WhatsApp Group                             Join Now            
   
                    Telegram Group                             Join Now            
Spread the love

ರಾಜ್ಯದಲ್ಲಿ ಮತ್ತೆ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಹಾಗೂ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಕೆಲವೆಡೆ ಬೆಳಗಿನ ವೇಳೆಯಲ್ಲಿ ಮಂಜು ಆವರಿಸುವ ಸಾಧ್ಯತೆ ಇದೆ. ಮುಂದಿನ 4 ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದೆ.

Thank you for reading this post, don't forget to subscribe!
      
                    WhatsApp Group                             Join Now            
   
                    Telegram Group                             Join Now            

ಇತ್ತ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಕಂಡುಬರುವ ಸಾಧ್ಯತೆಯಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ:

ಹೌದು, ಬಂಗಾಳಕೊಲ್ಲಿಯಲ್ಲಿ ಉಂಟಾಗುತ್ತಿರುವ ವಾಯುಭಾರ ಕುಸಿತ ಹಾಗೂ ಹಿಂಗಾರು ಮಳೆಯ ಆರಂಭದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ. ಈ ಸಮಯದಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಟ್ಟು 11 ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದ್ದು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


ಬೆಂಗಳೂರು ಹವಾಮಾನ ವರದಿ:

ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಅಕ್ಟೋಬರ್‌ 14ರ ವರೆಗೆ ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲದೇ ಸಂಜೆಯ ವೇಳೆಗೆ ನಗರದ ಕೆಲವೆಡೆ ಮಳೆಯಾಗುವ ಸೂಚನೆಯಿದ್ದು, ಗರಿಷ್ಠ ತಾಪಮಾನವು 30°C ಹಾಗೂ ಕನಿಷ್ಠ ತಾಪಮಾನವು 20°C ಆಸುಪಾಸಿನಲ್ಲಿರಲಿದೆ. ಅಂದರೆ ತಾಪಮಾನದಲ್ಲಿ ಕೊಂಚ ಇಳಿಕೆಯಾಗಲಿದೆ. ಆದರೆ ಅಕ್ಟೋಬರ್ 15ರಂದು ಹವಾಮಾನದಲ್ಲಿ ಗಮನಾರ್ಹ ಬದಲಾವಣೆಯಾಗಲಿದ್ದು, ಸಾಮಾನ್ಯವಾಗಿ ಮೋಡ ಆಕಾಶವಿರಲಿದೆ. ಅಲ್ಲದೇ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ನಾಳೆ ಎಲ್ಲೆಲ್ಲಿ ಮಳೆ?

ಇನ್ನು, ಬಂಗಾಳಕೊಲ್ಲಿಯಲ್ಲಿ ಉಂಟಾಗುತ್ತಿರುವ ವಾಯುಭಾರ ಕುಸಿತ ಹಾಗೂ ಹಿಂಗಾರು ಮಳೆ ಆರಂಭವಾಗಿರುವ ಹಿನ್ನಲೆ ನಾಳೆ (ಅಕ್ಟೋಬರ್‌ 12) ಕರಾವಳಿ ಜಿಲ್ಲೆಗಳಲ್ಲಿ ಹವಾಮಾನವು ಮಿಶ್ರ ಪ್ರತಿಕ್ರಿಯೆಯನ್ನು ಹೊಂದಿರಲಿದೆ. ಇದರಲ್ಲಿ ದಕ್ಷಿಣ ಕನ್ನಡದ ಒಂದೆರಡು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ. ಒಟ್ಟಾರೆಯಾಗಿ ನಾಳೆ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ. ಆದರೆ, ದಕ್ಷಿಣ ಒಳನಾಡಿನಲ್ಲಿ ಮುಂದಿನ ವಾರಾಂತ್ಯದಲ್ಲಿ ಮಳೆಯಾಗುವ ಲಕ್ಷಣಗಳು ವ್ಯಾಪಕವಾಗಿ ಕಂಡುಬಂದಿವೆ.

ಬಿಸಿಲು ಮಳೆ ಆಟ:

      
                    WhatsApp Group                             Join Now            
   
                    Telegram Group                             Join Now            

ಇನ್ನು, ಒಳನಾಡಿನ ಬಹುತೇಕ ಭಾಗಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದ್ದು, ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಸೂಚನೆ ನಡುವೆ ಬೆಳಗಿನಿಂದ ಬಹುತೇಕ ಸಂಜೆಯವರೆಗೆ ಬಿಸಿ ಮತ್ತು ಆರ್ದ್ರತೆಯಿಂದ ಕೂಡಿದ ವಾತಾವರಣವು ಇರಲಿದೆ. ಉಡುಪಿಯಲ್ಲಿ ಒಣ ಹವಾಮಾನದ ನಡುವೆ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಕನ್ನಡದಂತೆ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವಾಮಾನದ ನಡುವೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯಿದೆ

ಈ ಜಿಲ್ಲೆಗಳಲಿ ಒಣ ಹವೆ:

ಇತ್ತ, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಆರಂಭಿಕ ದಿನಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸಿದ್ದು, ಬಹುಪಾಲು ದಿನಗಳಲ್ಲಿ ಒಣಹವೆ ಇರಲಿದೆ. ಶಾಕಿಂಗ್‌ ಎಂದರೆ ಬಾಗಲಕೋಟೆ ಮತ್ತು ಬೀದರ್ ನಲ್ಲಿ ಮುಂದಿನ ಎಲ್ಲಾ 7 ದಿನಗಳ ಕಾಲ ಸಂಪೂರ್ಣವಾಗಿ ಒಣ ಹವಾಮಾನ (DRY) ಇರಲಿದೆ. ಆದರೆ ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಮೊದಲ 5 ದಿನಗಳ ಕಾಲ ಒಣ ಹವಾಮಾನವಿರಲಿದ್ದು, ಗದಗ, ಕೊಪ್ಪಳ ಮತ್ತು ರಾಯಚೂರಲ್ಲಿ ಭಾರೀ ಬಿಸಲು ಇರಲಿದೆ. ಕಲಬುರಗಿ, ವಿಜಯಪುರ ಮತ್ತು ಯಾದಗಿರಿಯಲ್ಲಿ ಸಹ ಬಹುತೇಕ ಇದೇ ರೀತಿಯ ವಾತಾವರಣವಿದ್ದು, ಆರಂಭಿಕ ಐದು ದಿನಗಳಲ್ಲಿ ಮಳೆಯಿರುವುದಿಲ್ಲ.

ಓದುಗರಲ್ಲಿ ವಿನಂತಿ

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇https://chat.whatsapp.com/FM1qVgdNtJm5m1M9SL0BHc?mode

By

Leave a Reply

Your email address will not be published. Required fields are marked *