WhatsApp Group                             Join Now            
   
                    Telegram Group                             Join Now            
Spread the love

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ,ಬಂಗಾಳ ಕೊಲ್ಲಿಯ ಕಡಿಮೆ ಒತ್ತಡದಿಂದ ನವೆಂಬರ್ 5ರಿಂದ 7ರವರೆಗೆ ಕರ್ನಾಟಕದ ಕರಾವಳಿ ಮತ್ತು ಉತ್ತರ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ, ರೈತರು ಮುಂಜಾಗ್ರತೆ ವಹಿಸಬೇಕು.

Thank you for reading this post, don't forget to subscribe!
      
                    WhatsApp Group                             Join Now            
   
                    Telegram Group                             Join Now            

ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತದಿಂದ ಕಡಿಮೆ ಒತ್ತಡದ ಪ್ರದೇಶ ರೂಪುಗೊಂಡಿದ್ದು, ನವೆಂಬರ್ 4ರ ನಂತರ ಕರಾವಳಿ ಪ್ರದೇಶಗಳಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ

ವಾಯಭಾರ ಕುಸಿತದ ಪ್ರಭಾವದಿಂದ ನವೆಂಬರ್ 5ರಿಂದ 7ರವರೆಗೆ ಕರಾವಳಿ ಪ್ರದೇಶಗಳಲ್ಲಿ ಮಧ್ಯಮದಿಂದ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಅವಧಿಯಲ್ಲಿ ಹವಾಮಾನದ ಮೇಲೆ ನಿಗಾ ವಹಿಸಲು ಸೂಚಿಸಲಾಗಿದೆ.

ಭಾನುವಾರ ಮತ್ತು ಸೋಮವಾರ ಕರಾವಳಿಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಹವಾಮಾನ ಹೆಚ್ಚಾಗಿ ಬಿಸಿಲು ಮತ್ತು ಆರ್ದ್ರತೆಯಿಂದ ಕೂಡಿತ್ತು. ಮಧ್ಯೆ ಮಧ್ಯೆ ಮೋಡ ಕವಿದ ವಾತಾವರಣವಿತ್ತು. ಉಡುಪಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಬಿಸಿಲು-ಮೋಡದ ನಡುವೆ ಹಗುರ ಮಳೆ ಸುರಿದಿದೆ.

ಕಳೆದ ಎರಡು ದಿನಗಳಿಂದ ಸ್ಪಷ್ಟ ಆಕಾಶವಿರುವುದರಿಂದ ಭತ್ತದ ಕೊಯ್ಲು ಜೋರಾಗಿ ನಡೆಯುತ್ತಿದೆ.ಆದರೆ, ಮತ್ತೆ ಮಳೆ ಆರಂಭವಾದರೆ ಕೊಯ್ಲು ಕಾರ್ಯಗಳು ಅಡಚಣೆಯಾಗುವ ಆತಂಕ ರೈತರಲ್ಲಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಇಂದಿನಿಂದ ರಾಜ್ಯದ ಹಲವೆಡೆ ಮಳೆಯಾಗಲಿದೆ.

ಮೂರು ದಿನಗಳ ಕಾಲ ಮಳೆಯ ಮುನ್ಸೂಚನೆಯಿದ್ದು, ನವೆಂಬರ್ 5 ಮತ್ತು 6ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ಎರಡು ದಿನಗಳ ಕಾಲ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ

      
                    WhatsApp Group                             Join Now            
   
                    Telegram Group                             Join Now            

ಉತ್ತರ ಕರ್ನಾಟಕದ ಬೀದರ್, ಕಲ್ಬುರ್ಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆಯಿದೆ.

ಒಟ್ಟಾರೆಯಾಗಿ, ಬಂಗಾಳ ಕೊಲ್ಲಿಯ ಕಡಿಮೆ ಒತ್ತಡದ ಪ್ರಭಾವ ರಾಜ್ಯಾದ್ಯಂತ ಕಾಣಿಸಿಕೊಳ್ಳಲಿದ್ದು, ರೈತರು ಮತ್ತು ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಮಳೆಯ ತೀವ್ರತೆಯನ್ನು ಗಮನಿಸಿ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode=ac_t

By

Leave a Reply

Your email address will not be published. Required fields are marked *