ಅಕ್ಟೋಬರ್ 15ರಿಂದ ಕರ್ನಾಟಕದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ಹವಾಮಾನ ಮುನ್ಸೂಚನೆ, ಮಳೆ ಎಚ್ಚರಿಕೆ ಹಾಗೂ ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರಾಜ್ಯಾದ್ಯಂತ ಅಕ್ಟೋಬರ್ 14ರವರೆಗೆ ಬಹುತೇಕ ಒಣಹವೆ ಮುಂದುವರಿಯಲಿದ್ದು, ಅಕ್ಟೋಬರ್ 15ರಿಂದ ಹವಾಮಾನದಲ್ಲಿ ಬದಲಾವಣೆ ಕಂಡುಬರುವ ಸಾಧ್ಯತೆಯಿದೆ.
Thank you for reading this post, don't forget to subscribe!ಕರಾವಳಿ, ಮಲೆನಾಡು ಹಾಗೂ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಅಕ್ಟೋಬರ್ 15ರಿಂದ 17ರವರೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 14ರವರೆಗೆ ಒಣಹವೆ ಮುಂದುವರಿಯಲಿದೆ. ಅಕ್ಟೋಬರ್ 15ರಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ 16 ಮತ್ತು 17ರಂದು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಿಗೆ ಮಳೆ ವಿಸ್ತರಿಸುವ ನಿರೀಕ್ಷೆಯಿದೆ.
ಉತ್ತರ ಒಳನಾಡಿನ ಜಿಲ್ಲೆಗಳ ಪೈಕಿ ಅಕ್ಟೋಬರ್ 15ರಂದು ಗದಗ, ಕೊಪ್ಪಳ ಹಾಗೂ ರಾಯಚೂರಿನ ಕೆಲವೆಡೆ ಲಘು ಮಳೆಯಾಗಬಹುದು.
ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಆದರೆ ಅಕ್ಟೋಬರ್ 16 ಮತ್ತು 17ರಂದು ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇https://chat.whatsapp.com/FM1qVgdNtJm5m1M9SL0BHc?mode
ಪ್ರೇಮದ ಊರಲಿ ಸಿನಿಮಾ ಇಲ್ಲಿಯವರೆಗೆ ಭಾರತದಲ್ಲಿ ಎಷ್ಟು ಕಲೆಕ್ಷನ್ ಮಾಡಿದೆ ಎಂಬುದರ ಬಗ್ಗೆ ಈ ಆರ್ಟಿಕಲ್ ನಲ್ಲಿ ಮಾಹಿತಿ ಕೊಟ್ಟಿದ್ದೇವೆ.…
ಪಿಎಂ ಕಿಸಾನ್ ಯೋಜನೆಯ 24ನೇ ಕಂತಿನ ಹಣ ಅಕ್ಟೋಬರ್ 30ರಂದು ಬಿಡುಗಡೆಯಾಗಲಿದೆಯೇ? ರೈತರ ಖಾತೆಗೆ ₹2,000 ಜಮೆಯಾಗುವ ಮಾಹಿತಿ, ಪಿಎಂ…
ಕರ್ನಾಟಕದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಮುನ್ಸೂಚನೆ,…
ಕರ್ನಾಟಕದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣದ ಕುರಿತು ಮಹತ್ವದ ಮಾಹಿತಿ ಇಲ್ಲಿದೆ. ಹಣ ಬಿಡುಗಡೆ ಆಗಿದೆಯೇ, ನಿಮ್ಮ…
ನಿಮ್ಮ ಬೆಳೆ ವಿಮೆ ಹಣ ಇನ್ನೂ ಜಮೆಯಾಗಿಲ್ಲವೇ? ಬೆಳೆ ವಿಮೆ ಪಡೆಯಲು ರೈತರು ಯಾವ ಕ್ರಮಗಳನ್ನು ಅನುಸರಿಸಬೇಕು, ಅರ್ಜಿಯ ಸ್ಥಿತಿಯನ್ನು…
Karnataka Rain Alert: ರಾಜ್ಯದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 4 ದಿನಗಳ ಮಳೆಯ ಮುನ್ಸೂಚನೆ ಕುರಿತು ಹವಾಮಾನ ಇಲಾಖೆ…