ಹಳ್ಳಿಯಲ್ಲೇ ಸ್ವಂತ ಬಿಸಿನೆಸ್ ಆರಂಭಿಸಲು ಅವಕಾಶ! ಸರ್ಕಾರದ ಗ್ರಾಮ ಒನ್ ಫ್ರಾಂಚೈಸಿ ಕೇಂದ್ರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 15 ಕೊನೆಯ ದಿನ, ಅವಕಾಶ ಮಿಸ್ ಮಾಡ್ಕೋಬೇಡಿ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ‘ಗ್ರಾಮ ಒನ್’ (Grama One) ಯೋಜನೆಯಡಿ ಫ್ರಾಂಚೈಸಿಗಳನ್ನು ಆರಂಭಿಸಲು ಇ-ಆಡಳಿತ ನಿರ್ದೇಶನಾಲಯವು ಅರ್ಜಿಗಳನ್ನು ಆಹ್ವಾನಿಸಿದೆ. ಇದು ಗ್ರಾಮೀಣ ಭಾಗದ ಜನರಿಗೆ ಕೇವಲ ಸೇವೆಯಲ್ಲ, ವಿದ್ಯಾವಂತ ಯುವಕ-ಯುವತಿಯರಿಗೆ ತಮ್ಮೂರಿನಲ್ಲೇ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಸಿಕ್ಕಿರುವ ಅದ್ಭುತ ಅವಕಾಶವಾಗಿದೆ.
Thank you for reading this post, don't forget to subscribe!ಗ್ರಾಮ ಮಟ್ಟದಲ್ಲೇ ನಾಗರಿಕರಿಗೆ ಒಂದೇ ಸೂರಿನಡಿ ವಿವಿಧ ಸರ್ಕಾರಿ ಮತ್ತು ಖಾಸಗಿ ಸೇವೆಗಳನ್ನು ಒದಗಿಸಲು 2020-21ರ ಆಯವ್ಯಯದಲ್ಲಿ ಈ ಯೋಜನೆಯನ್ನು ಘೋಷಿಸಲಾಯಿತು. ಇಲ್ಲಿ ಬ್ಯಾಂಕಿಂಗ್ ಸೇವೆಗಳು, ಆರ್‌ಟಿಐ ಅರ್ಜಿಗಳು ಸೇರಿದಂತೆ ಸುಮಾರು 800ಕ್ಕೂ ಅಧಿಕ ಸೇವೆಗಳು ಲಭ್ಯವಿರುತ್ತವೆ. ಸಾರ್ವಜನಿಕರ ಅನುಕೂಲಕ್ಕಾಗಿ ಈ ಕೇಂದ್ರಗಳು ವಾರದ ಏಳು ದಿನಗಳೂ ಸಹ ಬೆಳಿಗ್ಗೆ 8:00 ರಿಂದ ರಾತ್ರಿ 8:00 ರವರೆಗೆ ನಿರಂತರವಾಗಿ ಕಾರ್ಯನಿರ್ವಹಿಸುತ್ತವೆ.
ಪ್ರಸ್ತುತ ಕೇವಲ ಕಲಬುರಗಿ ಮತ್ತು ಮೈಸೂರು ವಿಭಾಗದ ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಈ ಅವಕಾಶವಿದೆ:
ಮೈಸೂರು ವಿಭಾಗ: ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ ಹಾಗೂ ಕೊಡಗು ಜಿಲ್ಲೆಗಳು.
ಕಲಬುರಗಿ ವಿಭಾಗ: ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳು.
ಕೇಂದ್ರವನ್ನು ನಡೆಸಲು ಈ ಕೆಳಗಿನ ಸೌಲಭ್ಯಗಳು ಕಡ್ಡಾಯವಾಗಿ ಇರಬೇಕು:
1.ಅಧಿಕೃತ ವೆಬ್‌ಸೈಟ್
2.New Registration’ ಮೇಲೆ ಕ್ಲಿಕ್ ಮಾಡಿ ಮೊಬೈಲ್ ಮತ್ತು ಇಮೇಲ್ ಮೂಲಕ ನೋಂದಣಿ ಮಾಡಿ.
3.ನಿಮ್ಮ ವೈಯಕ್ತಿಕ ವಿವರ, ಶಿಕ್ಷಣ ಮತ್ತು ಕೇಂದ್ರ ಸ್ಥಾಪಿಸುವ ಗ್ರಾಮದ ಮಾಹಿತಿ ತುಂಬಿ.
4.ಗುರುತಿನ ಚೀಟಿ, ಶೈಕ್ಷಣಿಕ ದಾಖಲೆ, ಸ್ಥಳದ ಫೋಟೋ ಮತ್ತು ಪೊಲೀಸ್ ಪ್ರಮಾಣ ಪತ್ರ ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿ.
5.ರೂ. 100 ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿಸಿ.
ಕೊನೆಯಲ್ಲಿ ‘Submit’ ಬಟನ್ ಒತ್ತಿ, ‘ಅರ್ಜಿ ಉಲ್ಲೇಖ ಸಂಖ್ಯೆ’ಯನ್ನು ಸೇವ್ ಮಾಡಿಕೊಳ್ಳಿ.
ನೆನಪಿರಲಿ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15 ಜನವರಿ 2026, ಸಂಜೆ 6:00 ಗಂಟೆ.
ಗ್ರಾಮ ಒನ್ ಫ್ರಾಂಚೈಸಿ ಹೆಸರಿನಲ್ಲಿ ಯಾವುದೇ ವ್ಯಕ್ತಿಗೆ ನಗದು ಹಣ (Cash) ನೀಡಬೇಡಿ. ಬಿಎಲ್‌ಎಸ್ ಗ್ರೂಪ್ ತನ್ನ ಪ್ರತಿನಿಧಿಗಳಿಗೆ ನಗದು ಪಡೆಯಲು ಅಧಿಕಾರ ನೀಡಿಲ್ಲ. ಎಲ್ಲಾ ಪಾವತಿಗಳು ಆನ್‌ಲೈನ್ ಮೂಲಕವೇ ನಡೆಯಬೇಕು. ಯಾರಾದರೂ ಹಣ ಕೇಳಿದರೆ ತಕ್ಷಣ ದೂರು ನೀಡಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…