WhatsApp Group                             Join Now            
   
                    Telegram Group                             Join Now            
Spread the love

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಇದೀಗ ಹೊಸ ನಿಯಮಗಳು ಜಾರಿಯಾಗುತ್ತಿವೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, DBT ಪಾವತಿ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಹಾಗೂ ನಕಲಿ ಫಲಾನುಭವಿಗಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

Thank you for reading this post, don't forget to subscribe!
      
                    WhatsApp Group                             Join Now            
   
                    Telegram Group                             Join Now            

ಇದರ ಪರಿಣಾಮವಾಗಿ ಇನ್ಮುಂದೆ ಎಲ್ಲರಿಗೂ ಮಾಸಿಕ ₹2000 ಹಣ ಸಿಗುವುದಿಲ್ಲ ಎಂಬ ಆತಂಕವೂ ಎದುರಾಗಿದೆ.

ರಾಜ್ಯ ಸರ್ಕಾರ ಜಾರಿ ಮಾಡಿರುವ ಪಂಚ ಗ್ಯಾರಂಟಿಗಳಲ್ಲಿ ಒಂದು ಪ್ರಮುಖ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆ. ಇದರ ಅಡಿಯಲ್ಲಿ ಪ್ರತಿ ತಿಂಗಳು ಪ್ರತಿ ಮನೆ ಯಜಮಾನಿ ಅಂದರೆ ಮಹಿಳೆಯ ಖಾತೆಗೆ 2,000 ರೂಪಾಯಿ ಹಣ ಹಾಕಲಾಗುತ್ತದೆ

. ಆದರೆ ಅನೇಕರು ಸರ್ಕಾರದ ಕಣ್ಣಿಗೆ ಮಣ್ಣೆರೆಚಿ ಈ ಯೋಜನೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಆದ್ದರಿಂದ ಸರ್ಕಾರ ಇದೀಗ ಪರಿಷ್ಕರಣೆ ಮಾಡಿದ್ದು, ನಿಯಗಳನ್ನು ಪಾಲಿಸದ ಮಹಿಳೆಯರ ಖಾತೆಗೆ ಹಣ ಬರದಿರಬಹುದು. ಯೋಜನೆಯ ನಿಜವಾದ ಫಲಾನುಭವಿಗಳಿಗೆ ಮಾತ್ರ ಹಣ ತಲುಪಬೇಕು. ಸರ್ಕಾರದ ಹಣ ವ್ಯರ್ಥ ಆಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ.

ಸರ್ಕಾರದ ಮಟ್ಟದಲ್ಲಿ ಈ ಪ್ರಸ್ತಾವನೆಗೆ ಸಕಾರಾತ್ಮಕ ಸ್ಪಂದನೆ ಕೂಡ ದೊರೆತಿದೆ. ಮುಂದಿನ ದಿನಗಳಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಗೃಹಲಕ್ಷ್ಮಿಯ ಕುರಿತು ಈ ಹೊಸ ನಿಯಮ ಜಾರಿಗೆ ಬಂದರೆ ಯೋಜನೆಯ ಪಾರದರ್ಶಕತೆ ಹೆಚ್ಚಾಗಲಿದೆ. ಜೊತೆಗೆ ಹಣ ದುರುಪಯೋಗಕ್ಕೂ ಕಡಿವಾಣ ಬೀಳಲಿದೆ.

ಗೃಹಲಕ್ಷ್ಮಿ ಯೋಜನೆಯಡಿ ಪ್ರಸ್ತುತ ಸುಮಾರು 1.24 ಕೋಟಿ ಫಲಾನುಭವಿಗಳು ನೋಂದಾಯಿತರಾಗಿದ್ದಾರೆ. ಗೃಹಲಕ್ಷ್ಮಿ ಯೋಜನೆಗಾಗಿ ಸರ್ಕಾರ ಇದುವರೆಗೂ ₹57,300 ಕೋಟಿ ರೂಪಾಯಿಗೂ ಅಧಿಕ ಮೊತ್ತವನ್ನು ವೆಚ್ಚ ಮಾಡಿದೆ ಎಂದು ಹೇಳಿದೆ.

ಆದರೆ ಕೆಲ ಪ್ರಕರಣಗಳಲ್ಲಿ ಮರಣ ಹೊಂದಿರುವ ವ್ಯಕ್ತಿಗಳ ಹೆಸರಿನಲ್ಲೂ ಸಹ ಕುಟುಂಬಸ್ಥರು ಹಣ ಪಡೆಯುತ್ತಿದ್ದಾರೆ. ಮರಣ ಹೊಂದಿರುವ ವ್ಯಕ್ತಿಗಳ ಹೆಸರಿನಲ್ಲೂ ಹಣ ಜಮಾ ಆಗುತ್ತಿರುವುದು ಹಲವೆಡೆ ಬೆಳಕಿಗೆ ಬಂದಿದೆ. ಇಂತಹ ಅಕ್ರಮವನ್ನು ತಡೆಹಿಡಿಯುವುದು ಸರ್ಕಾರದ ಪ್ರಮುಖ ಗುರಿಯಾಗಿದೆ.

ನಿಜವಾದ ಹಾಗೂ ಅರ್ಹ ಫಲಾನುಭವಿಗಳಿಗೆ ಮಾತ್ರ ಹಣ ಸರ್ಕಾರದ ಈ ಯೋಜನೆಯ ಲಾಭ ತಲುಪಬೇಕು. ಜೊತೆಗೆ ಸರ್ಕಾರದ ಹಣ ಯಾವುದೇ ರೀತಿಯಲ್ಲಿ ಸೋರಿಕೆ ಆಗಬಾರದು ಎಂಬ ಉದ್ದೇಶದಿಂದ ಹೊಸ ಕ್ರಮಗಳನ್ನು ಜಾರಿಗೆ ತರಲಿದೆ. ಈ ಬಗ್ಗೆ ಉನ್ನತ ಮಟ್ಟದಲ್ಲಿ ಚರ್ಚೆ ಕೂಡ ನಡೆಯುತ್ತಿದೆ. ಮರಣ ಹೊಂದಿದವರ ಖಾತೆಗಳಿಗೆ ಹಣ ಜಮಾ ಆಗದಂತೆ ತಡೆಯಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಯೋಚಿಸುತ್ತಿದೆ.

ನಿವೃತ್ತ ಸರ್ಕಾರಿ ನೌಕರರು ಪಿಂಚಣಿ ಪಡೆಯಲು ಪ್ರತಿ ವರ್ಷ ಬ್ಯಾಂಕ್‌ಗಳಲ್ಲಿ ಹೇಗೆ ಜೀವಿತ ಪ್ರಮಾಣಪತ್ರ ಸಲ್ಲಿಸುತ್ತಾರೋ ಹಾಗೆಯೇ ಗೃಹಲಕ್ಷ್ಮಿ ಯೋಜನೆಯಲ್ಲಿಯೂ ಅರ್ಹ ಫಲಾನುಭವಿಗಳು ಪ್ರತಿವರ್ಷ ಜೀವಿತ ಪ್ರಮಾಣಪತ್ರ ಸಲ್ಲಿಸುವ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ. ಇದರಿಂದ ಯೋಜನೆಯ ದುರುಪಯೋಗವನ್ನು ತಡೆಯಬಹುದಾಗಿದೆ.

ಗೃಹಲಕ್ಷ್ಮಿ ಯೋಜನೆಯ 2 ಸಾವಿರ ರೂಪಾಯಿ ಯಾರೆಲ್ಲ ಪಡೆಯಬಹುದು?

1) ಪ್ರತಿ ಮನೆಯ ಯಜಮಾನಿ ಗೃಹಲಕ್ಷ್ಮಿ ಯೋಜನೆ ಅಡಿ 2 ಸಾವಿರ ರೂಪಾಯಿ ಪಡೆಯಬಹುದು
2)ರಾಜ್ಯದ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಹೊಂದಿರುವ ಕುಟುಂಬದ ಸ್ತ್ರೀಯರು ಅರ್ಜಿ ಸಲ್ಲಿಸಬಹುದು
3) ವಿವಾಹಿತ ಮಹಿಳೆಯರು, ವಿಚ್ಛೇದಿತ ಮಹಿಳೆಯರು ಹಾಗೂ ನಿರ್ಗತಿಕ ಮಹಿಳೆಯರು ಅರ್ಜಿ ಸಲ್ಲಿಸಬಹುದು.
4) ಲೈಂ**ಕ ಅಲ್ಪಸಂಖ್ಯಾತರೂ ಕೂಡ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
5) ಆಧಾರ್ ಕಾರ್ಡ್, ಬ್ಯಾಂಕ್ ಅಕೌಂಟ್ ಡೀಟೆಲ್ಸ್ ನೀಡಬೇಕು

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

1)ಆನ್ ಲೈನ್ ಅಥವಾ ಆಫ್‌ ಲೈನ್ ಎರಡೂ ವಿಧಾನದಿಂದ ಮಹಿಳೆಯರು ಅರ್ಜಿ ಸಲ್ಲಿಕೆ ಮಾಡಬಹುದು.
2)ಮನೆಯಲ್ಲಿ ಅತ್ತೆ ಅಥವಾ ಸೊಸೆ ಇಬ್ಬರಲ್ಲಿ ಒಬ್ಬರು ಮಾತ್ರ ಅರ್ಜಿ ಸಲ್ಲಿಸಬೇಕು.
3)ಅರ್ಜಿ ಸಲ್ಲಿಸುವ ಮನೆ ಯಜಮಾನಿ ಕೆಲವು ಅಗತ್ಯ ಮಾಹಿತಿಗಳನ್ನು ಕಡ್ಡಾಯವಾಗಿ ನೀಡಬೇಕು.
4)ಆಧಾರ್ ಕಾರ್ಡ್, ಬ್ಯಾಂಕ್ ಅಕೌಂಟ್ ನಂಬರ್, ಬ್ಯಾಂಕ್ ಪಾಸ್‌ಬುಕ್‌ಗಳನ್ನು ಅರ್ಜಿ ಜೊತೆ ಸಲ್ಲಿಸಬೇಕು
5)ಕುಟುಂಬದ ಎಪಿಎಲ್‌ ಅಥವಾ ಬಿಪಿಎಲ್‌ ಕಾರ್ಡ್ ಜೆರಾಕ್ಸ್ ಪ್ರತಿಯನ್ನು ಅರ್ಜಿ ಜೊತೆ ಲಗತ್ತಿಸಬೇಕು.
6) ಕರ್ನಾಟಕ ಗೃಹ ಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳು, ಅರ್ಜಿ ಪ್ರಕ್ರಿಯೆ ಮತ್ತು ಇತರ ಮಾಹಿತಿಯನ್ನು
7)ಕರ್ನಾಟಕ ಸರ್ಕಾರವು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ.

ಅರ್ಜಿ ಸಲ್ಲಿಕೆಗೆ ಯಾವೆಲ್ಲ ದಾಖಲೆ ಬೇಕು?

1)ಕರ್ನಾಟಕದಲ್ಲಿ ವಾಸಿಸುತ್ತಿರುವ ಬಗ್ಗೆ ನಿವಾಸದ ಪುರಾವೆ
2)ಅರ್ಜಿದಾರರ ಆಧಾರ್ ಕಾರ್ಡ್
3)ಅರ್ಜಿದಾರರ ಕುಟುಂಬದ ಪಡಿತರ ಚೀಟಿ.
4)ಜಾತಿ ಪ್ರಮಾಣ ಪತ್ರ. (ಅನ್ವಯವಾದಲ್ಲಿ)
5)ಆದಾಯ ಪ್ರಮಾಣಪತ್ರ.
6)ಮೊಬೈಲ್ ನಂಬರ್.
7)ಬ್ಯಾಂಕ್ ಖಾತೆ ವಿವರಗಳು, ಬ್ಯಾಂಕ್ ಪಾಸ್‌ ಬುಕ್

      
                    WhatsApp Group                             Join Now            
   
                    Telegram Group                             Join Now            

ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಕುಟುಂಬದ ಮಹಿಳಾ ಮುಖ್ಯಸ್ಥೆಯ ಬ್ಯಾಂಕ್ ಖಾತೆಗೆ ₹2000 ನೇರವಾಗಿ ಜಮೆಯಾಗುತ್ತಿದೆ. ರಾಜ್ಯದ ಕೋಟ್ಯಂತರ ಮಹಿಳೆಯರು ಇದರ ಪ್ರಯೋಜನ ಪಡೆಯುತ್ತಿದ್ದಾರೆ. ಆದರೆ ಇತ್ತೀಚೆಗೆ ಕೆಲವು ಫಲಾನುಭವಿಗಳ ಖಾತೆಗೆ ಹಣ ಜಮೆಯಾಗದಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ e-KYC, ಆಧಾರ್ ಲಿಂಕ್ ಹಾಗೂ ಬ್ಯಾಂಕ್ ಪರಿಶೀಲನೆ ಕಡ್ಡಾಯಗೊಳಿಸಲಾಗಿದೆ.

ಹೊಸ ನಿಯಮದ ಪ್ರಕಾರ ಫಲಾನುಭವಿಯ ಆಧಾರ್ ಸಂಖ್ಯೆ ಬ್ಯಾಂಕ್ ಖಾತೆಗೆ ಕಡ್ಡಾಯವಾಗಿ ಲಿಂಕ್ ಆಗಿರಬೇಕು. ಜೊತೆಗೆ DBT ಸಕ್ರಿಯವಾಗಿರಬೇಕು. ಬ್ಯಾಂಕ್ ಖಾತೆ, ಆಧಾರ್ ಹಾಗೂ ರೇಷನ್ ಕಾರ್ಡ್‌ನಲ್ಲಿ ಹೆಸರು, ಜನ್ಮ ದಿನಾಂಕ ಮತ್ತು ಇತರ ಮಾಹಿತಿ ಒಂದೇ ರೀತಿಯಲ್ಲಿ ಹೊಂದಿಕೆಯಾಗದಿದ್ದರೆ ಹಣ ತಾತ್ಕಾಲಿಕವಾಗಿ ನಿಲ್ಲಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ವೇಳೆ ಸರ್ಕಾರ ವಾರ್ಷಿಕ e-KYC ಪ್ರಕ್ರಿಯೆಯನ್ನೂ ಗಂಭೀರವಾಗಿ ಪರಿಗಣಿಸಿದೆ. ಮೃತ ಫಲಾನುಭವಿಗಳ ಹೆಸರಿನಲ್ಲಿ ಹಣ ಜಮೆಯಾಗುತ್ತಿರುವ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಜೀವಂತ ಪ್ರಮಾಣಪತ್ರ (Life Certificate) ಸಲ್ಲಿಕೆ ಕುರಿತ ಚರ್ಚೆಯೂ ನಡೆದಿದೆ. ಕೆಲವು ಜಿಲ್ಲೆಗಳಲ್ಲಿ ಪರಿಶೀಲನಾ ಕಾರ್ಯ ಈಗಾಗಲೇ ಆರಂಭವಾಗಿದೆ ಎಂದು ವರದಿಗಳು ಹೇಳಿವೆ.

ಯಾರು ಗೃಹಲಕ್ಷ್ಮಿ ಯೋಜನೆಗೆ ಅರ್ಹರು ಎಂಬುದರ ಮೇಲೂ ಸರ್ಕಾರ ಮತ್ತಷ್ಟು ಸ್ಪಷ್ಟನೆ ನೀಡಿದೆ. ರೇಷನ್ ಕಾರ್ಡ್‌ನಲ್ಲಿ ಕುಟುಂಬದ ಮುಖ್ಯಸ್ಥೆಯಾಗಿ ಮಹಿಳೆಯ ಹೆಸರು ಇರಬೇಕು. ಆದಾಯ ತೆರಿಗೆ ಪಾವತಿಸುವವರು ಅಥವಾ GST ಸಲ್ಲಿಸುವ ಕುಟುಂಬಗಳಿಗೆ ಯೋಜನೆಯ ಲಾಭ ಸಿಗುವುದಿಲ್ಲ. ಆದರೆ ಕುಟುಂಬದ ಇತರ ಸದಸ್ಯರು ತೆರಿಗೆ ಪಾವತಿಸುತ್ತಿದ್ದರೂ ಮಹಿಳೆ ಮುಖ್ಯಸ್ಥೆಯಾಗಿದ್ದರೆ ಕೆಲವು ಸಂದರ್ಭಗಳಲ್ಲಿ ಅವಕಾಶ ಇರುತ್ತದೆ.

ಹೀಗಾಗಿ ಗೃಹಲಕ್ಷ್ಮಿ ಹಣ ಇನ್ನೂ ಖಾತೆಗೆ ಜಮೆಯಾಗದ ಮಹಿಳೆಯರು ತಕ್ಷಣವೇ ಬ್ಯಾಂಕ್‌ಗೆ ಭೇಟಿ ನೀಡಿ NPCI mapping, Aadhaar seeding ಹಾಗೂ DBT ಸ್ಥಿತಿ ಪರಿಶೀಲಿಸಿಕೊಳ್ಳುವುದು ಸೂಕ್ತ. ಇಲ್ಲವಾದರೆ ಮುಂದಿನ ಕಂತಿನ ₹2000 ಹಣವೂ ಸ್ಥಗಿತಗೊಳ್ಳುವ ಸಾಧ್ಯತೆ ಇದೆ

ಓದುಗರಲ್ಲಿ ವಿನಂತಿ

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode

By

Leave a Reply

Your email address will not be published. Required fields are marked *