IPL 2026ರಲ್ಲಿ ಪ್ಲೇಆಫ್ ರೇಸ್ ಭಾರೀ ರೋಚಕ ಹಂತ ತಲುಪಿದೆ. ಒಂದು ತಂಡದ ಗೆಲುವಿನಿಂದಲೇ ನಾಲ್ಕು ತಂಡಗಳ ಕನಸು ಭಂಗವಾಗುವ ಸ್ಥಿತಿ ನಿರ್ಮಾಣವಾಗಿದ್ದು, ಪಾಯಿಂಟ್ಸ್ ಟೇಬಲ್‌ನಲ್ಲಿ ದೊಡ್ಡ ಬದಲಾವಣೆ ಸಂಭವಿಸುವ ಸಾಧ್ಯತೆ ಇದೆ.
ಇಂಡಿಯನ್ ಪ್ರೀಮಿಯರ್ ಲೀಗ್ನ ಪ್ಲೇಆಫ್ ರೇಸ್ ಇದೀಗ ರೋಚಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೂರು ತಂಡಗಳು ಪ್ಲೇಆಫ್‌ಗೆ ಲಗ್ಗೆ ಇಟ್ಟಿದ್ದರೆ, ಕೊನೆಯ ಒಂದು ಸ್ಥಾನಕ್ಕಾಗಿ ಬರೋಬ್ಬರಿ ಐದು ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಇದಾಗ್ಯೂ ಮೇ 24 ರಂದು ನಡೆಯಲಿರುವ ಪಂದ್ಯದ ಫಲಿತಾಂಶ 4 ತಂಡಗಳ ಭವಿಷ್ಯ ನಿರ್ಧರಿಸಲಿದೆ. (PC: IPL)
Thank you for reading this post, don't forget to subscribe!ಮೇ 24 ರಂದು ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಗೆಲುವು ಸಾಧಿಸಿದರೆ ಒಟ್ಟು 16 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್ಗೇರಲಿದೆ. ಏಕೆಂದರೆ ಪ್ಲೇಆಫ್ ರೇಸ್ನಲ್ಲಿರುವ ಉಳಿದ ಯಾವುದೇ ತಂಡಗಳಿಗೆ 16 ಅಂಕಗಳನ್ನು ಗಳಿಸಲು ಅವಕಾಶವಿಲ್ಲ. (PC: IPL)
ಪಂಜಾಬ್ ಕಿಂಗ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ಮುಂದಿನ ಪಂದ್ಯಗಳನ್ನು ಗೆದ್ದರೆ ಒಟ್ಟು 15 ಅಂಕಗಳನ್ನು ಮಾತ್ರ ಪಡೆಯಲಿದೆ. ಅತ್ತ ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕೊನೆಯ ಮ್ಯಾಚ್ನಲ್ಲಿ ಜಯಿಸಿದರೆ ಒಟ್ಟು ಪಾಯಿಂಟ್ಸ್ 14 ಕ್ಕೇರಲಿದೆ. (PC: IPL)
ಆದರೆ ಈಗಾಗಲೇ 14 ಅಂಕಗಳನ್ನು ಹೊಂದಿರುವ ರಾಜಸ್ಥಾನ್ ರಾಯಲ್ಸ್ ತಂಡವು ಮೇ 24 ರಂದು ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದರೆ ಒಟ್ಟು ಅಂಕಗಳು 16 ಕ್ಕೇರಲಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಅಲಂಕರಿಸುವ ಮೂಲಕ ನೇರವಾಗಿ ಪ್ಲೇಆಫ್ಗೆ ಎಂಟ್ರಿ ಕೊಡಲಿದೆ. (PC: IPL)
ಹೀಗೆ ರಾಜಸ್ಥಾನ್ ರಾಯಲ್ಸ್ ತಂಡವು ಕೊನೆಯ ಪಂದ್ಯದಲ್ಲಿ ಜಯ ಸಾಧಿಸಿದರೆ, ಪ್ಲೇಆಫ್ ಸುತ್ತಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಸನ್‌ರೈಸರ್ಸ್ ಹೈದರಾಬಾದ್ (SRH) ಮತ್ತು ಗುಜರಾತ್ ಟೈಟಾನ್ಸ್ (GT) ತಂಡಗಳನ್ನು ಎದುರಿಸಲಿದೆ. ಅಂದರೆ ಈ ಮೂರು ತಂಡಗಳು ಈಗಾಗಲೇ ಪ್ಲೇಆಫ್ಗೆ ಲಗ್ಗೆಯಿಟ್ಟಿದ್ದು, ಇವರಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯ ಆಡುವವರು ಯಾರು? ಎಲಿಮಿನೇಟರ್ನಲ್ಲಿ ಕಣಕ್ಕಿಳಿಯುವವರು ಯಾರು ಎಂಬುದು ಮುಂದಿನ ಪಂದ್ಯಗಳ ಮೂಲಕ ನಿರ್ಧಾರವಾಗಲಿದೆ. (PC: IPL)
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…