ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ನಾಳೆಯಿಂದ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ನಿಮಗೆ ಗೊತ್ತಾ? ಇಲ್ಲಿದೆ ಮಾಹಿತಿ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಗುರುವಾರ ಎರಡು ದಿನಗಳ ಕಾಲ ಹಗುರವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಮೈಸೂರು, ಮಂಡ್ಯ, ಕೊಡಗು ಹಾಗೂ ಚಾಮರಾಜನಗರ ಜಿಲ್ಲಗಳ ಒಂದೆರಡು ಸ್ಥಳಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಬಳ್ಳಾರಿ, ರಾಮನಗರ, ಕೋಲಾರ, ಹಾಸನ, ತುಮಕೂರು, ವಿಜಯಪುರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.
ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ
ಬೆಳೆ ವಿಮೆ ಪರಿಹಾರಕ್ಕೆ ಸರ್ಕಾರ ಆದೇಶ: ಶೀಘ್ರದಲ್ಲಿಯೆ ಈ ರೈತರ ಬ್ಯಾಂಕ್ ಖಾತೆಗೆ ಹಣ ಜಮೆ
ಪ್ರಸಕ್ತ 2025-26ನೇ ಸಾಲಿನಲ್ಲಿ ಕಳೆದ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಸತತವಾಗಿ ಸುರಿದ ಮಳೆಯಿಂದಾಗಿ ಹಾನಿಯಾದ ಪ್ರದೇಶಗಳ ಪೈಕಿ ಬೆಳೆ ವಿಮೆ ಮಾಡಿಸಿದ ರೈತರಿಗೆ ಮಧ್ಯಂತರ ಪರಿಹಾರ ಬಿಡುಗಡೆ ಸರ್ಕಾರ ಆದೇಶಿಸಿದ್ದು, ಅತೀ ಶೀಘ್ರದಲ್ಲಿ ರೈತರ ಬ್ಯಾಂಕ್ ಖಾತೆಗೆ ಪರಿಹಾರ ಹಣ ಜಮೆಯಾಗಲಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.
ಅತಿವೃಷ್ಠಿಯಿಂದ ಜಿಲ್ಲೆಯಲ್ಲಿ 11,727.5 ಹೆಕ್ಟೇರ್ ಹತ್ತಿ, 822.46 ಹೆಕ್ಟೇರ್ ಉಳ್ಳಾಗಡ್ಡಿ, 3,22,734 ಹೆಕ್ಟೇರ್ ತೊಗರಿ, 392.08 ಸೂರ್ಯಕಾಂತಿ ಹಾಗೂ 192.61 ಆರಿಶಿಣ ಸೇರಿದಂತೆ ಒಟ್ಟಾರೆ 3,35,868.7 ಹೆಕ್ಟೇರ್ ಪ್ರದೇಶದ ಬೆಳೆಗಳು ಹಾನಿಯಾಗಿದೆ ಎಂದು 2,68,699 ರೈತರಿಂದ ದೂರು ಸ್ವೀಕೃತವಾದ ಹಿನ್ನೆಲೆಯಲ್ಲಿ ಮಧ್ಯಂತರ ಪರಿಹಾರ ಬಿಡುಗಡೆಗೆ ಸಲ್ಲಿಸಲಾದ ಜಿಲ್ಲಾಡಳಿತ ಪ್ರಸ್ತಾವನೆಗೆ ಸರ್ಕಾರ ಅನುಮೋದನೆ ನೀಡಿದ್ದು, ಶೀಘ್ರದಲ್ಲಿಯೆ ಈ ರೈತರ ಖಾತೆಗೆ ಪರಿಹಾರ ಹಣ ಜಮೆಯಾಗಲಿದೆ.
ಇನ್ನುಳಿದಂತೆ ಉದ್ದು, ಹೆಸರು, ಸೋಯಾ ಅವರೆ ಹಾಗೂ ಇನ್ನಿತರ ಬೆಳಗಳಿಗೆ ಬೆಳೆ ಹಾನಿ ಕುರಿತು ದೂರು ನೀಡಿದ 22,385 ರೈತರಿಗೆ ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪದಡಿ ((Localized calamity) ಪರಿಹಾರ ಹಣ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ
ಓದುಗರಲ್ಲಿ ವಿನಂತಿ,
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇https://chat.whatsapp.com/FM1qVgdNtJm5m1M9SL0BHc?mode=ac_t