ಇಂಡಿಯನ್ ಪ್ರೀಮಿಯರ್ ಲೀಗ್ನ ಪ್ಲೇಆಫ್ ರೇಸ್ ಇದೀಗ ರೋಚಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೂರು ತಂಡಗಳು ಪ್ಲೇಆಫ್‌ಗೆ ಲಗ್ಗೆ ಇಟ್ಟಿದ್ದರೆ, ಕೊನೆಯ ಒಂದು ಸ್ಥಾನಕ್ಕಾಗಿ ಬರೋಬ್ಬರಿ ಐದು ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಇದಾಗ್ಯೂ ಮೇ 24 ರಂದು ನಡೆಯಲಿರುವ ಪಂದ್ಯದ ಫಲಿತಾಂಶ 4 ತಂಡಗಳ ಭವಿಷ್ಯ ನಿರ್ಧರಿಸಲಿದೆ. (PC: IPL)
Thank you for reading this post, don't forget to subscribe!
ಮೇ 24 ರಂದು ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಗೆಲುವು ಸಾಧಿಸಿದರೆ ಒಟ್ಟು 16 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್ಗೇರಲಿದೆ. ಏಕೆಂದರೆ ಪ್ಲೇಆಫ್ ರೇಸ್ನಲ್ಲಿರುವ ಉಳಿದ ಯಾವುದೇ ತಂಡಗಳಿಗೆ 16 ಅಂಕಗಳನ್ನು ಗಳಿಸಲು ಅವಕಾಶವಿಲ್ಲ. (PC: IPL)

ಪಂಜಾಬ್ ಕಿಂಗ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ಮುಂದಿನ ಪಂದ್ಯಗಳನ್ನು ಗೆದ್ದರೆ ಒಟ್ಟು 15 ಅಂಕಗಳನ್ನು ಮಾತ್ರ ಪಡೆಯಲಿದೆ. ಅತ್ತ ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕೊನೆಯ ಮ್ಯಾಚ್ನಲ್ಲಿ ಜಯಿಸಿದರೆ ಒಟ್ಟು ಪಾಯಿಂಟ್ಸ್ 14 ಕ್ಕೇರಲಿದೆ. (PC: IPL)

ಆದರೆ ಈಗಾಗಲೇ 14 ಅಂಕಗಳನ್ನು ಹೊಂದಿರುವ ರಾಜಸ್ಥಾನ್ ರಾಯಲ್ಸ್ ತಂಡವು ಮೇ 24 ರಂದು ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದರೆ ಒಟ್ಟು ಅಂಕಗಳು 16 ಕ್ಕೇರಲಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಅಲಂಕರಿಸುವ ಮೂಲಕ ನೇರವಾಗಿ ಪ್ಲೇಆಫ್ಗೆ ಎಂಟ್ರಿ ಕೊಡಲಿದೆ. (PC: IPL)

ಹೀಗೆ ರಾಜಸ್ಥಾನ್ ರಾಯಲ್ಸ್ ತಂಡವು ಕೊನೆಯ ಪಂದ್ಯದಲ್ಲಿ ಜಯ ಸಾಧಿಸಿದರೆ, ಪ್ಲೇಆಫ್ ಸುತ್ತಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಸನ್‌ರೈಸರ್ಸ್ ಹೈದರಾಬಾದ್ (SRH) ಮತ್ತು ಗುಜರಾತ್ ಟೈಟಾನ್ಸ್ (GT) ತಂಡಗಳನ್ನು ಎದುರಿಸಲಿದೆ. ಅಂದರೆ ಈ ಮೂರು ತಂಡಗಳು ಈಗಾಗಲೇ ಪ್ಲೇಆಫ್ಗೆ ಲಗ್ಗೆಯಿಟ್ಟಿದ್ದು, ಇವರಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯ ಆಡುವವರು ಯಾರು? ಎಲಿಮಿನೇಟರ್ನಲ್ಲಿ ಕಣಕ್ಕಿಳಿಯುವವರು ಯಾರು ಎಂಬುದು ಮುಂದಿನ ಪಂದ್ಯಗಳ ಮೂಲಕ ನಿರ್ಧಾರವಾಗಲಿದೆ. (PC: IPL)

ಓದುಗರಲ್ಲಿ ವಿನಂತಿ
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode