Categories: information

ಹಿಂಗಾರು ಬೆಳೆ ವಿಮೆಗೆ ರೈತರಿಂದ ಅರ್ಜಿ ಆಹ್ವಾನ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ನೀವು,ಹಿಂಗಾರು ಬೆಳೆ ವಿಮೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.ಯಾವ ಯಾವ ಬೆಳೆಗೆ ವಿಮೆ ಮಾಡಿಸಬಹುದು ಯಾವ ಬೆಳೆಗೆ ಯಾವುದು ಕೊನೆಯ ದಿನವಾಗಿದೆ ಎಂಬ ಮಾಹಿತಿ ಇಲ್ಲಿದೆ.

Spread the love

: ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ನೀವು,ಹಿಂಗಾರು ಬೆಳೆ ವಿಮೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.ಯಾವ ಯಾವ ಬೆಳೆಗೆ ವಿಮೆ ಮಾಡಿಸಬಹುದು ಯಾವ ಬೆಳೆಗೆ ಯಾವುದು ಕೊನೆಯ ದಿನವಾಗಿದೆ ಎಂಬ ಮಾಹಿತಿ ಇಲ್ಲಿದೆ.

2025ನೇ ಸಾಲಿನ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನಲ್ಲಿ ಕಡಲೆ, ಜೋಳ, ಗೋಧಿ, ಕುಸುಬೆ, ಭತ್ತ ಹಾಗೂ ನೆಲಗಡಲೆ (ಶೇಂಗಾ) ಬೆಳೆಗಳನ್ನು ಬೆಳೆದಿರುವ ರೈತರು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ತಮ್ಮ ಹತ್ತಿರದ  ಬ್ಯಾಂಕ್‌ಗಳಲ್ಲಿ, ಗ್ರಾಮ್-ಒನ್ ಅಥವಾ ಸಿ.ಎಸ್.ಸಿ ಕೆಂದ್ರಗಳಲ್ಲಿ ಬೆಳೆವಿಮೆಗಾಗಿ ನೋಂದಣಿ ಮಾಡಿಸಿಕೊಳ್ಳಬೇಕೆಂದು ಕಲಬುರಗಿ ಜಂಟಿ ನಿರ್ದೇಶಕರಾದ ಸಮದ್ ಪಟೇಲ್ ಅವರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Thank you for reading this post, don't forget to subscribe!

Rabi crop insurance application ಯಾವ ಯಾವ ಬೆಳೆಗೆ ವಿಮೆ ಮಾಡಿಸಬಹುದು

ಬೆಳೆವಿಮೆಗಾಗಿ ರೈತರು ಬೆಳೆವಾರು ಪಾವತಿಸಬೇಕಾದ ವಂತಿಕೆ ವಿವರ ಹಾಗೂ ನೋಂದಣಿಯ ಕೊನೆಯ ದಿನಾಂಕದ ವಿವರ ಇಂತಿದೆ. ಹಿಂಗಾರು ಹಂಗಾಮಿನ ಕಡಲೆ (ಮಳೆಯಾಶ್ರಿತ) ಬೆಳೆಗೆ ಪ್ರತಿ ಎಕರೆಗೆ ರೈತರು 210.95 ರೂ. ವಂತಿಕೆ ಪಾವತಿಸಬೇಕು. ಬೆಳೆ ವಿಮೆ ನೋಂದಣಿಗೆ 2025ರ ಡಿಸೆಂಬರ್ 1 ಕೊನೆಯ ದಿನವಾಗಿದೆ.

ಹಿಂಗಾರು ಹಂಗಾಮಿಗೆ ಕಡಲೆ (ನೀರಾವರಿ) ಬೆಳೆಗೆ ಪ್ರತಿ ಎಕರೆಗೆ ರೈತರು 233.71 ರೂ. ವಂತಿಕೆ ಪಾವತಿಸಬೇಕು. ಬೆಳೆ ವಿಮೆ ನೋಂದಣಿಗೆ 2025ರ ಡಿಸೆಂಬರ್ 15 ರಂದು ಕೊನೆಯ ದಿನವಾಗಿದೆ.  ಜೋಳ (ಮಳೆಯಾಶ್ರಿತ) ಬೆಳೆಗೆ ಪ್ರತಿ ಎಕರೆಗೆ ರೈತರು 232.20 ರೂ. ವಂತಿಗೆ ಪಾವತಿಸಬೇಕು.  ಜೋಳ (ನೀರಾವರಿ) ಬೆಳೆಗೆ ಪ್ರತಿ ಎಕರೆಗೆ ರೈತರು 274.79 ರೂ. ವಂತಿಕೆ ಪಾವತಿಸಬೇಕು. ಬೆಳೆ ವಿಮೆ ನೋಂದಣಿಗೆ 2025ರ ಡಿಸೆಂಬರ್ 1 ರಂದು ಕೊನೆಯ ದಿನವಾಗಿದೆ.

ಹಿಂಗಾರು ಹಂಗಾಮಿನ ಗೋಧಿ (ಮಳೆಯಾಶ್ರಿತ) ಬೆಳೆಗೆ ಪ್ರತಿ ಎಕರೆಗೆ 195.85 ರೂ. ರೈತರ ವಂತಿಕೆ ಪಾವಸತಿಬೇಕು. ಗೋಧಿ (ನೀರಾವರಿ) ಬೆಳೆಗೆ ಪ್ರತಿ ಎಕರೆಗೆ ರೈತರು 294.42 ರೂ. ವಂತಿಕೆ ಪಾವತಿಸಬೇಕು. ಬೆಳೆ ವಿಮೆ ನೋಂದಣಿಗೆ 2025ರ ಡಿಸೆಂಬರ್ 31 ಕೊನೆಯ ದಿನವಾಗಿದೆ.  ಕುಸುಬೆ (ಮಳೆಯಾಶ್ರಿತ) ಬೆಳೆಗೆ ಪ್ರತಿ ಎಕರೆಗೆ ರೈತರು 188.19 ರೂ. ವಂತಿಕೆ ಪಾವತಿಸಬೇಕು. ಬೆಳೆ ವಿಮೆ ನೋಂದಣಿಗೆ 2025ರ ಡಿಸೆಂಬರ್ 1 ರಂದು ಕೊನೆಯ ದಿನವಾಗಿದೆ.

ಬೇಸಿಗೆ ಹಂಗಾಮಿನ ಭತ್ತ (ನೀರಾವರಿ) ಬೆಳೆಗೆ ಪ್ರತಿ ಎಕರೆಗೆ  ರೈತರು 566.07 ರೂ. ವಂತಿಕೆ ಪಾವತಿಸಬೇಕು. ನೆಲಗಡಲೆ (ನೀರಾವರಿ) ಬೆಳೆಗೆ ಪ್ರತಿ ಎಕರೆಗೆ ರೈತರು 399.29 ರೂ. ವಂತಿಕೆ ಪಾವತಿಸಬೇಕು. ಬೆಳೆ ವಿಮೆ ನೋಂದಣಿಗೆ 2026 ಫೆಬ್ರವರಿ 27 ರಂದು ಕೊನೆಯ ದಿನವಾಗಿದೆ.

ಕಲಬುರಗಿ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನ ಬಿತ್ತನೆ ಕಾರ್ಯವು ಭರದಿಂದ ಸಾಗಿದ್ದು, ಬಿತ್ತನೆ ಪೂರ್ವ ದಿಂದ ಕೊಯ್ಲಿನ ನಂತರದವರೆಗೆ ಅನಿರೀಕ್ಷಿತ ನೈಸರ್ಗಿಕ ವಿಕೋಪಗಳಿಂದಾಗಿ ಬೆಳೆನಷ್ಟದಿಂದ ರೈತರನ್ನು ರಕ್ಷಿಸಲು ಮತ್ತು ಅತೀವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆಯಂತಹ ಪ್ರಕೃತಿ ವಿಕೋಪಗಳು ಹಾಗೂ ಯಾವುದೇ ಹಂತದಲ್ಲಿ ಬೆಳೆನಾಶವಾಗಬಹುದಾಗಿದ್ದು, ಆದ್ದರಿಂದ ರೈತರು ಬಿತ್ತನೆ ಕಾರ್ಯಕೈಗೊಳ್ಳುವುದಷ್ಟೇ ಅಲ್ಲದೆ, ಬಿತ್ತಿದ ಬೆಳೆಯ ಕ್ಷೇತ್ರವನ್ನು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ ವ್ಯಾಪ್ತಿಗೆ ನೊಂದಾಯಿಸುವುದು ಸಹ ಪ್ರಮುಖವಾಗಿದೆ

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಸಂಬದಪಟ್ಟ ತಾಲೂಕಿನ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಲು ಕೋರಲಾಗಿದೆ.

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago