ಕರ್ನಾಟಕ ಸರ್ಕಾರದ ಗೃಹಲಕ್ಷ್ಮೀ ಯೋಜನೆಯ 29ನೇ ಕಂತಿನ ₹2000 ಹಣ ಬಿಡುಗಡೆ ಆಗಿದೆ. ನಿಮ್ಮ ಖಾತೆಗೆ ಜಮೆಯಾಯಿತೇ ಇಲ್ಲವೇ ಎಂದು ಆನ್‌ಲೈನ್‌ನಲ್ಲಿ ಹೇಗೆ ಚೆಕ್ ಮಾಡುವುದು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.
ಗೃಹಲಕ್ಷ್ಮೀ ಯೋಜನೆಯ 29ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಮುಂದಿನ ಎರಡು ಮೂರು ದಿನಗಳಲ್ಲಿ ಎಲ್ಲಾ ಫಲಾನುಭವಿ ಮಹಿಳೆಯರ ಖಾತೆಗೆ ಜಮೆ ಆಗಲಿದೆ.
ಚಿತ್ರದುರ್ಗ ಜಿಲ್ಲೆಯ ಒಟ್ಟು 3,88,341 ಫಲಾನುಭವಿಗಳಿಗೆ ಈ ಯೋಜನೆಯ ಲಾಭ ದೊರೆಯಲಿದ್ದು, ಈ ಕಂತಿಗಾಗಿ ಸರ್ಕಾರ ಒಟ್ಟು 77,66,82,000 ಬಿಡುಗಡೆ ಮಾಡಿದೆ. ಯೋಜನೆ ಆರಂಭವಾದ ನಂತರ ಮಹಿಳೆಯರ ಜೀವನದಲ್ಲಿ ಗಮನಾರ್ಹ ಬದಲಾವಣೆ ಕಂಡುಬಂದಿದೆ. ಅವರಿಗೆ ಮನೆಯಲ್ಲಿ ಗೌರವ ಹೆಚ್ಚಿದೆ. ಆರ್ಥಿಕ ಸಹಾಯದಿಂದ ಅವರು ತಮ್ಮ ಅಗತ್ಯಗಳನ್ನು ಸ್ವತಂತ್ರವಾಗಿ ಪೂರೈಸಿಕೊಳ್ಳುವ ಅವಕಾಶ ಪಡೆದಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದೇ ರೀತಿ ರಾಜ್ಯದ ಎಲ್ಲಾ ಜಿಲ್ಲೆಗಳ ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮೀ ಯೋಜನೆಯ 29ನೇ ಕಂತಿನ ಹಣ ಜಮೆ ಮಾಡಲಾಗುತ್ತಿದೆ. ಆಯಾ ಜಿಲ್ಲೆಯ ಫಲಾನುಭವಿಗಳು ಸಹ ತಮ್ಮ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಗೃಹಲಕ್ಷ್ಮೀ ಯೋಜನೆಯ 27ನೇ ಕಂತಿನ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವಾದರೆ ಕೂಡಲೇ ನೀವು 181 ನಂಬರಿಗೆ ಕರೆ ಮಾಡಬಹುದು.ಈ ಉಚಿತ ಸಹಾಯವಾಣಿ ನಂಬರಿಗೆ ಕರೆ ಮಾಡಿದರೆ ಸಾಕು ನಿಮ್ಮ ಖಾತೆಗೆ ಯಾವಾಗ ಜಮೆಯಾಗುತ್ತದೆ ಯಾವ ಕಾರಣಕ್ಕಾಗಿ ಹಣ ಜಮೆ ಮಾಡುವುದನ್ನು ತಡಿಹಿಡಿಯಲಾಗಿದೆ ಎಂಬುದನ್ನು ತಿಳಿದುಕೊಳ್ಳಬಹುದು
ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯ ಸ್ಟೇಟಸ್ ಚೆಕ್ ಮಾಡಲು ಈ
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆದ ನಿಮಗೆ ಡಿಬಿಟಿ ಯಾಪ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಬೇಕು. ನಂತರ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಸಂಖ್ಯೆ ಬರುತ್ತದೆ. ಈ ಓಟಿಪಿ ಸಂಖ್ಯೆನ್ನು ನಮೂದಿಸಿದ ನಂತರ ಪೇಮೆಂಟ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಗೃಹಲಕ್ಷ್ಮೀ ಬಟನ್ ಒತ್ತಿದರೆ ಸಾಕು ನಿಮ್ಮ ಖಾತೆಗೆ ಇಲ್ಲಿಯವರೆಗೆ ಗೃಹಲಕ್ಷ್ಮೀ ಯೋಜನೆಯಿಂದ ಎಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿ ಸಿಗುತ್ತದೆ. ಇದರೊಂದಿಗೆ ಗೃಹಲಕ್ಷ್ಮೀ ಹಣ ಜಮೆ ಮಾಡುವ ಪ್ರಕ್ರಿಯೆ ನಿಂತಿದ್ದರೆ ಯಾವ ಕಾರಣಕ್ಕಾಗಿ ತಡೆಹಿಡಿಯಲಾಗಿದೆ ಎಂಬ ಮಾಹಿತಿಯೂ ಕಾಣಿಸುತ್ತದೆ.
ಗೃಹಲಕ್ಷ್ಮೀ ಯೋಜನೆಯ ಹಣವನ್ನು ಜಿಲ್ಲಾವಾರು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ. ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಯ ಫಲಾನುಭವಿಗಳ ಖಾತೆಗೆ ಈಗಾಗಲೇ ಜಮೆ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಇದರೊಂದಿಗೆ ಹಾವೇರಿ, ಕೊಡಗು, ದಾವಣಗೆರೆ, ವಿಜಯಪುರ ಜಿಲ್ಲೆಗಳ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲಾಗುತ್ತಿದೆ. ಅತೀ ಶೀಘ್ರದಲ್ಲಿ ಎಲ್ಲಾ ಫಲಾನುಭವಿಗಳ ಖಾತಗೆ ಹಣ ಜಮೆ ಮಾಡಲಾಗುವದು.
ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್. ರೇಶನ್ ಕಾರ್ಡ್ ನಲ್ಲಿ ಹೆಸರು ಒಂದೇ ರೀತಿಯಾಗಿರಬೇಕು. ಹೆಸರು ಸ್ವಲ್ಪ ವ್ಯತ್ಯಾಸವಾಗಿದ್ದರೆ ಅಂತಹ ಮಹಿಳೆಯರ ಖಾತೆಗೆ ಜಮೆ ಮಾಡುವುದನ್ನು ತಡೆಹಿಡಿಯಲಾಗಿದೆ. ಹಾಗಾಗಿ ಕೆಲವರಿಗೆ ಜಮೆಯಾಗುತ್ತಿದೆ. ಇನ್ನೂ ಕೆಲವರಿಗೆ ಗೃಹಲಕ್ಷ್ಮೀ ಹಣ ಜಮೆಯಾಗುತ್ತಿಲ್ಲ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…