ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ನೀವು,ಹಿಂಗಾರು ಬೆಳೆ ವಿಮೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.ಯಾವ ಯಾವ ಬೆಳೆಗೆ ವಿಮೆ ಮಾಡಿಸಬಹುದು ಯಾವ ಬೆಳೆಗೆ ಯಾವುದು ಕೊನೆಯ ದಿನವಾಗಿದೆ ಎಂಬ ಮಾಹಿತಿ ಇಲ್ಲಿದೆ.
: ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ನೀವು,ಹಿಂಗಾರು ಬೆಳೆ ವಿಮೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.ಯಾವ ಯಾವ ಬೆಳೆಗೆ ವಿಮೆ ಮಾಡಿಸಬಹುದು ಯಾವ ಬೆಳೆಗೆ ಯಾವುದು ಕೊನೆಯ ದಿನವಾಗಿದೆ ಎಂಬ ಮಾಹಿತಿ ಇಲ್ಲಿದೆ.
2025ನೇ ಸಾಲಿನ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನಲ್ಲಿ ಕಡಲೆ, ಜೋಳ, ಗೋಧಿ, ಕುಸುಬೆ, ಭತ್ತ ಹಾಗೂ ನೆಲಗಡಲೆ (ಶೇಂಗಾ) ಬೆಳೆಗಳನ್ನು ಬೆಳೆದಿರುವ ರೈತರು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ತಮ್ಮ ಹತ್ತಿರದ ಬ್ಯಾಂಕ್‌ಗಳಲ್ಲಿ, ಗ್ರಾಮ್-ಒನ್ ಅಥವಾ ಸಿ.ಎಸ್.ಸಿ ಕೆಂದ್ರಗಳಲ್ಲಿ ಬೆಳೆವಿಮೆಗಾಗಿ ನೋಂದಣಿ ಮಾಡಿಸಿಕೊಳ್ಳಬೇಕೆಂದು ಕಲಬುರಗಿ ಜಂಟಿ ನಿರ್ದೇಶಕರಾದ ಸಮದ್ ಪಟೇಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳೆವಿಮೆಗಾಗಿ ರೈತರು ಬೆಳೆವಾರು ಪಾವತಿಸಬೇಕಾದ ವಂತಿಕೆ ವಿವರ ಹಾಗೂ ನೋಂದಣಿಯ ಕೊನೆಯ ದಿನಾಂಕದ ವಿವರ ಇಂತಿದೆ. ಹಿಂಗಾರು ಹಂಗಾಮಿನ ಕಡಲೆ (ಮಳೆಯಾಶ್ರಿತ) ಬೆಳೆಗೆ ಪ್ರತಿ ಎಕರೆಗೆ ರೈತರು 210.95 ರೂ. ವಂತಿಕೆ ಪಾವತಿಸಬೇಕು. ಬೆಳೆ ವಿಮೆ ನೋಂದಣಿಗೆ 2025ರ ಡಿಸೆಂಬರ್ 1 ಕೊನೆಯ ದಿನವಾಗಿದೆ.
ಹಿಂಗಾರು ಹಂಗಾಮಿಗೆ ಕಡಲೆ (ನೀರಾವರಿ) ಬೆಳೆಗೆ ಪ್ರತಿ ಎಕರೆಗೆ ರೈತರು 233.71 ರೂ. ವಂತಿಕೆ ಪಾವತಿಸಬೇಕು. ಬೆಳೆ ವಿಮೆ ನೋಂದಣಿಗೆ 2025ರ ಡಿಸೆಂಬರ್ 15 ರಂದು ಕೊನೆಯ ದಿನವಾಗಿದೆ. ಜೋಳ (ಮಳೆಯಾಶ್ರಿತ) ಬೆಳೆಗೆ ಪ್ರತಿ ಎಕರೆಗೆ ರೈತರು 232.20 ರೂ. ವಂತಿಗೆ ಪಾವತಿಸಬೇಕು. ಜೋಳ (ನೀರಾವರಿ) ಬೆಳೆಗೆ ಪ್ರತಿ ಎಕರೆಗೆ ರೈತರು 274.79 ರೂ. ವಂತಿಕೆ ಪಾವತಿಸಬೇಕು. ಬೆಳೆ ವಿಮೆ ನೋಂದಣಿಗೆ 2025ರ ಡಿಸೆಂಬರ್ 1 ರಂದು ಕೊನೆಯ ದಿನವಾಗಿದೆ.
ಹಿಂಗಾರು ಹಂಗಾಮಿನ ಗೋಧಿ (ಮಳೆಯಾಶ್ರಿತ) ಬೆಳೆಗೆ ಪ್ರತಿ ಎಕರೆಗೆ 195.85 ರೂ. ರೈತರ ವಂತಿಕೆ ಪಾವಸತಿಬೇಕು. ಗೋಧಿ (ನೀರಾವರಿ) ಬೆಳೆಗೆ ಪ್ರತಿ ಎಕರೆಗೆ ರೈತರು 294.42 ರೂ. ವಂತಿಕೆ ಪಾವತಿಸಬೇಕು. ಬೆಳೆ ವಿಮೆ ನೋಂದಣಿಗೆ 2025ರ ಡಿಸೆಂಬರ್ 31 ಕೊನೆಯ ದಿನವಾಗಿದೆ. ಕುಸುಬೆ (ಮಳೆಯಾಶ್ರಿತ) ಬೆಳೆಗೆ ಪ್ರತಿ ಎಕರೆಗೆ ರೈತರು 188.19 ರೂ. ವಂತಿಕೆ ಪಾವತಿಸಬೇಕು. ಬೆಳೆ ವಿಮೆ ನೋಂದಣಿಗೆ 2025ರ ಡಿಸೆಂಬರ್ 1 ರಂದು ಕೊನೆಯ ದಿನವಾಗಿದೆ.
ಬೇಸಿಗೆ ಹಂಗಾಮಿನ ಭತ್ತ (ನೀರಾವರಿ) ಬೆಳೆಗೆ ಪ್ರತಿ ಎಕರೆಗೆ ರೈತರು 566.07 ರೂ. ವಂತಿಕೆ ಪಾವತಿಸಬೇಕು. ನೆಲಗಡಲೆ (ನೀರಾವರಿ) ಬೆಳೆಗೆ ಪ್ರತಿ ಎಕರೆಗೆ ರೈತರು 399.29 ರೂ. ವಂತಿಕೆ ಪಾವತಿಸಬೇಕು. ಬೆಳೆ ವಿಮೆ ನೋಂದಣಿಗೆ 2026 ಫೆಬ್ರವರಿ 27 ರಂದು ಕೊನೆಯ ದಿನವಾಗಿದೆ.
ಕಲಬುರಗಿ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನ ಬಿತ್ತನೆ ಕಾರ್ಯವು ಭರದಿಂದ ಸಾಗಿದ್ದು, ಬಿತ್ತನೆ ಪೂರ್ವ ದಿಂದ ಕೊಯ್ಲಿನ ನಂತರದವರೆಗೆ ಅನಿರೀಕ್ಷಿತ ನೈಸರ್ಗಿಕ ವಿಕೋಪಗಳಿಂದಾಗಿ ಬೆಳೆನಷ್ಟದಿಂದ ರೈತರನ್ನು ರಕ್ಷಿಸಲು ಮತ್ತು ಅತೀವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆಯಂತಹ ಪ್ರಕೃತಿ ವಿಕೋಪಗಳು ಹಾಗೂ ಯಾವುದೇ ಹಂತದಲ್ಲಿ ಬೆಳೆನಾಶವಾಗಬಹುದಾಗಿದ್ದು, ಆದ್ದರಿಂದ ರೈತರು ಬಿತ್ತನೆ ಕಾರ್ಯಕೈಗೊಳ್ಳುವುದಷ್ಟೇ ಅಲ್ಲದೆ, ಬಿತ್ತಿದ ಬೆಳೆಯ ಕ್ಷೇತ್ರವನ್ನು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ ವ್ಯಾಪ್ತಿಗೆ ನೊಂದಾಯಿಸುವುದು ಸಹ ಪ್ರಮುಖವಾಗಿದೆ
ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಸಂಬದಪಟ್ಟ ತಾಲೂಕಿನ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಲು ಕೋರಲಾಗಿದೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…
ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…