ಕೆಳಗೆ ನೀಡಲಾಗಿರುವ ಹುಡುಕು ಬಟನ್ ಮೇಲೆ ಕ್ಲಿಕ್ ಮಾಡಿ
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನಿಮಗೆ ನಿಮ್ಮ ಗ್ರಾಮ ಪಂಚಾಯತಿಯ ವಿವರ ಮತ್ತು ಸಂಪರ್ಕ ಸಂಖ್ಯೆ ಸಿಗುತ್ತದೆ.
ಹಂತ – 4) ಅದೇ ರೀತಿಯಾಗಿ ನೀವು ಕೆಳಗೆ scroll ಮಾಡಿದಂತೆ ನಿಮ್ಮ ಗ್ರಾಮ ಪಂಚಾಯತಿಯ ಸದಸ್ಯರ ಯಾರು ಅವರ ಸಂಪರ್ಕ ಸಂಖ್ಯೆ ಹಾಗೂ ಇಲ್ಲಿಯವರೆಗೆ ಎಷ್ಟು ಸಭೆ ಮಾಡಲಾಗಿದೆ ಮತ್ತು ಯಾವ ಯಾವ ಯೋಜನೆಗಳು ಜಾರಿಯಲ್ಲಿವೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಸಿಗುತ್ತದೆ.
ಹಂತ -5) ಹಾಗೆಯೇ ನಿಮಗೆ ಕೆಳಗೆ ತೋರಿಸಿದಂತೆ ನಿಮ್ಮ ಗ್ರಾಮ ಪಂಚಾಯ್ತಿಯ ವ್ಯಾಪ್ತಿ ಎಷ್ಟಿದೆ ಎಂಬ ಮ್ಯಾಪ್ ಕೂಡ ನಿಮಗೆ ಸಿಗುತ್ತದೆ.
ಈ ರೀತಿಯಾಗಿ ನೀವು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲೇ ನಿಮ್ಮ ಗ್ರಾಮ ಪಂಚಾಯತಿಯ ಸಂಪೂರ್ಣ ಚಟುವಟಿಕೆಗಳ ಮಾಹಿತಿಯನ್ನು ಸುಲಭವಾಗಿ ಪಡೆಯಿರಿ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಈ ವರ್ಷ ಮುಂಗಾರು ಅಂದಾಜಿಗಿಂತ…
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಪ್ರಸಕ್ತ 2025ನೇ ಸಾಲಿನಲ್ಲಿ ಹಿಂದಿನ…
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ,ಭಾರತ ಸರ್ಕಾರವು, ವಿಶೇಷವಾಗಿ ಹಳ್ಳಿಗಳಲ್ಲಿರುವ…