ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಯಡಿ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಇದುವರೆಗೆ ಒಟ್ಟು ₹52,416 ಕೋಟಿ ಹಣ ನೇರವಾಗಿ ಜಮೆ ಮಾಡಲಾಗಿದೆ. ಆದರೆ ಎಲ್ಲ ಫಲಾನುಭವಿಗಳಿಗೆ ಹಣ ಜಮೆಯಾಗಿಲ್ಲ. ಯಾರಿಗೆ ಗೃಹಲಕ್ಷ್ಮೀ ಹಣ ಜಮೆಯಾಗಿದೆ, ಯಾರಿಗೆ ಜಮೆಯಾಗಿಲ್ಲ, ಹಣ ಜಮೆಯಾಗದಿರುವ ಕಾರಣಗಳು ಯಾವುವು ಮತ್ತು ನಿಮ್ಮ ಸ್ಟೇಟಸ್ ಅನ್ನು ಹೇಗೆ ಚೆಕ್ ಮಾಡಬಹುದು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯಡಿ ಈವರೆಗೆ ರಾಜ್ಯಾದ್ಯಂತ 1,28,59,073 ಮಹಿಳೆಯರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ 1,24,12,543 ಫಲಾನುಭವಿಗಳಿಗೆ 52,416.17 ಕೋಟಿ ರೂಪಾಯಿಗಿಂತ ಹೆಚ್ಚು ಹಣವನ್ನು ಡಿಬಿಟಿ ಮೂಲಕ ಜಮೆ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ಕಾಂಗ್ರೆಸ್ ಸದಸ್ಯ ದಿನೇಶ ಗೂಳಿಗೌಡ ಅವರ ಪ್ರಶ್ನೆಗೆ ಉತ್ತರಿಸಿರುವ ಸಚಿವರು, ಗೃಹಲಕ್ಷ್ಮೀ ಯೋಜನೆಯಡಿ ನೋಂದಾಯಿಸಿಕೊಂಡ 1,24,12,543 ಫಲಾನುಭವಿಗಳಿಗೆ 22 ಕಂತುಗಳಲ್ಲಿ ಒಟ್ಟು 44 ಸಾವಿರ ರೂಪಾಯಿಗಳನ್ನು ಪಾವತಿ ಮಾಡಲಾಗಿದೆ. ನೋಂದಾಯಿಸಿದ ಫಲಾನುಭವಿಗಳಿ ಪೈಕಿ 1,44,056 ಮಂದಿ ಮರಣ ಹೊಂದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಗೃಹಲಕ್ಷ್ಮೀ ಯೋಜನೆಯ ಸೇರಿದಂತೆ ವಿವಿಧ ಯೋಜನೆಗಳ ಸೌಲಭ್ಯಗಳು ನಿಮಗೆ ಸಿಗುತ್ತಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
ಲಿಂಕ್ ಮೇಲೆ ಕ್ಲಿಕ್ ಮಾಡಿ. ನಂತರ ನಿಮಗೆ ಡಿಬಿಟಿ ಯಾಪ್ ಓಪನ್ ಆಗುತ್ತದೆ. ಅಲ್ಲಿ ನೀವು install ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಆಧಾರ್ ಸಂಖ್ಯೆ ಮತ್ತು ಮೊಬೈಲ್ ನಂಬರ್ ನಮೂದಿಸಬೇಕು. ಇದಾದ ನಂತರ ನೀವು ನೀಡಿದ ಮೊಬೈಲ್ ನಂಬರಿಗೆ ಓಟಿಪಿ ಬರುತ್ತದೆ. ಆ ಓಟಿಪಿಯನ್ನು ನಮೂದಿಸಿ ಲಾಗಿನ್ ಆಗಬೇಕು. ನಂತರ ನೀವು ಸರ್ಕಾರದ ವಿವಿಧ ಯೋಜನೆಗಳಿಂದ ನಿಮಗೆ ಹಣ ಜಮೆಯಾಗಿರುವ ಸ್ಥಿತಿಯನ್ನು (ಸ್ಟೇಟಸನ್ನು) ಚೆಕ್ ಮಾಡಬಹುದು.
ಗೃಹಲಕ್ಷ್ಮೀ ಯೋಜನೆಗೆ ದಾಖಲೆ ಸಂಖ್ಯೆಯಲ್ಲಿ ಮಹಿಳೆಯರು ನೋಂದಾಯಿಸಿಕೊಂಡಿರುವುದು ಸರ್ಕಾರದ ಜನಪರ ಬದ್ಧತೆಯನ್ನು ತೋರಿಸುತ್ತದೆ. ಸಣ್ಣ ಅವಧಿಯಲ್ಲಿಯೇ 1.24 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಹಣ ಸಂದಾಯ ಮಾಡಿರುವುದು ಪ್ರಶಂಸನೀಯ. ಈ ಯೋಜನೆಯಿಂದ ರಾಜ್ಯದ ಕುಟುಂಬಗಳ ಆರ್ಥಿಕ ಸ್ಥಿತಿ ಸುಧಾರಣೆಗೊಳ್ಳಲು ದೊಡ್ಡ ಮಟ್ಟದ ಕೊಡುಗೆ ಸಿಕ್ಕಿದೆ. ಡಿಬಿಟಿ ಮೂಲಕ ನೇರವಾಗಿ ಹಣ ವರ್ಗಾವಣೆಯಾಗುತ್ತಿರುವುದು ಯೋಜನೆಗೆ ಪಾರದರ್ಶಕತೆಯನ್ನು ತಂದಿದೆ ಎಂದು ದಿನೇಶ ಗೂಳಿಗೌಡ ಹೇಳಿದ್ದಾರೆ.
ಗೃಹಲಕ್ಷ್ಮೀ ಯೋಜನೆಯ ಹಣ ನಿಮ್ಮ ಖಾತೆಗೆ ಜಮೆಯಾಗುತ್ತಿಲ್ಲವಾದರೆ ನೀವು ಸ್ಥಳೀಯ ಸಿಡಿಪಿಒ ಕಚೇರಿಗೆ ಭೇಟಿ ನೀಡಬೇಕು. ಅಲ್ಲಿ ಹೋಗುವಾಗ ನಿಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ರೇಶನ್ ಕಾರ್ಡ್, ಆಧಾರ್ ಲಿಂಕ್ ಮಾಡಿದ ಮೊಬೈಲ್ ನಂಬರ್ ತೆಗದುಕೊಂಡು ಹೋಗಬೇಕಾಗುತ್ತದೆ. ಒಂದು ವೇಳೆ ಎನ್.ಪಿ.ಸಿ.ಐ ಫೇಲಿಯರ್ ಅಥವಾ ಇಕೆವೈಸಿ ಫೆಲಿಯರ್ ಆಗಿದ್ದರೆ ಮಾತ್ರ ನಿಮಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗುತ್ತಿಲ್ಲ. ಅಥವಾ ನೀವು ಗೃಹಲಕ್ಷ್ಮೀ ಯೋಜನೆಗೆ ಅರ್ಹತೆ ಪಡೆಯಿದಿದ್ದರೂ ಸಹ ನಿಮಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗುವ ಸಾಧ್ಯತೆ ತುಂಬಾ ಕಡಿಮೆ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ 08022279954, 8792662814 ಅಥವಾ 8792662816 ಗೆ ಕರೆ ಮಾಡಿ ತಿಳಿದುಕೊಳ್ಳಬಹುದು. ಇನ್ನೂ ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಸೇವಾ ಕೇಂದ್ರಕ್ಕೆ ಭೇಟಿ ವಿಚಾರಿಸಿಕೊಳ್ಳಬಹುದು.
ಗ್ರಹಲಕ್ಷ್ಮೀ ಯೋಜನೆಯ ಸೌಲಭ್ಯ ಪಡೆಯಬೇಕಾದರೆ ನೀವು ಆ ಯೋಜನೆಗೆ ಅರ್ಹತೆ ಪಡೆದಿದ್ದಿರೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬೇಕು. ಹೌದು, ಈ ಯೋಜನೆ ಸೌಲಭ್ಯ ಪಡೆಯಬೇಕಾದರೆ ನಿಮ್ಮಲ್ಲಿ ಬಿಪಿಎಲ್ ಕಾರ್ಡ್ ಇರಬೇಕು.ನಿಮ್ಮ ಕುಟುಂಬದಲ್ಲಿ ಯಾರಿಗೂ ಸರ್ಕಾರಿ ನೌಕರಿ ಇರಬಾರದು. ಇದರೊಂದಿಗೆ ನಿಮ್ಮ ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್ ಹಾಗೂ ರೇಶನ್ ಕಾರ್ಡ್ ನಲ್ಲಿ ಒಂದೇ ರೀತಿ ಹೆಸರು ಇರಬೇಕು. ಹೆಸರು ವ್ಯತ್ಯಾಸವಿದ್ದರೆ ಸರ್ಕಾರದ ಸೌಲಭ್ಯ ಜಮಯಾಗುವ ಸಾಧ್ಯತೆ ತುಂಬಾ ಕಡಿಮೆ ಇರುತ್ತದೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…