Categories: information

Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಒಂದು ವಾರ ರಣಭೀಕರ ಮಳೆ ಮುನ್ಸೂಚನೆ

ಈಗಾಗಲೇ ಭಾರೀ ಮಳೆಯಿಂದ ರಾಜ್ಯದಲ್ಲಿ ಕೆರೆ-ಕಟ್ಟೆ, ನದಿಗಳು, ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಮತ್ತೊಂದೆಡೆ ಅಬ್ಬರದ ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ದೊಡ್ಡ-ದೊಡ್ಡ ಅವಾಂತರಗಳೇ ಸಂಭವಿಸಿವೆ. ಇದೀಗ ಮತ್ತೆ ಕಳೆದ ಕೆಲ ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಮಳೆ ಮತ್ತೆ ಚುರುಕು ಪಡೆದಿದೆ. ಹಾಗೆಯೇ ಮುಂದಿನ ಹಲವು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ನಾಡಿನ ಸಮಸ್ತ ಜನತೆಗೆ ನಮಸ್ಕಾರ, ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲು ಹೊರಟಿರುವ ವಿಷಯವೆಂದರೆ ,ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಮತ್ತೆ ಮುಂದುವರೆದಿದೆ. ಹಾಗೆಯೇ ಈ ಭಾಗಗಳಲ್ಲಿ ಮುಂದಿನ ಒಂದು ವಾರ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಮಳೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

Thank you for reading this post, don't forget to subscribe!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಅಕ್ಟೋಬರ್ 27) ಬೆಳಗ್ಗೆ ವಾತಾವರಣ ಇದ್ದು, ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ನಗರದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

ಈಗಾಗಲೇ ಭಾರೀ ಮಳೆಯಿಂದ ರಾಜ್ಯದಲ್ಲಿ ಕೆರೆ-ಕಟ್ಟೆ, ನದಿಗಳು, ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಮತ್ತೊಂದೆಡೆ ಅಬ್ಬರದ ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ದೊಡ್ಡ-ದೊಡ್ಡ ಅವಾಂತರಗಳೇ ಸಂಭವಿಸಿವೆ. ಇದೀಗ ಮತ್ತೆ ಕಳೆದ ಕೆಲ ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಮಳೆ ಮತ್ತೆ ಚುರುಕು ಪಡೆದಿದೆ. ಹಾಗೆಯೇ ಮುಂದಿನ ಹಲವು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿ ರಾಜ್ಯದಲ್ಲಿ ಮುಂದಿನ ವಾರ ಭಾರೀ ಮಳೆ ಆಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಿಗೆ ಇಂದು (ಅಕ್ಟೋಬರ್ 26) ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಮಲೆನಾಡು ಜಿಲ್ಲೆಗಳು ಉತ್ತರ ಒಳನಾಡು, ದಕ್ಚಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಭಾರೀ ಮಳೆ ಹಿನ್ನೆಲೆ ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಚಿಕ್ಕಮಗಳೂರು, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇನ್ನು ಅಕ್ಟೋಬರ್ 26 ರಂದು ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ, ಮುಂದಿನ ಒಂದು ವಾರ ಮಲೆನಾಡು ಜಿಲ್ಲೆಗಳು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ. ಈಗಾಗಲೇ ಕಳೆದ ಕೆಲವು ದಿನಗಳಿಂದ ಕೆಲವಡೆ ಸಾಧಾರಣ ಮಳೆಯಾದರೆ, ಇನ್ನೂ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ರಾಜ್ಯಕ್ಕೆ ವಾಡಿಕೆಯಂತೆ ಜೂನ್‌ ಆರಂಭದಲ್ಲೇ ಮುಂಗಾರು ಎಂಟ್ರಿ ಕೊಟ್ಟಿತ್ತು. ಭಾರೀ ಮಳೆಯಿಂದ ಜಲಮೂಲಗಳು ಭರ್ತಿಯಾಗಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಮತ್ತೊಂದಡೆ ಉತ್ತರ ಕರ್ನಾಟಕ ಹಲವು ಭಾಗಗಳಲ್ಲಿ ಅತೀವೃಷ್ಠಿಯಿಂದ ಬೆಳೆಗಳು ಹಾನಿಯಾಗಿರುವ ಬಗ್ಗೆ ವರದಿಯಾಗಿದೆ

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode

Recent Posts

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago