Categories: information

ಇಂದಿನಿಂದ ಏಳು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಇಲ್ಲಿದೆ ಮಾಹಿತಿ

ಕರ್ನಾಟಕದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಮುನ್ಸೂಚನೆ, ಮಳೆ ಎಚ್ಚರಿಕೆ ಮತ್ತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

Spread the love

ಬಿಸಿಲಿನಿಂದ ಹೈರಾಣಾಗುತ್ತಿರುವ ಜನರಿಗೆ ಕಳೆದ ಎರಡು ದಿನಗಳಿಂದ ವಿವಿಧ ಜಿಲ್ಲೆಗಳಲ್ಲಿ ಮಳೆರಾಯ ತಂಪೆಯರೆಯುತ್ತಿದ್ದಾನೆ. ಹೌದು, ಮುಂಗಾರು ಮಳೆ ಕೈಕೊಟ್ಟಿದ್ದರಿಂದ ರೈತರಿಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಈಗ ಹಿಂಗಾರು ಹಂಗಾಮಿಗೆ ಅಲ್ಲಲ್ಲಿ ಮಳೆಯಾಗುತ್ತಿರುವುದರಿಂದ ರೈತ ಮೊಗದಲ್ಲಿ ಮಂದಹಾಸ ಮೂಡಿದೆ.

ಇಂದಿನಿಂದ ಮುಂದಿನ 7 ದಿನಗಳ ವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಗಾಲಿದೆ. ಕೆಲವು ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಇನ್ನೂ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂಬುದರ ಮಾಹಿತಿ ಇಲ್ಲಿದೆ.

Thank you for reading this post, don't forget to subscribe!

ಕರಾವಳಿ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 18 ರಿಂದ ಅಕ್ಟೋಬರ್ 24 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕೆಲವು ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರ, ಬೆಂಗಳೂರು ದಕ್ಷಿಣ, ಹಾಸನ, ಮಂಡ್ಯ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ

ಅಕ್ಟೋಬರ್ 19 ರಂದು ಉತ್ತರ ಕನ್ನಡ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಹಾಸನ, ಚಿತ್ರದುರರ್ಗ, ಕೊಡಗು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತಭಾರಿ ಮಳೆಯಾಗಲಿದೆ. ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬಾಸಲಿದೆ. ಕೋಲಾರ, ಮಂಡ್ಯ, ಮೈಸೂರು, ಬೆಂಗಳೂರು ದಕ್ಷಿಣ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣದಿಂದ ಮಧ್ಯಮ ಮಳೆಯಾಗಲಿದೆ.

ಮಂಗಳವಾರ ಎಲ್ಲೆಲ್ಲಿ ಮಳೆಯಾಗಲಿದೆ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಅದೇ ರೀತಿ ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಅಕ್ಟೋಬರ್ 21 ರಂದು ಉಡುಪಿ ಉತ್ತರ ಕನ್ನಡ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಮಂಡ್ಯ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.

ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ಮಾಹಿತಿ ಸಿಗಲಿದೆ ಇದಾದ ನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

ನೀವು ಈ ಯಾಪ್ ಒಮ್ಮೆ ಮೊಬೈಲ್ ನಲ್ಲಿ ಇನಸ್ಟಾಲ್ ಮಾಡಿಕೊಂಡರೆ ಸಾಕು, ಮತ್ತೆ ಮತ್ತೆ ನೀವು ಮನೆಯಲ್ಲಿಯೇ ಕುಳಿತು ಮಳೆಯ ಮಾಹಿತಿ ಪಡೆಯಬಹುದು. ಇದಕ್ಕಾಗಿ ನೀವು ಯಾವ ಹಣವೂ ಖರ್ಚು ಮಾಡಬೇಕಿಲ್ಲ. ಹವಾಮಾನ ವರದಿ, ಗಾಳಿಯ ಬೀಸುವ ದಿಕ್ಕು, ಮಂದಿನ ಐದು ದಿನದ ಹವಾಮಾನ ಮಾಹಿತಿ  ಪಡೆಯಬಹುದು.

ಓದುಗರಲ್ಲಿ ವಿನಂತಿ

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇https://chat.whatsapp.com/FM1qVgdNtJm5m1M9SL0BHc?mode

Recent Posts

ಮಹಿಳೆಯರಿಗೆ ಗುಡ್ ನ್ಯೂಸ್ 33ನೇ ಕಂತಿನ ಗೃಹಲಕ್ಷ್ಮೀ ಹಣ ಬಿಡುಗಡೆ ಇಲ್ಲಿದೆ ಮಾಹಿತಿ

ಕರ್ನಾಟಕದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣದ ಕುರಿತು ಮಹತ್ವದ ಮಾಹಿತಿ ಇಲ್ಲಿದೆ. ಹಣ ಬಿಡುಗಡೆ ಆಗಿದೆಯೇ, ನಿಮ್ಮ…

57 years ago

*ಅಕ್ಟೋಬರ್ 15ರಿಂದ ಮಳೆ ಚುರುಕು*: ಬೆಳಗಾವಿ ಸೇರಿ ಉತ್ತರ ಕರ್ನಾಟಕದಲ್ಲೂ ವರ್ಷಧಾರೆ ಸಾಧ್ಯತೆ*

ಅಕ್ಟೋಬರ್ 15ರಿಂದ ಕರ್ನಾಟಕದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.…

57 years ago

ನಿಮ್ಮ ಬೆಳೆ ವಿಮೆ ಜಮೆ ಆಗಲು ಏನು ಮಾಡಬೇಕು? ಇಲ್ಲಿವೆ ಕೆಲವು ಸರಳ ಉಪಾಯಗಳು!

ನಿಮ್ಮ ಬೆಳೆ ವಿಮೆ ಹಣ ಇನ್ನೂ ಜಮೆಯಾಗಿಲ್ಲವೇ? ಬೆಳೆ ವಿಮೆ ಪಡೆಯಲು ರೈತರು ಯಾವ ಕ್ರಮಗಳನ್ನು ಅನುಸರಿಸಬೇಕು, ಅರ್ಜಿಯ ಸ್ಥಿತಿಯನ್ನು…

57 years ago

Karnataka Rain: ವಾಯುಭಾರ ಕುಸಿತ, ಮುಂದಿನ 4 ದಿನ ಭಾರೀ ಮಳೆ ಎಚ್ಚರಿಕೆ! ಕೆಲವೆಡೆ ಒಣ ಹವೆ

Karnataka Rain Alert: ರಾಜ್ಯದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 4 ದಿನಗಳ ಮಳೆಯ ಮುನ್ಸೂಚನೆ ಕುರಿತು ಹವಾಮಾನ ಇಲಾಖೆ…

57 years ago

ಶಾರುಖ್ ಖಾನ್ ಜೈಲು ಸೇರಿದ್ರು.. ನಾನಾ ಪಾಟೇಕರ್ ಬಿಡಿಸಿಕೊಂಡು ಬಂದಿದ್ರು; ಈ ಘಟನೆ ಹಲವರಿಗೆ ಗೊತ್ತಿಲ್ಲ! ಇಲ್ಲಿದೆ  ಸಂಪೂರ್ಣ ಮಾಹಿತಿ!

ಬಾಲಿವುಡ್ ನಟ ಶಾರುಖ್ ಖಾನ್ ಜೈಲು ಸೇರಿದ್ದರು, ಅವರನ್ನು ನಟ ನಾನಾ ಪಾಟೇಕರ್ ಬಿಡಿಸಿಕೊಂಡು ಬಂದಿದ್ದರು ಎಂಬ ಕುತೂಹಲಕಾರಿ ವಿಚಾರ…

57 years ago

RRB Recruitment 2026: ಪದವೀಧರರಿಗೆ ಭರ್ಜರಿ ಗುಡ್‌ನ್ಯೂಸ್‌; 3,548 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ರೈಲ್ವೆ ನೇಮಕಾತಿ ಮಂಡಳಿ

RRB Recruitment 2026: ಪದವೀಧರರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಉತ್ತಮ ಅವಕಾಶ! ರೈಲ್ವೆ ನೇಮಕಾತಿ ಮಂಡಳಿಯು 3,548 ಹುದ್ದೆಗಳ…

57 years ago